ETV Bharat / state

ಮಾಜಿ ಸಚಿವ ಜೀವರಾಜ್​ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ - ಮಾಜಿ ಸಚಿವ ಡಿ.ಎನ್.ಜೀವರಾಜ್

ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಮಾಜಿ ಸಚಿವ ಜೀವರಾಜ್​​ರನ್ನು ನೇಮಕಗೊಳಿಸಲಾಗಿದೆ..

ಮಾಜಿ ಸಚಿವ ಜೀವರಾಜ್
Former Minister Jeevaraj
author img

By

Published : Dec 18, 2020, 6:47 AM IST

ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವ ಡಿ ಎನ್ ಜೀವರಾಜ್​​ರನ್ನು ನೇಮಕ ಮಾಡಲು ಸಿಎಂ ಬಿ ಎಸ್ ಯಡಿಯೂರಪ್ಪನವರು ನಿರ್ದೇಶನ ನೀಡಿದ್ದಾರೆ.

ಜೀವರಾಜ್​​ಗೆ ದೂರವಾಣಿ ಕರೆ ಮಾಡಿದ ಸಿಎಂ, ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲು ನಿರ್ಧರಿಸಿದ್ದು, ಜವಾಬ್ದಾರಿ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ತಡರಾತ್ರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಡತಕ್ಕೆ ಇಂದು ಸಹಿ ಬೀಳಲಿದ್ದು, ಅಧಿಕೃತ ನೇಮಕಾತಿ ಆದೇಶ ಹೊರ ಬೀಳಲಿದೆ ಎನ್ನಲಾಗುತ್ತಿದೆ.

ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಮಾಜಿ ಸಚಿವ ಜೀವರಾಜ್​​ರನ್ನು ನೇಮಕಗೊಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಸಿ ಟಿ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಚಿಕ್ಕಮಗಳೂರಿಗೆ ಆದ್ಯತೆ ನೀಡಲು ಜೀವರಾಜ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡುತ್ತಿದ್ದು, ಸಂಪುಟ ದರ್ಜೆ ಸ್ಥಾನಮಾನವನ್ನು ಕಲ್ಪಿಸಲಾಗುತ್ತದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.