ETV Bharat / state

ರಮೇಶ್​ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ.. ಚೆಕ್ ಬೌನ್ಸ್ ಬಗ್ಗೆ ಹೊಸದಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚೆಕ್ ಬೌನ್ಸ್ ಆಗಿದ್ದ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿಲ್ಲ ಎಂದು ಅಭಿಪ್ರಾಯಪಟ್ಟು ಸೊಸೈಟಿಯ ಖಾಸಗಿ ದೂರು ವಜಾಗೊಳಿಸಿದ ಜೆಎಂಎಫ್‌ಸಿ ಕೋರ್ಟ್ ಆದೇಶವನ್ನು ರದ್ದುಪಡಿಸಿತು. ಜತೆಗೆ, ದೂರನ್ನು ಹೊಸದಾಗಿ ವಿಚಾರಣೆ ನಡೆಸಿ ಕಾನೂನಿನ ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಜೆಂಎಂಎಫ್‌ಸಿ ಕೋರ್ಟ್‌ಗೆ ನಿರ್ದೇಶಿಸಿತು.

Former minister Ramesh Jarakiholi check bounce case reinvestigation
ರಮೇಶ್​ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ
author img

By

Published : Aug 10, 2021, 10:20 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಹಕಾರಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಭದ್ರತೆಗಾಗಿ ನೀಡಿದ್ದ 5.02 ಕೋಟಿ ರೂ. ಮೊತ್ತದ ಚೆಕ್ ಬೌನ್ಸ್ ಆಗಿದ್ದ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರಿನ ಬಗ್ಗೆ ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಚೆಕ್ ಬೌನ್ಸ್ ಪ್ರಕರಣ ಕುರಿತಂತೆ ಹೈಕೋರ್ಟ್​ಗೆ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ಗೆ ಹೊಸದಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಇದರಿಂದ ರಮೇಶ್ ಜಾರಕಿಹೊಳಿ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಿಸುವಂತಾಗಿದೆ.

ಪ್ರಕರಣದ ಹಿನ್ನೆಲೆ:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಸಾಲ ಪಡೆದಿದ್ದರು. ಅದಕ್ಕೆ ಭದ್ರತೆಯಾಗಿ ನೀಡಿದ್ದ 5.02 ಕೋಟಿ ರೂ. ಮೊತ್ತದ ಚೆಕ್ ಬೌನ್ಸ್ ಆಗಿತ್ತು. ಇದರಿಂದ 2016 ರ ಜ.28 ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸೊಸೈಟಿಯು ಖಾಸಗಿ ದೂರು ದಾಖಲಿಸಿತ್ತು.

ದೂರು 2019 ರ ನ.20 ರಂದು ಚಿಕ್ಕೋಡಿಯ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು. ಅಂದು ದೂರುದಾರರ ಪರ ವಕೀಲರು ಗೈರಾಗಿದ್ದರು. ಅದನ್ನು ಪರಿಗಣಿಸಿದ್ದ ಜೆಎಂಎಫ್​ಸಿ ಕೋರ್ಟ್, ದೂರುದಾರರ ಪರ ವಕೀಲರು ವಿಚಾರಣೆಗೆ ಸರಿಯಾಗಿ ಹಾಜರಾಗುತ್ತಿಲ್ಲ. ನೋಟಿಸ್ ನೀಡಿದ ಹೊರತಾಗಿಯೂ ದೂರುದಾರರು ಕೋರ್ಟ್ ಶುಲ್ಕ ಪಾವತಿಸಿಲ್ಲ. ಇದರಿಂದ ದೂರನ್ನು ಮುಂದುವರಿಸಲು ದೂರುದಾರರಿಗೆ ಆಸಕ್ತಿ ಇಲ್ಲ ಎಂಬುದು ತಿಳಿಯುತ್ತದೆ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ತೀರ್ಪು ನೀಡಿತ್ತು.

ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಈ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿಲ್ಲ ಎಂದು ಅಭಿಪ್ರಾಯಪಟ್ಟು ಸೊಸೈಟಿಯ ಖಾಸಗಿ ದೂರು ವಜಾಗೊಳಿಸಿದ ಜೆಎಂಎಫ್‌ಸಿ ಕೋರ್ಟ್ ಆದೇಶವನ್ನು ರದ್ದುಪಡಿಸಿತು. ಜತೆಗೆ, ದೂರನ್ನು ಹೊಸದಾಗಿ ವಿಚಾರಣೆ ನಡೆಸಿ ಕಾನೂನಿನ ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಜೆಂಎಂಎಫ್‌ಸಿ ಕೋರ್ಟ್‌ಗೆ ನಿರ್ದೇಶಿಸಿತು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.