ETV Bharat / state

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಸಿಬಿಐನಿಂದ ಮಾಜಿ ಸಚಿವ ರೋಷನ್ ಬೇಗ್ ಬಂಧನ

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

roshan baig
ರೋಷನ್ ಬೇಗ್
author img

By

Published : Nov 22, 2020, 7:45 PM IST

Updated : Nov 22, 2020, 8:18 PM IST

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್‌.ರೋಷನ್ ಬೇಗ್​ರನ್ನು ಸಿಬಿಐ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಐಎಂಎ ಸಮೂಹ ಸಂಸ್ಥೆಗಳ ಮಾಲೀಕ‌ ಮೊಹಮ್ಮದ್ ಮನ್ಸೂರ್​​ಖಾನ್ ಇತ್ತೀಚೆಗಷ್ಟೇ ಜಾಮೀನು ಮೇಲೆ ಹೊರಬಂದಿದ್ದನು. ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಇಂದು ರೋಷನ್ ಬೇಗ್​​ ಅನ್ನು ವಿಚಾರಣೆಗೆ ಬೆಳಗ್ಗೆ 11.30ಕ್ಕೆ ನಿವಾಸದಿಂದ ಕರೆದುಕೊಂಡು ಹೋಗಿತ್ತು. ಸುದೀರ್ಘ ವಿಚಾರಣೆ ನಡೆಸಿ ಅಂತಿಮವಾಗಿ ಬಂಧಿಸಿದೆ.

ಹಣ ಹೂಡಿಕೆ ಮಾಡಿದರೆ ಹೆಚ್ಚು ಬಡ್ಡಿ ಹಣ ನೀಡುವುದಾಗಿ ಸಾವಿರಾರು ಗ್ರಾಹಕರಿಂದ ಹಣ ಹೂಡಿಕೆ ಮಾಡಿಸುತ್ತಿದ್ದ ಮನ್ಸೂರ್ ಖಾನ್​​ನಿಂದ 200 ಕೋಟಿ ರೂಪಾಯಿಗೂ ಹೆಚ್ಚು ಕಿಕ್ ಬ್ಯಾಕ್ ಪಡೆದ ಆರೋಪ ರೋಷನ್​ ಬೇಗ್​ ಮೇಲಿದೆ.

ರೋಷನ್ ಬೇಗ್ ಬಂಧನ

ಐಎಂಎ ಮಾಲೀಕ ಮನ್ಸೂರ್ ಖಾನ್ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ವಿಡಿಯೋದಲ್ಲಿ ರೋಷನ್ ಬೇಗ್ ತನ್ನಿಂದ 400 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದನು.

ಇದಕ್ಕೆ ಪೂರಕವಾಗಿ ಮನ್ಸೂರ್​​ಖಾನ್ 2019 ಜೂನ್ 9ರಂದು ಆಡಿಯೋ ಬಿಡುಗಡೆ ಮಾಡಿದ್ದು, ಹಣ ವಾಪಾಸ್ ನೀಡಲು ಕೇಳಿದಾಗ ಸ್ಥಳೀಯ ರೌಡಿಗಳನ್ನು ಬಿಟ್ಟು ಮನ್ಸೂರ್ ಖಾನ್​ಗೆ ಜೀವ ಬೆದರಿಕೆ ಹಾಕಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

Last Updated : Nov 22, 2020, 8:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.