ETV Bharat / state

ಜಯದೇವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ಜೈಲಿಗೆ ಶಿಫ್ಟ್​ ಆದ ರೋಷನ್ ಬೇಗ್​

author img

By

Published : Nov 30, 2020, 5:39 PM IST

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರೋಷನ್ ಬೇಗ್​ ಇಂದು ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದಾರೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಮಾಜಿ ಸಚಿವ ರೋಷನ್ ಬೇಗ್​
Roshan Beg

ಬೆಂಗಳೂರು: ಎದೆನೋವು ಎಂದು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಆರ್.ರೋಷನ್ ಬೇಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್,​ ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಎಂದು‌ ಆಸ್ಪತ್ರೆ ಸೇರಿದ್ದರು‌‌‌. ಆರೋಗ್ಯ ಸ್ಥಿರವಾಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ‌ ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾರೆ.

ಹೂಡಿಕೆ ಮಾಡಿದರೆ ಹೆಚ್ಚು ಬಡ್ಡಿ ಹಣ ನೀಡುವುದಾಗಿ ಸಾವಿರಾರು ಗ್ರಾಹಕರಿಗೆ ಆಮಿಷವೊಡುತ್ತಿದ್ದ ಐಎಂಎ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಮನ್ಸೂರ್ ಖಾನ್​ನಿಂದ ರೋಷನ್ ಬೇಗ್ ಕೋಟ್ಯಂತರ ರೂ. ಕಿಕ್ ಬ್ಯಾಕ್ ಪಡೆದ ಆರೋಪವಿದೆ. ಮನ್ಸೂರ್ ಖಾನ್ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ವಿಡಿಯೋದಲ್ಲಿ ರೋಷನ್ ಬೇಗ್ ತನ್ನಿಂದ 400 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ.

ಇದಕ್ಕೆ ಪೂರಕವಾಗಿ ಮನ್ಸೂರ್ ಖಾನ್ 2019 ಜೂನ್ 9ರಂದು ಆಡಿಯೋ ಬಿಡುಗಡೆ ಮಾಡಿದ್ದ. ಈ ಆಡಿಯೋದಲ್ಲಿ ರೋಷನ್ ಬೇಗ್​ಗೆ 400 ಕೋಟಿ ರೂಪಾಯಿಗಳಷ್ಟು ಹಣ ನೀಡಿದ್ದೆ. ಹಣ ವಾಪಸ್ ನೀಡಲು ಕೇಳಿದಾಗ ಲೋಕಲ್ ರೌಡಿಗಳನ್ನು ಬಿಟ್ಟು ಮನ್ಸೂರ್ ಖಾನ್​ಗೆ ಜೀವ ಬೆದರಿಕೆ ಹಾಕಿಸಿದ್ದಾರೆ ಎಂದು ಆರೋಪಿಸಿದ್ದ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.