ETV Bharat / state

ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧಾರ: ಸಿದ್ದರಾಮಯ್ಯ

ಆಡಳಿತರೂಢ ಬಿಜೆಪಿ ಸರ್ಕಾರವು ಸದನದ ಕಾರ್ಯ ಕಲಾಪಗಳ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಿದ ವಿಷಯಗಳನ್ನು, ವಿಧಾನಗಳನ್ನು ಸಂಪೂರ್ಣ ಗಾಳಿಗೆ ತೂರಿ ಏಕಪಕ್ಷೀಯವಾಗಿ ಸರ್ವಾಧಿಕಾರಿ ಧೋರಣೆಯಿಂದ ವರ್ತಿಸುತ್ತಿದೆ. ಆ ಸಮಿತಿಯನ್ನು ಅವಮಾನಿಸುತ್ತಿದೆ.

Performance Advisory Committee
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Jan 28, 2021, 9:29 PM IST

ಬೆಂಗಳೂರು: ಸದನದ ಕಾರ್ಯಕಲಾಪ ಸಲಹಾ ಸಮಿತಿ ತನ್ನ ಪಾವಿತ್ರ್ಯತೆಯನ್ನು ಕಳೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿರುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Performance Advisory Committee
ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧಾರ

ಓದಿ: ಎಂಜಿ ರಸ್ತೆಯ ಮೆಟ್ರೋ ರೈಲು ಸಂಚಾರ ಭಾನುವಾರ ಎರಡು ಗಂಟೆ ಸ್ಥಗಿತ!

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಅವರು, ಅಧಿವೇಶನದ ಸಂದರ್ಭಗಳಲ್ಲಿ ಸದನದ ಕಾರ್ಯ ಕಲಾಪಗಳು ಸುಗಮವಾಗಿ ನಡೆಯಲು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿಯನ್ನು ನಿಯಮ 240ರಂತೆ ರಚಿಸಲಾಗುತ್ತದೆ.

ಸದರಿ ಸಮಿತಿಯಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಮುಖಂಡರುಗಳ ಸಮಕ್ಷಮದಲ್ಲಿ ಸದನ ಹೇಗೆ ನಡೆಯಬೇಕು, ಯಾವ ವಿಷಯಗಳನ್ನು ಚರ್ಚಿಸಬೇಕು, ಸಮಯ ಹೇಗೆ ಹೊಂದಾಣಿಕೆ ಮಾಡಿಕೊಳ್ಳಬೇಕು, ಸದಸ್ಯರು ಯಾವ ವಿಷಯಗಳನ್ನು ಎಷ್ಟು ಪ್ರಸ್ತಾಪಿಸಬೇಕು ಇತ್ಯಾದಿ ವಿಷಯಗಳನ್ನು ಚರ್ಚಿಸಿ ಗೊಂದಲಗಳಿಗೆ ಅವಕಾಶವಿಲ್ಲದೆ ಸದನ ನಡೆಸಲು ತೀರ್ಮಾನಿಸಲಾಗುತ್ತದೆ. ಸದರಿ ತೀರ್ಮಾನದಂತೆ ಸದನಕ್ಕೆ ತಿಳಿಸಿ ಅದರಂತೆ ಸದನವನ್ನು ನಡೆಸಲಾಗುತ್ತದೆ ಎಂದಿದ್ದಾರೆ.

Performance Advisory Committee
ಕಲಾಪ ಸಲಹಾ ಸಮಿತಿ ಸಭೆ

ಆದರೆ, ಆಡಳಿತರೂಢ ಬಿಜೆಪಿ ಸರ್ಕಾರವು ಸದನದ ಕಾರ್ಯ ಕಲಾಪಗಳ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಿದ ವಿಷಯಗಳನ್ನು, ವಿಧಾನಗಳನ್ನು ಸಂಪೂರ್ಣ ಗಾಳಿಗೆ ತೂರಿ ಏಕಪಕ್ಷೀಯವಾಗಿ ಸರ್ವಾಧಿಕಾರಿ ಧೋರಣೆಯಿಂದ ವರ್ತಿಸುತ್ತಿದೆ. ಆ ಸಮಿತಿಯನ್ನು ಅವಮಾನಿಸುತ್ತಿದೆ. ಸದನದ ಕಾರ್ಯ ಕಲಾಪಗಳ ಸಲಹಾ ಸಮಿತಿಯು ಈ ಸರ್ಕಾರದ ಆಡಳಿತದಲ್ಲಿ ತನ್ನೆಲ್ಲ ಪಾವಿತ್ರ್ಯತೆಯನ್ನು ಕಳೆದುಕೊಂಡಿದೆ ಮತ್ತು ನಾಮಕಾವಸ್ತೆಗೆ ಮಾತ್ರ ನಡೆಯುತ್ತಿದೆ ಎಂಬಂತಾಗಿದೆ.

ಹಾಗಾಗಿ ಕಾಂಗ್ರೆಸ್ ಪಕ್ಷವು ಸದನದ ಕಾರ್ಯ ಕಲಾಪಗಳ ಸಲಹಾ ಸಮಿತಿಯ ಮುಂದಿನ ಸಭೆಗಳಲ್ಲಿ ಭಾಗವಹಿಸದೇ ಇರಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಇದೇ ವಿಚಾರವನ್ನು ಸುದೀರ್ಘವಾಗಿ ಚರ್ಚಿಸಿ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದರು. ಇದೇ ವಿಚಾರವನ್ನು ಸಿದ್ದರಾಮಯ್ಯ ಪತ್ರ ಬರೆದು ಸ್ಪೀಕರ್​ಗೆ ತಿಳಿಸುವ ಕಾರ್ಯ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.