ETV Bharat / state

ಪರಿಷ್ಕರಣಾ ಸಮಿತಿ ರದ್ದತಿ ಬಳಿಕ ಶಿಫಾರಸಿನ ಪಠ್ಯವೂ ರದ್ದಿಗೆ ಸೇರಬೇಕಲ್ಲವೇ?: ಸಿದ್ದರಾಮಯ್ಯ

author img

By

Published : Jun 27, 2022, 10:37 PM IST

ರಾಜ್ಯ ಬಿಜೆಪಿ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡಿ ತನ್ನ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪಠ್ಯ ಪರಿಷ್ಕರಣೆಗೆ ರಚನೆಗೊಂಡ ಸಮಿತಿಯನ್ನೇ ರದ್ದುಗೊಳಿಸಿದ ನಂತರ ಅದರ ಶಿಫಾರಸಿನ ಪಠ್ಯ ಕೂಡ ರದ್ದಿಗೆ ಸೇರಬೇಕಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

siddaramaiah tweet
ಸಿದ್ದರಾಮಯ್ಯ ಟ್ವೀಟ್​

ಬೆಂಗಳೂರು: ಪರಿಷ್ಕೃತ ಪಠ್ಯಗಳಲ್ಲಿನ ಕೆಲವು ತಪ್ಪುಗಳನ್ನು ಸರಿಪಡಿಸಿ ಕಳೆದುಹೋದ ಮಾನ ಕಾಪಾಡುವ ವ್ಯರ್ಥ ಪ್ರಯತ್ನವನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡಿದೆ. ಹಾಕಿರುವ ತೇಪೆಗಳಿಗಿಂತ ಉಳಿದಿರುವ ತೂತುಗಳೇ ಹೆಚ್ಚಾಗಿವೆ. ಹೊಸ ಪಠ್ಯವನ್ನು ರದ್ದುಪಡಿಸಿ ಹಳೆಯ ಪಠ್ಯವನ್ನೇ ಮುಂದುವರಿಸುವುದೊಂದೇ ಈಗಿನ ಪರಿಹಾರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

  • ಪರಿಷ್ಕೃತ ಪಠ್ಯಕ್ಕೆ ವಿರೋಧ ವ್ಯಕ್ತವಾದ ನಂತರ ರಾಜ್ಯ @BJP4Karnataka ಸರ್ಕಾರ ದಿನಕ್ಕೊಂದು ಹೇಳಿಕೆ ನೀಡಿ ತನ್ನ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪಠ್ಯ ಪರಿಷ್ಕರಣೆಗೆ ರಚನೆಗೊಂಡ ಸಮಿತಿಯನ್ನೇ ರದ್ದುಗೊಳಿಸಿದ ನಂತರ ಅದರ ಶಿಫಾರಸಿನ ಪಠ್ಯ ಕೂಡಾ ರದ್ದಿಗೆ ಸೇರಬೇಕಲ್ಲವೇ? 2/5#ಪಠ್ಯಪರಿಷ್ಕರಣೆ

    — Siddaramaiah (@siddaramaiah) June 27, 2022 " class="align-text-top noRightClick twitterSection" data=" ">

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪರಿಷ್ಕೃತ ಪಠ್ಯಕ್ಕೆ ವಿರೋಧ ವ್ಯಕ್ತವಾದ ನಂತರ ರಾಜ್ಯ ಬಿಜೆಪಿ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡಿ ತನ್ನ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪಠ್ಯ ಪರಿಷ್ಕರಣೆಗೆ ರಚನೆಗೊಂಡ ಸಮಿತಿಯನ್ನೇ ರದ್ದುಗೊಳಿಸಿದ ನಂತರ ಅದರ ಶಿಫಾರಸಿನ ಪಠ್ಯ ಕೂಡ ರದ್ದಿಗೆ ಸೇರಬೇಕಲ್ಲವೇ? ರಾಜ್ಯ ಬಿಜೆಪಿ ಸರ್ಕಾರದ ಆದೇಶ ಇಲ್ಲದೆ ರಚನೆಗೊಂಡ ರೋಹಿತ್​ ಚಕ್ರತೀರ್ಥ ಎಂಬ ಬುದ್ಧಿಗೇಡಿಯ ಅಧ್ಯಕ್ಷತೆಯ ಸಮಿತಿಯೇ ಅಕ್ರಮವಾಗಿರುವಾಗ, ಆ ಸಮಿತಿ ಪರಿಷ್ಕೃರಿಸಿರುವ ಪಠ್ಯ ಹೇಗೆ ಕ್ರಮಬದ್ಧವಾಗಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಪರಿಷ್ಕೃತ ಪಠ್ಯದಲ್ಲಿರುವುದು ಬೆರಳೆಣಿಕೆಯ ತಪ್ಪುಗಳಲ್ಲ, ಅದರ ಪುಟ-ಪುಟಗಳಲ್ಲಿಯೂ ತಪ್ಪುಗಳಿರುವುದನ್ನು ನಾಡಿನ ಅನೇಕ ಶಿಕ್ಷಣ ತಜ್ಞರು ವಿವರವಾಗಿ ಪಟ್ಟಿಮಾಡಿ ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹೀಗಿದ್ದರೂ ದೋಷಪೂರ್ಣ ಪಠ್ಯವನ್ನು ಸಮರ್ಥಿಸಲು ಹೊರಟಿರುವುದು ಸರ್ಕಾರದ ಉದ್ದಟತನವನ್ನಷ್ಟೇ ತೋರಿಸುತ್ತದೆ ಎಂದಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕದ ಬಗೆಗಿನ ವಿವಾದವನ್ನು ರಾಜ್ಯ ಬಿಜೆಪಿ ಸರ್ಕಾರ ಪ್ರತಿಷ್ಠೆಯಾಗಿ ಸ್ವೀಕರಿಸದೆ ನಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು. ವಿವಾದವನ್ನು ಬೆಳೆಸದೆ ಹೊಸ ಪಠ್ಯವನ್ನು ವಾಪಸು ಪಡೆದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹಳೆಯ ಪಠ್ಯವನ್ನು ಬೋಧಿಸಲು ಆದೇಶ ನೀಡುವುದೊಂದೇ ಪರಿಹಾರ ಎಂದು ಸಲಹೆ ನೀಡಿದ್ದಾರೆ.

Former minister Siddaramaiah tweets on textbook issue
ಸಿದ್ದರಾಮಯ್ಯ ಭೇಟಿ ಮಾಡಿದ ನಟ ನೀನಾಸಂ ಸತೀಶ್

ನೀನಾಸಂ ಸತೀಶ್ ಭೇಟಿ: ಇಂದು ಕೊಪ್ಪಳ ಜಿಲ್ಲೆಗೆ ತೆರಳಿದ್ದ ಸಿದ್ದರಾಮಯ್ಯ ಸಂಜೆ ಬೆಂಗಳೂರಿನ ಸರ್ಕಾರಿ ನಿವಾಸಕ್ಕೆ ವಾಪಸಾದ ಬಳಿಕ ಚಿತ್ರನಟ ನಿನಾಸಂ ಸತೀಶ್ ಭೇಟಿ ಮಾಡಿದರು. ಜೂನ್ 30ರಂದು ಒಟಿಟಿಯಲ್ಲಿ ತೆರೆ ಕಾಣಲಿರುವ, ತಾವು ನಾಯಕ ನಟರಾಗಿ ಅಭಿನಯಿಸಿರುವ 'ಡಿಯರ್ ವಿಕ್ರಮ್' ಸಿನೆಮಾ ವೀಕ್ಷಿಸಲು ಆಹ್ವಾನ ನೀಡಿದರು. ಕೆ.ಎಸ್. ನಂದೀಶ್ ನಿರ್ದೇಶನದ ಈ ಚಿತ್ರ ನಾಯಕತ್ವದ ಪ್ರಗತಿಪರ ಆಶಯಗಳನ್ನು ಒಳಗೊಂಡಿದೆ ಎಂದು ಸತೀಶ್ ವಿವರಿಸಿದರು. ಸಿನೆಮಾ ಯಶಸ್ವಿ ಪ್ರದರ್ಶನ ಕಾಣಲೆಂದು ಹಾರೈಸಿದ ಸಿದ್ದರಾಮಯ್ಯ, ಇಡೀ ಚಿತ್ರ ತಂಡಕ್ಕೆ ಶುಭ ಕೋರಿದರು. ಸಾಹಿತಿ ನಟರಾಜ್ ಹುಳಿಯಾರ್ ಹಾಜರಿದ್ದರು.

ಇದನ್ನೂ ಓದಿ: ಸ್ಯಾಟಲೈಟ್ ಪೋನ್ ಸದ್ದು ವಿಚಾರ : ಸರ್ಕಾರ ಯಾವುದನ್ನು ಬಿಡುವುದಿಲ್ಲ.. ಗೃಹಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.