ETV Bharat / state

ರಾಜ್ಯಾಧ್ಯಕ್ಷ ಸ್ಥಾನ ಸಿಗದಿದ್ದರೆ ಕಾರ್ಯಕರ್ತರ ಸಭೆಯಲ್ಲಿ ಮುಂದಿನ ನಿರ್ಧಾರ: ವರಿಷ್ಠರಿಗೆ ಸೋಮಣ್ಣ ಸೆಡ್ಡು - ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆ

ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಹೇಳಿದ್ದೇನೆ. ಪಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.

Former minister Somanna
ವಿ. ಸೋಮಣ್ಣ
author img

By

Published : Jul 17, 2023, 1:50 PM IST

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡಿದರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು.

ಭಾನುವಾರ(ನಿನ್ನೆ) ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಗೋವಿಂದರಾಜ ನಗರ ಕ್ಷೇತ್ರವನ್ನು ಮೂಲಭೂತ ಸೌಲಭ್ಯದ ಮೂಲಕ ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಗೋವಿಂದರಾಜ ನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸುಲಭವಾಗಿತ್ತು. ಆದರೆ ವರಿಷ್ಠರ ತೀರ್ಮಾನಕ್ಕೆ ಗೌರವ ನೀಡಿ ಕ್ಷೇತ್ರ ಬಿಟ್ಟು ವರುಣಾ, ಚಾಮರಾಜನಗರಕ್ಕೆ ಹೋಗಿದ್ದೆ ಎಂದು ಹೇಳಿದರು.

ಹೈಕಮಾಂಡ್​​ಗೆ ಪರೋಕ್ಷ ಎಚ್ಚರಿಕೆ: ಈ ಬಾರಿಯ ಚುನಾವಣೆಯಲ್ಲಿ ನನ್ನ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನ ಕಾರಣವಾಯಿತು. ಹಿರಿಯ ಮುಖಂಡರುಗಳ ಪಕ್ಷ ವಿರೋಧಿ ಕೆಲಸದಿಂದ ನನಗೆ ಸೋಲುಂಟಾಯಿತು. ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. 365 ದಿನವೂ ಜನರ ನಡುವೆ ಇದ್ದು ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಕೇಳಿದ್ದೇನೆ. ಪಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ ನೀಡುವ ಮೂಲಕ ಪಕ್ಷದ ಹೈಕಮಾಂಡ್​​ಗೆ ಪರೋಕ್ಷವಾಗಿ ಎಚ್ಚರಿಕೆ ರವಾನಿಸಿದ್ದಾರೆ.

ಚುನಾವಣೆಯಲ್ಲಿ ಸೋಲಾಗುತ್ತಿದ್ದಂತೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿದ್ದ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ರಾಜ್ಯಕ್ಕೆ ವಾಪಸ್​ ಆಗಿ ಮಾಧ್ಯಮಗೋಷ್ಟಿ ನಡೆಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದಾಗಿ ಮಾಹಿತಿ ನೀಡಿ ಬೇಡಿಕೆಯನ್ನು ಪುನರುಚ್ಚಸಿದ್ದರು. ಆದರೆ ಎರಡು ತಿಂಗಳಾದರೂ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ನಿರ್ಧಾರ ಮಾಡಿಲ್ಲ. ಇದರಿಂದ ಬೇಸರಗೊಂಡಿರುವ ಸೋಮಣ್ಣ ನಿನ್ನೆ ಮತ್ತೊಮ್ಮೆ ರಾಜ್ಯಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿ. ಸೋಮಣ್ಣ

ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇನೆ: ನಾನು ಚುನಾವಣೆಯಲ್ಲಿ ಸೋತಿರಬಹುದು, ಆದರೆ ನನಗೆ ಕೊಟ್ಟ ಟಾಸ್ಕ್​ನಲ್ಲಿ ಗೆದ್ದಿದ್ದೇನೆ. ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್​​ಗೆ ಮನವಿ ಮಾಡಿದ್ದೇನೆ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಪಕ್ಷದ ಸಂಘಟನೆಯಲ್ಲಿ ಯಾವ ರೀತಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿ ಕೊಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಇತ್ತೀಚೆಗೆ ರಾಜ್ಯಾಧ್ಯಕ್ಷ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸಿದ್ದರು.

ಜೂ.23ರಂದು ವಿಜಯನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಹೇಳಿದ್ದೇನೆ. ನಾನು 45 ವರ್ಷ ರಾಜಕಾರಣ ಮಾಡಿದ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿದ್ದು, ಪತ್ರವನ್ನೂ ಬರೆದಿದ್ದೇನೆ. ಪಕ್ಷ ಕೊಟ್ಟ ಎಲ್ಲಾ ಟಾಸ್ಕ್​ಗಳನ್ನು ಸ್ವೀಕಾರ ಮಾಡಿ ಅತ್ಯಂತ ಶ್ರಮಪಟ್ಟು ನಿರ್ವಹಿಸಿದ್ದೇನೆ. ಮೊನ್ನೆಯ ಚುನಾವಣೆಯಲ್ಲಿ ಸಾಕಷ್ಟು ಹಿನ್ನಡೆ ಆಗಿದೆ. ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಶಕ್ತಿ ನನಗೆ ಇದೆಯಾ ಎಂದು ಕೆಲವರು ಮಾತಾಡಿಕೊಳ್ಳಬಹುದು. ಆದರೆ ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ದೊಡ್ಡವರ ರೀತಿಯೇ ನನ್ನದೂ ಒಂದು ತೆರೆದ ಪುಸ್ತಕ ಎಂದು ಬಿ ಎಸ್​ ಯಡಿಯೂರಪ್ಪ ರೀತಿಯ ರಾಜಕಾರಣಿ ಎಂದು ತಮ್ಮ ಹಿರಿತನವನ್ನು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇನೆ: ವಿ. ಸೋಮಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.