ETV Bharat / state

ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಚಿವ ವೈಜನಾಥ್​​ ಪಾಟೀಲ್​ ರಾಜೀನಾಮೆ

ಮಾಜಿ ಸಚಿವ ವೈಜನಾಥ್ ಪಾಟೀಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ವೈಜನಾಥ ಪಾಟೀಲ್ ರಾಜೀನಾಮೆ
author img

By

Published : Mar 13, 2019, 7:42 PM IST

ಬೆಂಗಳೂರು: ಮಾಜಿ ಸಚಿವ ವೈಜನಾಥ್ ಪಾಟೀಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ಸಂವಿಧಾನದ 371 ಕಲಂನ್ನು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಯಿತು. ಅದರ ಪ್ರಕಾರ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಮೀಸಲಾತಿ ಒದಗಿಸಬೇಕೆಂದು ಅಂದಿನ ಸರ್ಕಾರಕ್ಕೆ ಸೂಚನೆ ಕೊಡಲಾಗಿತ್ತು.

ವೈಜನಾಥ ಪಾಟೀಲ್ ರಾಜೀನಾಮೆ

ಸೂಚನೆ ಪ್ರಕಾರ ಸರ್ಕಾರಿ ಸೇವೆಗಳಲ್ಲಿ ಬರುವ ಎ ಗ್ರೇಡ್ ನೌಕರರಿಗೆ ಶೇ. 60ರಷ್ಟು, ಬಿ ಗ್ರೇಡ್ ನೌಕರರಿಗೆ ಶೇ. 65ರಷ್ಟು, ಸಿ ಗ್ರೇಡ್​ ನೌಕರರಿಗೆ ಶೇ. 70ರಷ್ಟು, ಇದರಲ್ಲಿ ಬರುವ ಡಿ ಗ್ರೇಡ್​​​ ನೌಕರರಿಗೆ ಶೇ. 80ರಷ್ಟು ಮೀಸಲಾತಿ ನೀಡುವಂತೆ ಆದೇಶ ಹೊರಡಿಸಲಾಗಿತ್ತು . ಆದರೆ ಇದುವರೆಗೂ ಯಾವುದೇ ಮೀಸಲಾತಿಗಳು ಇಲ್ಲಿನ ಯುವಕರಿಗೆ ಸಿಕ್ಕಿಲ್ಲ. ಹೀಗಾಗಿ ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಹಿನ್ನಡೆ ಉಂಟಾಗಿದೆ.

ವೃತ್ತಿಪರ ಕೋರ್ಸ್​ಗಳ ಪ್ರವೇಶದಲ್ಲಿ ಸರಿಯಾದ ಮೀಸಲಾತಿ ಸಿಗುತ್ತಿಲ್ಲ. ಬಹುತೇಕ ಅಭ್ಯರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಧಿಕಾರ ಅವಧಿಯಲ್ಲಿ ಸರ್ಕಾರದ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

Intro:ಮಾಜಿ ಸಚಿವ ವೈಜನಾಥ್ ಪಾಟೀಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.

Body:ಕಳೆದ 5 ವರ್ಷಗಳ ಹಿಂದೆ ಸಂವಿಧಾನದ 371ನ್ನು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಯಿತು. ಅದರ ಪ್ರಕಾರ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಮೀಸಲಾತಿ ಒದಗಿಸಬೇಕೆಂದು ಅಂದಿನ ಸರ್ಕಾರಕ್ಕೆ ಸೂಚನೆ ಕೊಡಲಾಗಿತ್ತು.

ಸೂಚನೆ ಪ್ರಕಾರ ಸರ್ಕಾರಿ ಸೇವೆಗಳಲ್ಲಿ ಬರುವ ಎ ಗ್ರೇಡ್ ನೌಕರರಿಗೆ ಶೇಕಡ 60ರಷ್ಟು, ಬಿ ಗ್ರೇಡ್ ನೌಕರರಿಗೆ ಶೇಕಡಾ 65ರಷ್ಟು ನೌಕರರಿಗೆ ಶೇಕಡ 70ರಷ್ಟು ಇದರಲ್ಲಿ ಬರುವ ದಿ ಗ್ರೇಟ್ ನೌಕರರಿಗೆ ಶೇಕಡ 80 ರಷ್ಟು ಮೀಸಲಾತಿ ನೀಡುವಂತೆ ಆದೇಶ ಹೊರಡಿಸಲಾಗಿತ್ತು . ಆದರೆ ಇದುವರೆಗೂ ಯಾವುದೇ ಮೀಸಲಾತಿಗಳು ಇಲ್ಲಿನ ಯುವಕರಿಗೆ ಸಿಕ್ಕಿಲ್ಲ ಹೀಗಾಗಿ ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಹಿನ್ನಡೆ ಉಂಟಾಗಿದೆ.
ವೃತ್ತಿಪರ ಕೋರ್ಸ್ ಗಳ ಪ್ರವೇಶ ದಲ್ಲಿ ಸರಿಯಾದ ಮೀಸಲಾತಿ ಸಿಗುತ್ತಿಲ್ಲ ಬಹುತೇಕ ಅಭ್ಯರ್ಥಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಧಿಕಾರ ಅವಧಿಯಲ್ಲಿ ಸರ್ಕಾರದ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಹೀಗಾಗಿ ತಾವು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ತಿಳಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.