ದೇವನಹಳ್ಳಿ(ಬೆಂಗಳೂರು): 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರ ಸಾಮಾನ್ಯ. ಅಂತೆಯೇ, ಬಹುದಿನಗಳಿಂದ ಚರ್ಚೆಯಲ್ಲಿರುವ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ ಬಿಜೆಪಿ ಸೇರ್ಪಡೆ ಬಹುತೇಕ ಖಚಿತವೆಂದೇ ಹೇಳಲಾಗುತ್ತಿದೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಬಿಜೆಪಿ ಸೇರ್ಪಡೆ ಎಂಬ ವದಂತಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಸಾಕ್ಷಿ ಎನ್ನುವಂತೆ ಭಾನುವಾರ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆಯಲ್ಲಿ ನಡೆದ ಸರ್ಕಾರಿ ಶಾಲಾ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಪಿಳ್ಳಮುನಿಶಾಮಪ್ಪ ಕಾಣಿಸಿಕೊಂಡರು. ಅಷ್ಟೇ ಅಲ್ಲದೆ, ಸಚಿವರೊಂದಿಗೆ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಾತುಕತೆ ನಡೆಸಿದರು.
2018ರ ವಿಧಾನಸಭಾ ಚುನಾವಣೆಯ ಕೊನೆಯ ಕ್ಷಣಗಳಲ್ಲಿ ಜೆಡಿಎಸ್ನಿಂದ ಟಿಕೆಟ್ ವಂಚಿತರಾಗಿದ್ದ ಪಿಳ್ಳಮುನಿಶ್ಯಾಮಪ್ಪ, ಆ ನಂತರ ರಾಜಕೀಯದಿಂದ ದೂರವೇ ಉಳಿದಿದ್ದರು. ಆದರೆ ತೆರೆಮರೆಯಲ್ಲಿ ಬಿಜೆಪಿ ರಾಜ್ಯ ಮಟ್ಟದ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.
ಕಳೆದ ವರ್ಷ ಬಿಜೆಪಿ ಸೇರ್ಪಡೆಯಾಗುತ್ತಾರೆಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಪಿಳ್ಳಮುನಿಶ್ಯಾಮಪ್ಪ ತಟಸ್ಥರಾಗಿಯೇ ಉಳಿದಿದ್ದರು. ಆದರೆ, ಈ ಬಾರಿ ಬೃಹತ್ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಯಾಗುವ ಎಲ್ಲಾ ಸಾಧ್ಯತೆ ಕಾಣುತ್ತಿದೆ.
ಇದನ್ನೂ ಓದಿ: ಪರಿಷತ್ನಲ್ಲಿ ಮತಾಂತರ ನಿಷೇಧ ಬಿಲ್ ಅಂಗೀಕಾರಕ್ಕೆ 1 ಸ್ಥಾನ ಕೊರತೆ: ಲಖನ್ ಬೆಂಬಲ ಪಡೆಯುತ್ತಾ ಬಿಜೆಪಿ?