ETV Bharat / state

Pegasus​ ಪ್ರಕರಣ: 'ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಲಿ' - Bangalore latest update news

Pegasus​ ಫೋನ್ ಟ್ಯಾಪಿಂಗ್ ವಿಚಾರ ತನಿಖೆ ಆಗಲಿ. ಸತ್ಯ ಹೊರ ಬರಲಿ. ಫೋನ್ ಟ್ಯಾಪಿಂಗ್ ಆಗಿದೆ ಎಂಬುದಕ್ಕೆ ಆಧಾರ ಇಲ್ಲ ಎಂದು ವಾದ ಮಾಡಿರಬಹುದು. ಆದರೆ ತನಿಖೆಯಿಂದ ಎಲ್ಲವೂ ಬೆಳಕಿಗೆ ಬರಲಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

Former MP V. S. Ugrappa
ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಸುದ್ದಿಗೋಷ್ಠಿ
author img

By

Published : Jul 21, 2021, 3:30 PM IST

ಬೆಂಗಳೂರು: ಕೇಂದ್ರ ಸರ್ಕಾರ ಹಾಗು ಬಿಜೆಪಿ ರಾಷ್ಟ್ರೀಯ ನಾಯಕರ ವಿರುದ್ಧ ಕೇಳಿ ಬಂದಿರುವ ಫೋನ್ ಟ್ಯಾಪಿಂಗ್ ಆರೋಪವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಹೆಚ್​.ಎಂ. ರೇವಣ್ಣ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ಪೆಗಾಸಸ್(Pegasus) ಮೂಲಕ ಫೋನ್ ಟ್ಯಾಪಿಂಗ್ ಮಾಡಿದೆ ಎಂದರೆ ಕೇಂದ್ರ ಸರ್ಕಾರ ಎಂತಹ ಹೀನಾಯ ಸ್ಥಿತಿಗೆ ಇಳಿದಿದೆ. ಸಂಸತ್ತಿನ ಜಂಟಿ ಸದನ ಸಮಿತಿಯಿಂದ ಈ ಕುರಿತು ತನಿಖೆಯಾಗಬೇಕು. ಇದಕ್ಕಿಂತ ಮುಖ್ಯವಾಗಿ ಸುಪ್ರೀಂ ಕೋರ್ಟ್​ನ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಸುದ್ದಿಗೋಷ್ಠಿ

ಪೆಗಾಸಸ್ ಫೋನ್ ಟ್ಯಾಪಿಂಗ್ ವಿಚಾರ ತನಿಖೆ ಆಗಲಿ. ಸತ್ಯ ಹೊರ ಬರಲಿ. ಫೋನ್ ಟ್ಯಾಪಿಂಗ್ ಆಗಿದೆ ಎಂಬುದಕ್ಕೆ ಆಧಾರ ಇಲ್ಲ ಎಂದು ವಾದ ಮಾಡಿರಬಹುದು. ಆದರೆ ತನಿಖೆಯಿಂದ ಎಲ್ಲವೂ ಬೆಳಕಿಗೆ ಬರಲಿದೆ. ಮೋದಿ ಸರ್ಕಾರದ ಬೇಹುಗಾರಿಕೆಯ ಭಾಗವಾಗಿ ಫೋನ್ ಟ್ಯಾಪಿಂಗ್ ನಡೆದಿದೆ. ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್​.ಡಿ. ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್​​, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗು ಮಾಜಿ ಪ್ರಧಾನಿ ದೇವೇಗೌಡರ ಫೋನ್ ಟ್ಯಾಪ್‌ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಇತಿಹಾಸದಲ್ಲಿ ಇಂತಹ ಹಲವಾರು ಪ್ರಕರಣಗಳು ಬಂದಾಗ ರಾಜೀನಾಮೆ ಕೊಟ್ಟ ನಿದರ್ಶನಗಳಿವೆ. ರಾಮಕೃಷ್ಣ ಹೆಗಡೆಯವರು ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ರಾಜೀನಾಮೆ ಕೊಟ್ಟಿದ್ದರು ಎಂದು ಹೇಳಿದರು.

ಮಾಜಿ ಸಚಿವ ಹೆಚ್.ಎಂ ರೇವಣ್ಣ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರ ಬಂದಾಗಲೂ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸಿದರು. ಹಿಂದಿನ ಬಾಗಿಲಿನಿಂದ ವಾಮಮಾರ್ಗ ಅನುಸರಿಸಿ ಸರ್ಕಾರ ರಚಿಸಿದರು. ಈ ಬಾರಿ ಯಡಿಯೂರಪ್ಪ ಸಿಎಂ ಆದಾಗಿನಿಂದ ಅವರದ್ದೇ ಪಕ್ಷದ ಮುಖಂಡರು ಹಲವು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Pegasus​ ಪ್ರಕರಣ: ಕೇಂದ್ರದ ಇಲಾಖೆಗಳನ್ನು ಪ್ರಶ್ನಿಸಲು ಮುಂದಾದ ಸ್ಥಾಯಿ ಸಮಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.