ETV Bharat / state

ಖಾಸಗಿ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಿ: ಸರ್ಕಾರಕ್ಕೆ ದೇವೇಗೌಡರ ಒತ್ತಾಯ - ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಅನುದಾನರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾ ಭದ್ರತೆ, ಬಾಕಿ ಆರ್​ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಒತ್ತಾಯಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ  ಪ್ರತಿಭಟನೆ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರತಿಭಟನೆ
author img

By

Published : Aug 26, 2020, 3:45 PM IST

Updated : Aug 26, 2020, 4:09 PM IST

ಬೆಂಗಳೂರು: ಖಾಸಗಿ ಶಾಲಾ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ಬೆಂಗಳೂರಿನ ಮೌರ್ಯ ವೃತ್ತದ ಬಳಿ ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನುದಾನರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾಭದ್ರತೆ, ಬಾಕಿ ಆರ್​ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಯನ್ನು ತಕ್ಷಣ ನೆರವಿವೆರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ. ಖಾಸಗಿ ಶಾಲೆಗಳ ಶಿಕ್ಷಕರ ಸಹಾಯಕ್ಕೆ ಸರ್ಕಾರ ಕೂಡಲೇ ಧಾವಿಸಬೇಕು. ಈಗಾಗಲೇ ಈ ವಿಷಯವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ. ಬೇಕಾದರೆ ಮತ್ತೊಂದು ಪತ್ರವನ್ನು ಸಿಎಂಗೆ ಬರೆದು ಒತ್ತಾಯಿಸುತ್ತೇನೆ. ಇಂತಹ ಸಮಯದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶನ ಮಾಡಬೇಕು. ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಈ ವಿಚಾರವನ್ನು ನಾನು ಮುಂದಿನ ಸಂಸತ್ ಅಧಿವೇಶನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೂ ತರುತ್ತೇನೆ. ಅವಶ್ಯ ಬಿದ್ದರೆ ಅಧಿವೇಶನದಲ್ಲಿ ಚರ್ಚೆಗೂ ಸಿದ್ಧ ಎಂದು ಹೇಳಿದರು.

ರಾಷ್ಟ್ರೀಯ ಏಕರೂಪದ ಶಿಕ್ಷಣ ನೀತಿಗೆ ನಮ್ಮ ವಿರೋಧವಿದೆ. ಕೇಂದ್ರ ಸರ್ಕಾರ ಏಕರೂಪ ಶಿಕ್ಷಣ ಜಾರಿಗೆ ತರಲು ಹೊರಟಿದೆ. ಇದರಿಂದ ಅನೇಕ ಸಮಸ್ಯೆಗಳು ಆಗಲಿವೆ. ಯಾರಿಗೂ ಇದರಿಂದ ಉಪಯೋಗವಿಲ್ಲ. ನಾನು ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ಅಂಕಿ - ಅಂಶದ ಸಮೇತ ಈ ಬಗ್ಗೆ ಧ್ವನಿ ಎತ್ತುತ್ತೇನೆ. ಶಿಕ್ಷಕರ ಸಮಸ್ಯೆ ಪರಿಹಾರ ಮಾಡದೇ ಹೋದರೆ ಖುದ್ದು ಹೋರಾಟಕ್ಕೆ ಇಳಿಯುತ್ತೇನೆ. ಇದು ಮೊದಲ ಹಂತದ ಹೋರಾಟ ಅಷ್ಟೇ. ಸರ್ಕಾರಗಳು ಸ್ಪಂದಿಸದೇ ಹೋದರೆ ಮತ್ತೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಭಾಗಿಯಾಗಿದ್ದರು. ಜೊತೆಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್​.ಕೆ ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಬೋಜೇಗೌಡ, ಕೆ ಟಿ ಶ್ರೀಕಂಠೇಗೌಡ,ತಿಪ್ಪೇಸ್ವಾಮಿ, ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಭಾಗಿಯಾಗಿದ್ದರು

Last Updated : Aug 26, 2020, 4:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.