ETV Bharat / state

ಜೆಡಿಎಸ್​​​​ ಪದಾಧಿಕಾರಿಗಳ ಮರುನೇಮಕಕ್ಕೆ ಈ ವಾರದಲ್ಲಿ ಚಾಲನೆ? - ಪದಾಧಿಕಾರಿಗಳ ಪುನಾರಚನೆ

ಕಳೆದ ಎರಡು ತಿಂಗಳಿಂದ 16 ಜಿಲ್ಲೆಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಹಾಗೂ ಪದಾಧಿಕಾರಿಗಳ ಮರುನೇಮಕ ಕುರಿತಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾಹಿತಿ ಪಡೆದುಕೊಂಡಿದ್ದಾರೆ.

ಪದಾಧಿಕಾರಿಗಳ ಮರುನೇಮಕ ಕುರಿತಂತೆ ಮಾಹಿತಿ ಪಡೆದ ಹೆಚ್​ಡಿಡಿ
author img

By

Published : Oct 3, 2019, 6:30 PM IST

ಬೆಂಗಳೂರು: ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿರುವ ಜೆಡಿಎಸ್, ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪದಾಧಿಕಾರಿಗಳ ಪುನರ್​ ನೇಮಕ ಮಾಡಲು ಉದ್ದೇಶಿಸಿದೆ. ಕಳೆದ ಎರಡು ತಿಂಗಳಿಂದ 16 ಜಿಲ್ಲೆಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಹಾಗೂ ಪದಾಧಿಕಾರಿಗಳ ಮರುನೇಮಕ ಕುರಿತಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾಹಿತಿ ಪಡೆದುಕೊಂಡಿದ್ದಾರೆ.

ಆಗಸ್ಟ್ ತಿಂಗಳಿನಲ್ಲಿ 13 ಜಿಲ್ಲೆಗಳ ಸಭೆ ನಡೆಸಿ ಮಾಹಿತಿ ಪಡೆಯಲಾಗಿತ್ತು. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಕುರಿತಂತೆ ಮಾಹಿತಿ ಪಡೆಯಲಾಗಿದೆ. ಪಿತೃಪಕ್ಷ ಮುಗಿದ ನಂತರ ಪದಾಧಿಕಾರಿಗಳ ಮರುನೇಮಕ ಮಾಡುವ ಬಗ್ಗೆ ದೇವೇಗೌಡರು ಈ ಹಿಂದೆ ಮಾಹಿತಿ ನೀಡಿದ್ದರು. ಹಾಗಾಗಿ, ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನು ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ಕೆಲವು ಜಿಲ್ಲೆ ಹಾಗೂ ತಾಲೂಕುಗಳ ಪದಾಧಿಕಾರಿಗಳನ್ನು ಮುಂದುವರೆಸಲಾಗುತ್ತದೆ. ಈ ವಾರದಲ್ಲಿ ಪದಾಧಿಕಾರಿಗಳು ಬದಲಾವಣೆಗೆ ವರಿಷ್ಠರು ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪದಾಧಿಕಾರಿಗಳ ಮರುನೇಮಕ ಕುರಿತಂತೆ ಮಾಹಿತಿ ಪಡೆದ ಹೆಚ್​ಡಿಡಿ

ಪದಾಧಿಕಾರಿಗಳ ಮರುನೇಮಕವಾದ ನಂತರ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ವಿವಿಧ ಘಟಕಗಳ ಸಭೆ ನಡೆಸಲಾಗುತ್ತದೆ. ರಾಜ್ಯಾದ್ಯಂತ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ದೇವೇಗೌಡರು ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ, ಇಂದು ತುಮಕೂರು ಜಿಲ್ಲೆಗೆ ಪ್ರವಾಸ ಮಾಡಿ ಸಮಾವೇಶ ಸಹ ಮಾಡಿದ್ದಾರೆ. ಅದೇ ರೀತಿ ಉತ್ತರ ಕರ್ನಾಟಕ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಪ್ರವಾಸ ಮಾಡಲು ನಿರ್ಧರಿಸಿರುವ ಗೌಡರು, ನಾಲ್ಕು ತಂಡಗಳಾಗಿ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಲು ಉದ್ದೇಶಿಸಿದ್ದಾರೆ.

ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅದರ ಜೊತೆಗೆ ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ಬರಬಹುದೆಂಬ ಲೆಕ್ಕಾಚಾರದಲ್ಲಿರುವ ದೇವೇಗೌಡರು, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಂಡಿದ್ದ ಸಾಲ ಮನ್ನಾ, ಬಡವರ ಬಂಧು ಸೇರಿದಂತೆ ಹಲವು ಜನರಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Intro:ಬೆಂಗಳೂರು : ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿರುವ ಜೆಡಿಎಸ್, ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪದಾಧಿಕಾರಿಗಳ ಪುನಾರಚನೆ ಮಾಡಲು ಉದ್ದೇಶಿಸಿದೆ.Body:ಕಳೆದ ಎರಡು ತಿಂಗಳಿಂದ 16 ಜಿಲ್ಲೆಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಹಾಗೂ ಪದಾಧಿಕಾರಿಗಳ ಮರುನೇಮಕ ಕುರಿತಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪಡೆದುಕೊಂಡಿದ್ದಾರೆ.
ಆಗಸ್ಟ್ ತಿಂಗಳಿನಲ್ಲೂ 13 ಜಿಲ್ಲೆಗಳ ಸಭೆ ನಡೆಸಿ ಮಾಹಿತಿ ಪಡೆಯಲಾಗಿತ್ತು. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಕುರಿತಂತೆ ಮಾಹಿತಿ ಪಡೆಯಲಾಗಿದೆ.
ಪಿತೃಪಕ್ಷ ಮುಗಿದ ನಂತರ ಪದಾಧಿಕಾರಿಗಳ ಪುನರ್ ರಚನೆ ಮಾಡುವ ಬಗ್ಗೆ ದೇವೇಗೌಡರು ಈ ಹಿಂದೆ ಮಾಹಿತಿ ನೀಡಿದ್ದರು. ಹಾಗಾಗಿ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳನ್ನು ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ಕೆಲವು ಜಿಲ್ಲೆ ಹಾಗೂ ತಾಲ್ಲೂಕುಗಳ ಪದಾಧಿಕಾರಿಗಳನ್ನು ಮುಂದುವರೆಸಲಾಗುತ್ತದೆ. ಈ ವಾರದಲ್ಲಿ ಪದಾಧಿಕಾರಿಗಳು ಪುನಾರಚನೆಗೆ ವರಿಷ್ಠರು ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪದಾಧಿಕಾರಿಗಳ ಮರುನೇಮಕವಾದ ನಂತರ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ವಿವಿಧ ಘಟಕಗಳ ಸಭೆ ನಡೆಸಲಾಗುತ್ತದೆ. ರಾಜ್ಯಾದ್ಯಂತ ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ದೇವೇಗೌಡರು ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ, ಇಂದು ತುಮಕೂರು ಜಿಲ್ಲೆಗೆ ಪ್ರವಾಸ ಮಾಡಿ ಸಮಾವೇಶ ಸಹ ಮಾಡಿದ್ದಾರೆ. ಅದೇ ರೀತಿ ಉತ್ತರ ಕರ್ನಾಟಕ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಪ್ರವಾಸ ಮಾಡಲು ನಿರ್ಧರಿಸಿರುವ ಗೌಡರು, ನಾಲ್ಕು ತಂಡಗಳಾಗಿ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಲು ಉದ್ದೇಶಿಸಿದ್ದಾರೆ.
ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅದರ ಜೊತೆಗೆ ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ಬರಬಹುದೆಂಬ ಲೆಕ್ಕಾಚಾರದಲ್ಲಿರುವ ದೇವೇಗೌಡರು, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಂಡಿದ್ದ ಸಾಲಮನ್ನಾ, ಬಡವರ ಬಂಧು ಸೇರಿದಂತೆ ಹಲವು ಜನರಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಮತ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವ ಯೋಜನೆ ಅವರದ್ದು. ಹಾಗಾಗಿ, ತಮ್ಮ ಇಳಿವಯಸ್ಸಿನಲ್ಲೂ ಬಿಡುವಿಲ್ಲದೆ ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.