ETV Bharat / state

ಸಂಖ್ಯಾಬಲ ಇಲ್ಲ ಎಂದು ಎದೆಗುಂದಬೇಡಿ: ನೂತನ ಶಾಸಕರಿಗೆ ಧೈರ್ಯ ತುಂಬಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

author img

By

Published : May 24, 2023, 9:43 PM IST

ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಹೆಚ್.ಡಿ.ದೇವೇಗೌಡರು ಕೆಲವು ಹಿತನುಡಿಗಳನ್ನು ಹೇಳಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು : ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎಂದು ಎದೆಗುಂದಬೇಡಿ. ಹಿಂದಿನ ಲೋಕಸಭೆ ಚುನಾವಣೆಯಲ್ಲೂ ನಾನು ಗೆದ್ದು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್‌ ವರಿಷ್ಠ ಹೆಚ್.ಡಿ.ದೇವೇಗೌಡರು ನೂತನ ಶಾಸಕರಿಗೆ ಧೈರ್ಯ ತುಂಬಿದ್ದಾರೆ.

ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಸಂಜೆ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಹೆಚ್.ಡಿ.ದೇವೇಗೌಡರು ಕೆಲವು ಹಿತನುಡಿಗಳನ್ನು ಹೇಳಿದರು. ಈ ಬಾರಿಯ ವಿಧಾನಸಭಾ ಚುನಾವಣೆ 2023ರಲ್ಲಿ ನಮ್ಮ ಜೆಡಿಎಸ್​ ಪಕ್ಷದಿಂದ 19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ. 119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ. ನೀವು ಯಾರೂ ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದರು.

ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ : ಚುನಾವಣೆಯಲ್ಲಿ ಸೋಲು ಗೆಲವು ಎನ್ನುವುದು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಂಡು ಜನರ ಜೊತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಅಚಲತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ ಎಂದು ನೂತನ ಶಾಸಕರನ್ನು ಹೆಚ್.ಡಿ.ದೇವೇಗೌಡರು ಹುರಿದುಂಬಿಸಿದರು.

ಅಧೈರ್ಯಪಟ್ಟರೆ ಉಪಯೋಗವಿಲ್ಲ: ನಾನೂ ಕೂಡ ಚುನಾವಣೆಯಲ್ಲಿ ಸೋತಿದ್ದೇನೆ, ಗೆದ್ದಿದ್ದೇನೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲಾ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದ್ದೇನೆ. 1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದು ಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು.

ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ, ಅಧೈರ್ಯಪಟ್ಟರೆ ಉಪಯೋಗವಿಲ್ಲ. ನಿಮ್ಮ ಜತೆ ಕುಮಾರಸ್ವಾಮಿ ಅವರು ನಿಲ್ಲುತ್ತಾರೆ. ಹೋರಾಟ ಮಾಡಿ ಎಂದು ಹೆಚ್.ಡಿ.ದೇವೇಗೌಡರು ಸಲಹೆ ನೀಡಿದರು.

ಮುಂದೆ ಅನೇಕ ಚುನಾವಣೆಗಳು ಬರಲಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ಕೆಲಸ ಮಾಡಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿ. ನಿಮ್ಮ ಜತೆ ನಾನು, ಕುಮಾರಸ್ವಾಮಿ ಅವರು ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹೆದರಿ ಕೂತರೆ ಏನನ್ನೂ ಸಾಧನೆ ಮಾಡಿದಂತೆ ಆಗುವುದಿಲ್ಲ ಎಂದು ಹೆಚ್.ಡಿ.ದೇವೇಗೌಡರು ಜೆಡಿಎಸ್​​ ನಾಯಕರು, ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಮಾಜಿ ಸಿಎಂ ಹೆಚ್​ಡಿಕೆ ಹೇಳಿಕೆ : ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ನೂತನ ಶಾಸಕರ ಜೊತೆ ಮಾತುಕತೆ ನಡೆಸಿದರು. ಈ ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ. ಆಗಲೇ ಅಧಿಕಾರಕ್ಕಾಗಿ ಕಿರಿಕಿರಿ ಮಾಡಿಕೊಳ್ಳುತ್ತಿದ್ದಾರೆ. ನಮಗೆ ಅವರ ರಾಜಕೀಯ ಬೇಕಿಲ್ಲ. ಜನತೆಗೆ ಅವರು ಕೊಟ್ಟ ವಚನ ಪಾಲಿಸುವಂತೆ ಹೋರಾಟ ಮಾಡೋಣ ಎಂದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಎಲ್ಲಾ ನೂತನ ಶಾಸಕರು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ : ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ ಎಂ ಇಬ್ರಾಹಿಂ ರಾಜೀನಾಮೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.