ETV Bharat / state

ಆದಿಚುಂಚನಗಿರಿ ಮಠಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ - ನಾಳೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸಭೆ

ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ ಭೇಟಿ ನೀಡಿ, ಶ್ರೀಗಳಿಂದ ಆಶೀರ್ವಾದ ಪಡೆದರು.

Former Prime Minister HD Deve Gowda visit Adikunchanagiri Math
ಆದಿಚುಂಚನಗಿರಿ ಮಠಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ
author img

By

Published : Jan 6, 2022, 10:27 PM IST

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುರುವಾರ ಸಂಜೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ಬಳಿಕ ಕೆಲಕಾಲ ಚರ್ಚೆ ನಡೆಸಿದರು.

ಸದ್ಯ ಪಕ್ಷ ಸಂಘಟನೆಗೆ ಇಳಿದಿರುವ ದೇವೇಗೌಡರು, ಹಾಸನ, ಕಲಬುರಗಿ ಜಿಲ್ಲೆಗಳಿಗೆ ಪ್ರವಾಸ ಮಾಡಿ ಬಂದಿದ್ದಾರೆ.

Former Prime Minister HD Deve Gowda visit Adikunchanagiri Math

ರಾಜ್ಯದಲ್ಲಿರುವ ಜೀವನದಿಗಳಿಂದ ಜಲ ಸಂಗ್ರಹಿಸಲು ಹಮ್ಮಿಕೊಂಡಿರುವ 'ಜನತಾ-ಜಲಧಾರೆ' ಕಾರ್ಯಕ್ರಮ ಮತ್ತು 'ಪಕ್ಷದ ಸಾಂಸ್ಥಿಕ ಚುನಾವಣೆ' ಯ ಬಗ್ಗೆ ವಿಸ್ತಾರವಾಗಿ ಚರ್ಚಿಸಲು ನಾಳೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸಭೆ ಕರೆಯಲಾಗಿದೆ.

ಇದನ್ನೂ ಓದಿ:ಬೆಳಗಾವಿಯ ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ಬಂದ್: ಡಿಸಿ

ಈ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.