ETV Bharat / state

ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆರ್ಥಿಕ ನೆರವು ನೀಡುವಂತೆ ಸಿಎಂಗೆ ದೇವೇಗೌಡ ಪತ್ರ - ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆರ್ಥಿಕ ನೆರವು

ಕೊರೊನಾ ಕಾರಣದಿಂದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎಷ್ಟೋ ಶಿಕ್ಷಕರು ತಮ್ಮ ವೃತ್ತಿ ಬಿಟ್ಟು ಬೇರೆ ವೃತ್ತಿ ಮಾಡಲು ಹೊರಟಿದ್ದಾರೆ. ಆದ್ದರಿಂದ ಈ ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸರ್ಕಾರ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಿಎಂಗೆ ಪತ್ರ ಬರೆದಿದ್ದಾರೆ.

Former Prime Minister
ಮಾಜಿ ಪ್ರಧಾನಿ
author img

By

Published : Jul 2, 2020, 9:26 PM IST

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ತಕ್ಷಣವೇ ಆರ್ಥಿಕ ನೆರವು ನೀಡಬೇಕೆಂದು ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ.

ಕೋವಿಡ್-19 ಲಾಕ್​​ಡೌನ್ ಪರಿಣಾಮವಾಗಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಉಂಟಾಗಿರುವ ಆರ್ಥಿಕ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿ ನಾನು ತಮಗೆ ಬರೆದ ಪತ್ರಕ್ಕೆ ತಾವು ಪ್ರತಿಕ್ರಿಯೆ ನೀಡಿದ್ದಕ್ಕೆ ಧನ್ಯವಾದಗಳು. ತಾವು ಹಾಗೂ ಕೇಂದ್ರ ಸರ್ಕಾರ ಮೇ 12ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ್ದು, ಅದರ ವಿವರಗಳು ದೊರೆತ ನಂತರ ಪೂರಕವಾಗಿ ಸಾಧ್ಯತೆಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರ ಹೆಚ್ಚುವರಿ ನೆರವು ನೀಡಲು ಯೋಚಿಸುವುದಾಗಿ ಪ್ರತಿಕ್ರಿಯೆ ನೀಡಿದ್ದೀರಿ.

  • ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ತಕ್ಷಣವೇ ಆರ್ಥಿಕ ನೆರವು ನೀಡಬೇಕು ಎಂದು ಕೋರಿ ಮಾನ್ಯ ಮುಖ್ಯಮಂತ್ರಿ @BSYBJP ಅವರಿಗೆ ಪತ್ರ ಬರೆದಿದ್ದೇನೆ.@CMofKarnataka pic.twitter.com/pXblLuiLcd

    — H D Devegowda (@H_D_Devegowda) July 1, 2020 " class="align-text-top noRightClick twitterSection" data=" ">

ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿ ಈಗಾಗಲೇ ಒಂದು ತಿಂಗಳು ಕಳೆದಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಕಾರ್ಯಾರಂಭ ಮಾಡಿವೆ. ಶಿಕ್ಷಕರು ಮತ್ತು ಸಂಸ್ಥೆಗಳ ಆಡಳಿತ ಮಂಡಳಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿರುವ ವಿಚಾರವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಶಿಕ್ಷಕರು ಮತ್ತು ಖಾಸಗಿ ಶಿಕ್ಷಕರ ಫೋರಂನ ಅಧ್ಯಕ್ಷ ಎ.ಪಿ.ರಂಗನಾಥ್ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳು ತಮಗೆ ಒದಗಿ ಬಂದಿರುವ ದುಸ್ಥಿತಿ ಕುರಿತು ಸರ್ಕಾರಕ್ಕೆ ಒತ್ತಡ ಹೇರುವಂತೆ ನನಗೆ ಹಲವು ಬಾರಿ ಒತ್ತಾಯಿಸಿದ್ದಾರೆ.

ಖಾಸಗಿ ಶಾಲೆಗಳ ಶಿಕ್ಷಕರು ಬೋಧನೆ ಮಾಡುವ ಕಾರ್ಯವನ್ನು ಬಿಟ್ಟು ಬೇರೆ ವೃತ್ತಿಗಳನ್ನು ಮಾಡುತ್ತಿರುವುದು ನೋವಿನ ವಿಚಾರ. ಇದನ್ನು ಮಾಧ್ಯಮಗಳ ಮೂಲಕ ತಾವು ಗಮನಿಸಿದ್ದೀರೆಂದು ಭಾವಿಸುತ್ತೇನೆ. ದಯಮಾಡಿ ಕೇಂದ್ರದ ಪ್ಯಾಕೇಜ್ ಘೋಷಣೆಯಂತೆ ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆರ್ಥಿಕ ನೆರವನ್ನು ಹಾಗೆಯೇ ಬಾಕಿಯಿರುವ 1300 ಕೋಟಿ ಆರ್‌ಟಿಐ ಹಣವನ್ನು ಬಿಡುಗಡೆ ಮಾಡಲು ಮನವಿ ಮಾಡಿದ್ದು, ತಾವು ಇದಕ್ಕೆ ಸ್ಪಂದಿಸಿ 250 ಕೋಟಿ ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದಗಳು.

ದಯಮಾಡಿ ತಾವು ತಕ್ಷಣ ಶಿಕ್ಷಕರ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಸಿಎಂಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.