ETV Bharat / state

ಫ್ರೀಡಂ ಪಾರ್ಕ್​ ತಲುಪಿದ ರೈತರ ಪ್ರತಿಭಟನಾ ಮೆರವಣಿಗೆ... ಕೇಂದ್ರದ ವಿರುದ್ಧ ಅನ್ನದಾತರು ಕಿಡಿ

author img

By

Published : Jan 26, 2021, 3:11 PM IST

ರೈತ ಸಂಘ, ಎಐಸಿಟಿಯು, ಅಖಿಲ ಭಾರತ ವಕೀಲರ ವೇದಿಕೆ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಒಂದು ಟ್ರ್ಯಾಕ್ಟರ್ ಮೂಲಕ ಸಾಂಕೇತಿಕವಾಗಿ ರೈತರು ಒಂದು ಱಲಿಯ ಭಾಗವಾಗಿ ಫ್ರೀಡಂ ಪಾರ್ಕ್ ಗೆ ಆಗಮಿಸಿದ್ದು, ಧರಣಿ ನಡೆಸುತ್ತಿದ್ದಾರೆ.

former protest in bengaluru news
ಸ್ವತಂತ್ರ ಉದ್ಯಾನವನ ತಲುಪಿದ ರೈತರ ಮೆರವಣಿಗೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು, ಅವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಱಲಿ ನಗರದ ಸ್ವಾತಂತ್ರ್ಯ ಉದ್ಯಾನವನ ತಲುಪಿದೆ.

ಫ್ರೀಡಂ ಪಾರ್ಕ್​ ತಲುಪಿದ ರೈತರ ಱಲಿ

ಓದಿ: ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರೈತರ ಮೆರವಣಿಗೆ ಆರಂಭ

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ರೈತ ನಾಯಕರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಿ ಅಲ್ಲಿಂದ ಬೃಹತ್ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್​ ತಲುಪಿದ್ದಾರೆ.
ಇಲ್ಲಿ ಸಮಾವೇಶಗೊಂಡ ಬಳಿಕ ತಮ್ಮ ಹೋರಾಟವನ್ನು ಮುಕ್ತಾಯಗೊಳಿಸಲಿದ್ದಾರೆ. ಸಾವಿರಾರು ರೈತ ನಾಯಕರು ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.

ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕೈಗೊಂಡಿರುವ ಮೆರವಣಿಗೆ ಸಂದರ್ಭ ನಗರ ಕೇಂದ್ರ ಭಾಗದ ಸಂಚಾರ ವ್ಯವಸ್ಥೆಯನ್ನು ನಿಲ್ಲಿಸಿ ಬೇರೆಡೆ ಸ್ಥಳಾಂತರಿಸಲಾಗಿತ್ತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ವಿವಿಧ ಸಂಘಟನೆಗಳು ಮೆರವಣಿಗೆ ನಡೆಸಿದವು. ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಿದ್ದ ಮೆರವಣಿಗೆಗೆ ಎಲ್ಲೆಡೆಯಿಂದ ಮುಖಂಡರು ಹಾಗೂ ಕಾರ್ಯಕರ್ತರು ಒಂದು ತಲುಪುವುದು ವಿಳಂಬವಾದ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಮೆರವಣಿಗೆ ಆರಂಭಿಸಲಾಯಿತು.

ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು: ಕುರುಬೂರು

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ಕೈಗೊಂಡಿರುವ ರೈತ ಗಣತಂತ್ರ ಪಥಸಂಚಲನಕ್ಕೆ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಟ್ರ್ಯಾಕ್ಟರ್ ಓಡಿಸುವ ಮೂಲಕ ಬೆಂಬಲ ನೀಡಿದರು.

ಬೆಂಗಳೂರಿನ ಮಾಗಡಿ ರಸ್ತೆಯ ಸೋಮೇನಹಳ್ಳಿ ಗೇಟ್ ಬಳಿ ನೂರಾರು ರೈತರೊಂದಿಗೆ ಟ್ರ್ಯಾಕ್ಟರ್ ಱಲಿ ಆರಂಭಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ಇಂದು ದೇಶದ ರೈತರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದು, ಮನಬಂದಂತೆ ಕಾಯ್ದೆ ರೂಪಿಸುತ್ತಿದೆ. ಇದನ್ನು ವಿರೋಧಿಸಿ ರೈತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅದರ ಪರಿಣಾಮವಾಗಿ ಇದೇ ಮೊದಲ ಬಾರಿಗೆ ದೇಶದ ಗಣರಾಜ್ಯೋತ್ಸವವನ್ನು ಅತಿಥಿಗಳಿಲ್ಲದೇ ನಡೆಸುವಂತಹ ಪರಿಸ್ಥಿತಿಗೆ ಒಳಗಾಗಿದೆ.

ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಶಕ್ತಿ ಸಾಮರ್ಥ್ಯಗಳೇನು ಎಂಬುದನ್ನು ಅರಿತುಕೊಂಡು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಜತೆಗೆ ರೈತ ಸ್ನೇಹಿ ನೀತಿಗಳನ್ನು, ಬೆಂಬಲ ಬೆಲೆಗಳನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ರಾಮನಗರಗಳಿಂದ ಆಗಮಿಸಿದ ನೂರಾರು ರೈತರು ಮಾಗಡಿ ರಸ್ತೆಯ ಸೋಮೇನಹಳ್ಳಿ ಬಳಿ ಸೇರಿ ಅಲ್ಲಿಂದ ನಗರದ ನಾಯಂಡಹಳ್ಳಿ ಜಂಕ್ಷನ್, ಮೈಸೂರು ರಸ್ತೆ ಮೂಲಕ ನಗರದ ಸ್ವಾತಂತ್ರ್ಯ ಉದ್ಯಾನವನಕ್ಕೆ ತೆರಳಿದರು. ಱಲಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ರೈತ ಸಂಘದ ಮುಖಂಡ ಗಿರೀಶ್ ಗೌಡ, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಗೋಪಾಲ್ ಸೇರಿದಂತೆ ನೂರಾರು ರೈತರು ಇದ್ದರು.

ಸಾಂಕೇತಿಕವಾಗಿ ಒಂದು ಟ್ರ್ಯಾಕ್ಟರ್ ಪ್ರವೇಶ..

ರೈತ ಗಣತಂತ್ರ ಪಥಸಂಚಲನದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ರೈತರನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿವೆ‌. ನಗರದ ಹೊರವಲಯದ ವಿವಿಧ ಭಾಗಗಳಿಂದ ಮೆರವಣಿಗೆ ಮೂಲಕ ರೈತರ ಫ್ರೀಡಂ ಪಾರ್ಕ್ ಕಡೆ ಆಗಮಿಸುತ್ತಿದ್ದು, ಅದಕ್ಕೂ ಮೊದಲೇ ವಿವಿಧ ಸಂಘಟನೆಗಳ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತ ಸಂಘ, ಎಐಸಿಟಿಯು, ಅಖಿಲ ಭಾರತ ವಕೀಲರ ವೇದಿಕೆ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಒಂದು ಟ್ರ್ಯಾಕ್ಟರ್ ಮೂಲಕ ಸಾಂಕೇತಿಕವಾಗಿ ರೈತರು ಒಂದು ಟ್ರ್ಯಾಕ್ಟರ್ ಮೂಲಕ ರ್ಯಾಲಿಯ ಭಾಗವಾಗಿ ಫ್ರೀಡಂ ಪಾರ್ಕ್ ಗೆ ಆಗಮಿಸಿದ್ದು ಧರಣಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಱಲಿ ಆಗಮಿಸುವ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಮುಂದಿನ ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.