ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೂರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆಯ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದ್ದು, ಕಚೇರಿಯ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ರಕ್ತಸ್ರಾವದಲ್ಲಿ ಕೆಳಗೆ ಬಿದ್ದಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಕೊಲೆ ಮಾಡಿರುವ ಭೀಕರ ವಿಡಿಯೋ ಇದೀಗ ವೈರಲ್ ಆಗಿದೆ.
ಛಲವಾದಿ ಪಾಳ್ಯದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳಾದ ಸೂರ್ಯ ಹಾಗೂ ಪೀಟರ್ನ ಮೇಲೆ ಪೊಲೀಸರು ಗುಂಡು ಹಾರಿಸಿ ಇಂದು ಬಂಧನ ಮಾಡಿದ್ದಾರೆ. ಆರೋಪಿಗಳ ಹೆಡೆ ಮುರಿಕಟ್ಟಲು ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಆರು ತಂಡಗಳಾಗಿ ವಿಭಾಗಿಸಿ ನಿನ್ನೆ ರಾತ್ರಿ ಶೋಧ ಕಾರ್ಯಾಚರಣೆ ಕೈಗೊಂಡಿತ್ತು.
ಇದನ್ನೂ ಓದಿರಿ: ರೇಖಾ ಕದಿರೇಶ್ ಕೊಲೆ ಪ್ರಕರಣ : ಆರೋಪಿಗಳನ್ನು ಬಂಧಿಸಿದ್ದೇ ಬಲು ರೋಚಕ
ಹಳೆ ವೈಷಮ್ಯದಿಂದ ರೇಖಾ ಅವರ ಹತ್ಯೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದ್ದು ಮೂರು ವರ್ಷಗಳ ಹಿಂದೆ 2018ರ ಫೆಬ್ರವರಿ 7ರಂದು ರೇಖಾ ಅವರ ಪತಿ ಕದಿರೇಶ್ ಅವರನ್ನು ಸಹ ಇದೇ ರೀತಿ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದರು.