ಯಲಹಂಕ( ಬೆಂಗಳೂರು): ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ತಮ್ಮ ಕಂಪನಿಯ ಹುಡುಗಿಗೆ ಮೆಸೇಜ್ ಮಾಡಿದ್ದಾನೆಂದು ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ತಾಲೂಕಿನ ಬಾಗಲೂರು ಕೆ.ಐ.ಎ.ಡಿ.ಬಿ ಪ್ರದೇಶದಲ್ಲಿರುವ ಅಮೆಜಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಂದ್ರ (23) ಕೊಲೆ ಯತ್ನಕ್ಕೆ ಒಳಗಾದ ಯುವಕ.
ಹುಡುಗಿಗೆ ಮೆಸೇಜ್ ಮಾಡಿದ್ದಾನೆಂಬ ಕಾರಣಕ್ಕೆ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಜನವರಿ 31 ರಂದು ಚಾಕುವಿನಿಂದ ಚುಚ್ಚಿ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬೆನ್ನು ಹತ್ತಿದ್ದರು.
ಓದಿ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ..
ಘಟನೆ ನಡೆದ ಮೂರೇ ದಿನದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಮೋಹನ್ (21), ಕಾಕೇಶ್ (20) , ವರುಣ್ ಕುಮಾರ್ (21), ಸೂರಜ್ (20) ಬಂಧಿತ ಆರೋಪಿಗಳಾಗಿದ್ದು, ಕೃತ್ಯಕ್ಕೆ ಬಳಸಿದ ಒಂದು ಚಾಕು ಮತ್ತು ಎರಡು ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.