ETV Bharat / state

ವಿಳಾಸ ಕೇಳುವ ನೆಪದಲ್ಲಿ ಬೈಕ್ ಅಡ್ಡಗಟ್ಟಿ ಸುಲಿಗೆ, ನಾಲ್ವರು ಆರೋಪಿಗಳ ಬಂಧನ

author img

By ETV Bharat Karnataka Team

Published : Dec 12, 2023, 7:35 PM IST

ರಾತ್ರಿ ವೇಳೆ ವಿಳಾಸ ಕೇಳುವ ನೆಪದಲ್ಲಿ ಬೈಕ್ ಅಡ್ಡಗಟ್ಟಿ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಮಹದೇವಪುರ ಠಾಣೆ‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೊಬೈಲ್, ಬೈಕ್, ಎಟಿಎಂ ಕಾರ್ಡ್ ಜಪ್ತಿ ಮಾಡಲಾಗಿದೆ.​

accused arrested
ಆರೋಪಿಗಳ ಬಂಧನ

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ರಾತ್ರಿ ವೇಳೆ ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಚಾಕು ತೋರಿಸಿ ಫೋನ್ ಸೇರಿದಂತೆ ಬೈಕ್ ಎಟಿಎಂ ಕಾರ್ಡ್​ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಮಹದೇವಪುರ ಠಾಣೆ‌ ಪೊಲೀಸರು ಬಂಧಿಸಿದ್ದಾರೆ.

ಸುಲಿಗೆಗೆ ಒಳಗಾಗಿದ್ದ ಮೊಹಮ್ಮದ್ ಫೈದಲ್ ದೂರು ನೀಡಿದ ಹಿನ್ನೆಲೆ ಆರೋಪಿಗಳಾದ ರವಿಕುಮಾರ್, ಅಮೀನ್ ಹಾಗೂ ಪ್ರಶಾಂತ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 16 ಲಕ್ಷ ಬೆಲೆ ಬಾಳುವ ಯಮಹಾ ಬೈಕ್ ಸೇರಿ ಒಂದು ಆ್ಯಪಲ್ ಪೋನ್ ವಶಕ್ಕೆ ಪಡೆದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನವೆಂಬರ್ 28ರಂದು ಮೊಹಮ್ಮದ್ ಫೈದಲ್ ಸ್ನೇಹಿತನೊಂದಿಗೆ ವೈಟ್ ಫೀಲ್ಡ್ ಗೆ ಹೋಗುತ್ತಿದ್ದ ಮಾರ್ಗ ಮಧ್ಯೆ ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿದ್ದ ಆರೋಪಿಗಳು, ಚಾಕು ತೋರಿಸಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಫೋನ್, ಬೈಕ್ ಹಾಗೂ ಎಟಿಎಂ ಕಾರ್ಡ್​ ಕಸಿದುಕೊಂಡಿದ್ದಾರೆ. ನಂತರ ಆತಂಕಕ್ಕೊಳಗಾಗಿ ಫೈದಲ್ ಓಡಿ ಹೋಗಿದ್ದರು.

ಈ ಸಂಬಂಧ ಮೊಹಮ್ಮದ್ ಫೈದಲ್ ದೂರು ದಾಖಲಿಸಿದ್ದರು. ದೂರು ದಾಖಲಾದ ಬಳಿಕ ಕಾರ್ಯಾಚರಣೆ ಕೈಗೊಂಡ ಪೊಲೀಸರು ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ವಿಳಾಸ ಕೇಳುವ ನೆಪದಲ್ಲಿ ಸಾರ್ವಜನಿಕರಿಂದ ಬೈಕ್, ಮೊಬೈಲ್ ಹಾಗೂ ಪರ್ಸ್​ಗಳನ್ನು ಸುಲಿಗೆ ಮಾಡುವ ಪ್ರವೃತ್ತಿ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಂಕೆ ಚರ್ಮ ಕೊಂಬು ಮಾರಾಟ, ಆರೋಪಿ ಸೆರೆ: ನಗರದಲ್ಲಿ ಜೆಂಕೆ‌ ಚರ್ಮ ಹಾಗೂ ಕೊಂಬು ಮಾರಾಟಕ್ಕೆ‌ ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಸಾಗರ ಮೂಲದ ಚಂದ್ರಶೇಖರಪ್ಪ ಎಂಬಾತನು ಬಂಧಿತ ಆರೋಪಿ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಜೆಂಕೆ ಚರ್ಮ ಹಾಗೂ ಕೊಂಬುಗಳ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿ, ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.

ಇನ್ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ವಂಚನೆ :ದಂಪತಿ ಬಂಧನ - ಪ್ರತಿಷ್ಠಿತ ಇನ್ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಅವಧಿ ಪೂರ್ವ ಪಾಲಿಸಿಗಳನ್ನು ಹಿರಿಯ ನಾಗರಿಕರಿಗೆ ನೀಡುವುದಾಗಿ ವಂಚಿಸುತ್ತಿದ್ದ ದಂಪತಿಯನ್ನ ಸಿಸಿಬಿಯ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉದಯ್.ಬಿ ಹಾಗೂ ತೀರ್ಥಾ ಗೌಡ ಬಂಧಿತ ದಂಪತಿ.

ಈ ಹಿಂದೆ ಇನ್ಶೂರೆನ್ಸ್ ಕಂಪನಿಯಲ್ಲಿ ಕೆಲಸ‌ ಮಾಡುತ್ತಿದ್ದ ದಂಪತಿಗಳಿಬ್ಬರಿಗೂ ಅದರ ಜ್ಞಾನವಿತ್ತು. ಕೋವಿಡ್ ನಂತರ ಬರುತ್ತಿದ್ದ ಆದಾಯ ಇಬ್ಬರಿಗೂ ಸಾಕಾಗುತ್ತಿರಲಿಲ್ಲ. ಇದರಿಂದ ಅಡ್ಡದಾರಿ ಹಿಡಿದಿದ್ದ ದಂಪತಿಗಳು, ಇಂದಿರಾನಗರದಲ್ಲಿ ಶ್ರೀನಿಧಿ ಇನ್ಫೋಸೋರ್ಸ್ ಎಂಬ ಕಚೇರಿ ಆರಂಭಿಸಿದ್ದರು.

ಸದ್ಯ ಆರೋಪಿಗಳಾದ ದಂಪತಿ ಬಂಧಿಸಿದ್ದು, ಸುಮಾರು 1.80 ಕೋಟಿ ರೂ ವಂಚಿಸಿ, 40 ಲಕ್ಷ ರೂ ಹಣವನ್ನು ತಮ್ಮ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರಿಕರಿಗೆ ವಂಚನೆ ಮಾಡಿರುವ ಬಗ್ಗೆ ತನಿಖೆಯಿಂದ ಬೆಳಕಿಗೆ ಬಂದಿದೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಲಾಗಿದ್ದು, ಇದೇ ರೀತಿ 290 ವಂಚನೆಯ ಪ್ರಕರಣಗಳು ತನಿಖೆಯಿಂದ ಪತ್ತೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಇದನ್ನೂಓದಿ:ಮಗನ 'ಪ್ರೀತಿ', ತಾಯಿಗೆ ಶಿಕ್ಷೆ; ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.