ಬೆಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಕರ ಗಮನ ಬೇರಡೆ ಸೆಳೆದು, ಚಿನ್ನದ ಸರ ಮತ್ತು 50 ಸಾವಿರ ರೂಪಾಯಿ ಎಗರಿಸಿದ್ದ ನಾಲ್ವರು ಆರೋಪಿಗಳನ್ನು ಉಪ್ಪಾರ ಪೇಟೆ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಎಗರಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.19 ರಂದು ಹಾಸನದಿಂದ ಬೆಂಗಳೂರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಬೇರೆಡೆ ಗಮನ ಬೇರೆಡೆ ಸೆಳೆದು 50 ಗ್ರಾಂ ತೂಕದ ಚಿನ್ನದ ಸರ, 50 ಸಾವಿರ ರೂಪಾಯಿ ನಗದನ್ನು ಆರೋಪಿಗಳು ಕದ್ದಿದ್ದಾರೆ. ಮೆಜೆಸ್ಟಿಕ್ಗೆ ಬಸ್ ಬಂದಾಗ ಬ್ಯಾಗ್ ನಾಪತ್ತೆಯಾಗಿರುವ ವಿಚಾರ ಬಯಲಾಗಿತ್ತು.
ಈ ಕುರಿತು ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ ಪೊಲೀಸರು ಅಫ್ರೋಜ್, ಲೋಹಿತ್, ರವಿ, ಅಕ್ಷಯ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ಉಪ್ಪಾರಪೇಟೆ, ಕಾಟನ್ ಪೇಟೆ, ಕೆಂಗೇರಿ ,ಬ್ಯಾಟರಾಯನಪುರ ಮತ್ತು ವಿಜಯನಗರ ಕಡೆಗಳಲ್ಲಿ ಕಳವು ಮಾಡಿರುವ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗ್ತಿದೆ.