ETV Bharat / state

ರಾಜ್ಯಕ್ಕೆ ಎಂಟ್ರಿ ಕೊಟ್ಟ ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪನಿ: ರಾಜ್ಯ ಸರ್ಕಾರದ ಜೊತೆ ಫಾಕ್ಸ್ ಕಾನ್ ಕಂಪನಿ ಒಡಂಬಡಿಕೆ - ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಫಾಕ್ಸ್ಕಾನ್ ಅಧ್ಯಕ್ಷ ಯಂಗ್ ಲ್ಯೂ ಪರಸ್ಪರ ಸಮಾಲೋಚನೆ ನಡೆಸಿ ರಾಜ್ಯದಲ್ಲಿ ಹೂಡಿಕೆ ಮಾಡುವ ಒಡಂಬಡಿಕೆಗಳಿಗೆ ಸಹಿ ಹಾಕಿದ್ದಾರೆ.

ರಾಜ್ಯ ಸರ್ಕಾರದ ಜೊತೆ ಫಾಕ್ಸ್ ಕಾನ್ ಕಂಪೆನಿ ಒಡಂಬಡಿಕೆ

author img

By

Published : Mar 3, 2023, 10:55 PM IST

ರಾಜ್ಯ ಸರ್ಕಾರದ ಜೊತೆ ಫಾಕ್ಸ್ ಕಾನ್ ಕಂಪನಿ ಒಡಂಬಡಿಕೆ

ಬೆಂಗಳೂರು : ವಿಶ್ವದ ಅತಿ ದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರಾಜ್ಯದಲ್ಲಿ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ನಗರದ ಖಾಸಗಿ ಹೋಟೆಲ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಫಾಕ್ಸ್ಕಾನ್ ಅಧ್ಯಕ್ಷ ಯಂಗ್ ಲ್ಯೂ ಅವರೊಂದಿಗೆ ಸಭೆ ನಡೆಸಿದರು. ಪರಸ್ಪರ ಸಮಾಲೋಚನೆ ನಂತರ ರಾಜ್ಯದಲ್ಲಿ ಹೂಡಿಕೆ ಮಾಡುವ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಡಂಬಡಿಕೆಯಿಂದಾಗಿ ರಾಜ್ಯದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಉದ್ಯಮ ಸ್ಥಾಪನೆಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕುಗಳಲ್ಲಿ 300 ಎಕರೆ ಭೂಮಿ ಗುರುತಿಸಲಾಗಿದೆ. ಈ ಸ್ಥಳವನ್ನು ಈಗಾಗಲೇ ಹೂಡಿಕೆದಾರರು ಪರಿಶೀಲನೆ ನಡೆಸಿ ಆ ಜಾಗದಲ್ಲಿ ತಯಾರಿಕಾ ಘಟಕವನ್ನು ನಿರ್ಮಿಸಲು ಉತ್ಸುಕತೆ ತೋರಿಸಿದ್ದಾರೆ. ‌

ಕೌಶಲ್ಯಯುತ ಮಾನವ ಸಂಪನ್ಮೂಲ: ಒಡಂಬಡಿಕೆ ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರವು ಫಾಕ್ಸ್ ಕಾನ್​ಗೆ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಪರಿಣತಿಗೆ ಹೆಸರಾದ ಕಂಪೆನಿ ಫಾಕ್ಸ್‌ ಕಾನ್‌ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವುದು ಸಂತಸ ತಂದಿದೆ. ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿವೆ. ಐಟಿಐಗಳನ್ನು ಇತ್ತೀಚೆಗಷ್ಟೇ ಉನ್ನತೀಕರಿಸಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಅಂತೆಯೇ ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್​ಗಳು ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಅತ್ಯುತ್ತಮ ತಾಂತ್ರಿಕ ಶಿಕ್ಷಣವನ್ನು ನೀಡುವ ಮೂಲಕ ಕೌಶಲ್ಯಯುತ ಮಾನವ ಸಂಪನ್ಮೂಲ ಸೃಜಿಸಲಾಗುತ್ತಿದೆ ಎಂದು ವಿವರಿಸಿದರು.

ತಾಂತ್ರಿಕ ತರಬೇತಿ: ಬೆಂಗಳೂರಿನಲ್ಲಿ ಸುಮಾರು 400 ಸರ್ಕಾರಿ ಹಾಗೂ ಖಾಸಗಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು. ಅಂತೆಯೇ ರಾಜ್ಯವು ಅತ್ಯುತ್ತಮ ಸೆಮಿ - ಕಂಡಕ್ಟರ್‌ ನೀತಿ ಹೊಂದಿದ್ದು, ಈ ವಲಯದಲ್ಲಿಯೂ ಹೂಡಿಕೆ ಮಾಡುವ ಕುರಿತು ಪರಿಶೀಲಿಸುವಂತೆ ಸಲಹೆ ನೀಡಿದರು. ಇದಲ್ಲದೇ ತಾಂತ್ರಿಕ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಲಹೆ ನೀಡಿದರು.

ಸೆಮಿಕಂಡಕ್ಟರ್‌ ವಲಯದಲ್ಲಿ ಹೂಡಿಕೆ: ಈ ಸಂದರ್ಭದಲ್ಲಿ ಮಾತನಾಡಿದ ಫಾಕ್ಸ್‌ ಕಾನ್‌ ಅಧ್ಯಕ್ಷ ಯಂಗ್‌ ಲಿಯು, ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ್ದು, ಸೆಮಿಕಂಡಕ್ಟರ್‌ ವಲಯದಲ್ಲಿ ಹೂಡಿಕೆಯ ಕುರಿತು ಪರಿಶೀಲಿಸುವುದಾಗಿ ತಿಳಿಸಿದರು.

500 ಕಂಪೆನಿಗಳಲ್ಲಿ 20ನೇ ಸ್ಥಾನ: ಫಾಕ್ಸ್‌ ಕಾನ್‌ ಕಂಪೆನಿಯು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪೆನಿಯಾಗಿದ್ದು, 2022 ರಲ್ಲಿ NT$ 6 trillion ಗೂ ಹೆಚ್ಚು ವಹಿವಾಟು ನಡೆಸಿದೆ. ಜಗತ್ತಿನ ಫಾರ್ಚೂನ್‌ 500 ಕಂಪೆನಿಗಳಲ್ಲಿ 20ನೇ ಸ್ಥಾನದಲ್ಲಿದೆ. ವಿಶ್ವದ 24 ದೇಶಗಳಲ್ಲಿ 173 ಕ್ಯಾಂಪಸ್‌ ಗಳನ್ನು ಹೊಂದಿರುವ ಕಂಪನಿಯು ಮುಖ್ಯವಾಗಿ ಸ್ಮಾರ್ಟ್‌ ಫೋನ್‌, ಟಿವಿಗಳು, ಗೇಮ್‌ ಕನ್ಸೋಲ್ಸ್‌, ಕ್ಲೌಡ್‌ ಮತ್ತು ನೆಟ್‌ ವರ್ಕಿಂಗ್‌ ಉತ್ಪನ್ನಗಳು, ಕಂಪ್ಯೂಟಿಂಗ್‌ ಉತ್ಪನ್ನಗಳು ಮತ್ತು ಇತರ ಬಿಡಿ ಭಾಗಗಳ ಉತ್ಪಾದನೆಯಲ್ಲಿ ತೊಡಗಿದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್ ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಇ. ವಿ. ರಮಣರೆಡ್ಡಿ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್​.ಎನ್. ಪ್ರಸಾದ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ನವ ಬೆಂಗಳೂರು ನಿರ್ಮಾಣ ನಮ್ಮ ಸಂಕಲ್ಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.