ETV Bharat / state

ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು - ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್

ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಚೈತ್ರಾಗೆ ಜಾಮೀನು ಸಿಕ್ಕಿದೆ.

Chaitra gets bail in fraud case
ವಂಚನೆ ಪ್ರಕರಣ ಆರೋಪಿ ಚೈತ್ರಾಗೆ ಜಾಮೀನು
author img

By ETV Bharat Karnataka Team

Published : Dec 4, 2023, 11:02 PM IST

Updated : Dec 5, 2023, 6:54 AM IST

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು.

ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಮಂಗಳವಾರ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಂತಾಗಿದೆ.

ವಂಚನೆ ಸಂಬಂಧ ಉದ್ಯಮಿ ಗೋವಿಂದಬಾಬು ಪೂಜಾರಿ ಸೆ.8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಾಮೀಜಿ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ಚೈತ್ರಾ ಸೇರಿದಂತೆ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿಯು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ. ಪ್ರಕರಣದ ಪ್ರಮುಖ ಆರೋಪಿ ಆಗಿರುವ ಚೈತ್ರಾ, ಗಗನ್, ಹಾಲಶ್ರೀ ಸ್ವಾಮೀಜಿ, ರಮೇಶ್, ಪ್ರಜ್ವಲ್, ಶ್ರೀಕಾಂತ್, ಪ್ರಸಾದ್ ಬೈಂದೂರು ಸೇರಿ 9 ಮಂದಿ ಆರೋಪಿಗಳ ವಿರುದ್ಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.

ಆರೋಪಿಗಳು ಅಕ್ರಮ ಹಣದಿಂದ ಸಂಪಾದಿಸಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಕೆಲ ಆಸ್ತಿಗಳ ಪತ್ರಗಳು ಸೇರಿ 4 ಕೋಟಿ ರೂಪಾಯಿಗೂ ಅಧಿಕ ವಶಕ್ಕೆೆ ಪಡೆದುಕೊಳ್ಳಲಾಗಿತ್ತು. ಅಲ್ಲದೆ, ತನಿಖೆ ಪೂರ್ಣಗೊಳಿಸಿ ಇತ್ತೀಚೆಗಷ್ಟೇ 9 ಮಂದಿ ಆರೋಪಿಗಳ ವಿರುದ್ಧ ಕೋರ್ಟ್‌ಗೆ ಸಿಸಿಬಿ ಆರೋಪಪಟ್ಟಿ ಕೂಡ ಸಲ್ಲಿಸಿತ್ತು. ಈ ಹಿಂದೆ ಹೊಸಕೋಟೆಯ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಸಿಕ್ಕಿತ್ತು.

ಓದಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

Last Updated : Dec 5, 2023, 6:54 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.