ಬೆಂಗಳೂರು: ನಗರದ ಮಣಪ್ಪುರಂ ಗೋಲ್ಡ್ ಫೈನಾನ್ಸ್ ಶಾಖೆಯಲ್ಲಿ ಕೋಟಿಗಟ್ಟಲೆ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗಳೇ ಈ ಕೃತ್ಯ ಎಸಗಿದ್ದಾರೆ. ಈ ಸಂಬಂಧ ಉತ್ತರ ವಿಭಾಗದ ಯಶವಂತಪುರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಲ್ಡ್ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕಲಾವತಿ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೋನಿಷಾ, ಶಂಕರ್, ಶಿವಕುಮಾರ್ ಹಾಗು ಅಮರನಾಥ್ ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳು ಗ್ರಾಹಕರು ಅಡಮಾನವಾಗಿಟ್ಟ ಚಿನ್ನವನ್ನು ಬೇರೆಡೆ ಹೆಚ್ಚಿನ ಬಡ್ಡಿಗೆ ಅಡವಿಟ್ಟು ದುಡ್ಡು ಮಾಡುತ್ತಿದ್ದರು. ಅಲ್ಲದೇ ಹರಾಜಿಗೆ ಬಂದ ಚಿನ್ನದಲ್ಲೂ ಮೋಸ ಮಾಡಿದ್ದು ಬೆಳಕಿಗೆ ಬಂದಿದೆ. ಆಡಿಟ್ಗೆ ಬಂದಾಗ ವಿದ್ಯುತ್ ಕಡಿತಗೊಳಿಸಿ ಆಡಿಟ್ ಆಗದಂತೆಯೂ ನೋಡಿಕೊಳ್ಳುತ್ತಿದ್ದರು. ಹೀಗೆ ಅಂದಾಜು 2 ಕೋಟಿ ರೂಪಾಯಿ ವಂಚಿಸಿದ್ದಾರೆ ಎನ್ನಲಾಗುತ್ತಿದೆ.
ಈ ಸಂಬಂಧ ಸಂಸ್ಥೆಯೂ ದೂರು ನೀಡಿದೆ. ಪೊಲೀಸರು ಎಫ್.ಐ.ಆರ್ ದಾಖಲಿಸಿ ಈಗಾಗಲೇ ನಾಲ್ವರನ್ನು ಬಂಧಿಸಿದ್ದು ಉಳಿದ ಆರೋಪಿಗಳಿಗೆ ಬಲೆಬೀಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ: ಮೂವರು ಸೆರೆ