ಬೆಂಗಳೂರು: ಐಟಿ ಅಧಿಕಾರಿ ಸೋಗಿನಲ್ಲಿ ವಂಚಿಸಿ ಪರಾರಿಯಾಗುತ್ತಿದ್ದ ವಂಚಕನನ್ನು ಬಾಗಲೂರು ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಗ್ರಾಹಕರ ಸೋಗಿನಲ್ಲಿ ಜ್ಯೂವೆಲ್ಲರಿ ಶಾಪ್ಗೆ ಬಂದಿದ್ದ ಆರೋಪಿ ದೊಡ್ಡಬಳ್ಳಾಪುರದ ವಿಶಾಲ್ ಬಂಧಿತ ಆರೋಪಿ.
ಐಷಾರಾಮಿ ಜೀವನ ನಡೆಸಲು ಆರೋಪಿಯು ಚಿನ್ನದಂಗಡಿಗಳಿಗೆ ಹೋಗಿ ಆದಾಯ ತೆರಿಗೆ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಲಕ್ಷಾಂತರ ಮೌಲ್ಯದ ಆಭರಣವನ್ನ ಖರೀದಿಯ ಬಳಿಕ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡುವುದಾಗಿ ಹೇಳುತ್ತಿದ್ದ. ಹಣ ಪಾವತಿಯಾಗಿರುವ ಜ್ಯೂವೆಲ್ಲರಿ ಶಾಪ್ ಮಾಲೀಕರಿಗೆ ನಕಲಿ ಸಂದೇಶ ಕಳುಹಿಸಿ ವಂಚನೆ ಎಸಗುತ್ತಿದ್ದನು.
ಹೀಗೆ ವಂಚಿಸಿದ ಆಭರಣಗಳನ್ನ ವಿಲೇವಾರಿ ಮಾಡುವಾಗ ಆರೋಪಿಯು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.