ETV Bharat / state

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ವನಿತಾ ಸಂಗಾತಿ ಯೋಜನೆ: ಉಚಿತ ಮಾಸಿಕ ಪಾಸ್​​​ ಪಡೆಯಲು ಹೀಗೆ ಮಾಡಿ!

author img

By

Published : Dec 21, 2021, 9:45 PM IST

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು( ಬಿಎಂಟಿಸಿ) ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸಲು ಹಾಗೂ ಆರ್ಥಿಕ ಸಹಾಯ ಮಾಡಲು ವನಿತಾ ಸಂಗಾತಿ ಯೋಜನೆಯಡಿ ಉಚಿತವಾಗಿ ಮಾಸಿಕ ಬಸ್‌ ಪಾಸುಗಳನ್ನು ಜನವರಿ-22 ರಿಂದ ವಿತರಣೆ ಮಾಡಲು ತಯಾರಿ ನಡೆದಿದೆ.

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ವನಿತಾ ಸಂಗಾತಿ ಯೋಜನೆ

ಬೆಂಗಳೂರು: ನಗರದಲ್ಲಿ ಸುಮಾರು 850ಕ್ಕಿಂತಲೂ ಹೆಚ್ಚಿನ ಗಾರ್ಮೆಂಟ್ಸ್ ಕಾರ್ಖಾನೆಗಳಿದ್ದು, ಈ ಗಾರ್ಮೆಂಟ್ಸ್‌ಗಳಲ್ಲಿ ಸುಮಾರು 3 ಲಕ್ಷಕ್ಕಿಂತಲೂ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ‌ಇದರಲ್ಲಿ ಶೇ.80 ಕ್ಕಿಂತ ಹೆಚ್ಚು ಮಹಿಳಾ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸದ್ಯ ಮಹಿಳಾ ನೌಕರರು ಪ್ರತಿ ನಿತ್ಯ ತಮ್ಮ ಕರ್ತವ್ಯ ಸ್ಥಳಕ್ಕೆ ಹೋಗಲು ಹಾಗೂ ವಾಸಸ್ಥಳಕ್ಕೆ ಹಿಂದಿರುಗಲು ಖಾಸಗಿ ಬಸ್​​​​, ಆಟೋ ಹಾಗೂ ಇತರ ಖಾಸಗಿ ಸಂಸ್ಥೆಯ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ.

ಹೀಗಾಗಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು( ಬಿಎಂಟಿಸಿ) ಕಾರ್ಮಿಕ ಇಲಾಖೆಯ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸಲು ಹಾಗೂ ಆರ್ಥಿಕ ಸಹಾಯವನ್ನು ಮಾಡಲು ವನಿತಾ ಸಂಗಾತಿ ಯೋಜನೆಯಡಿ ಉಚಿತವಾಗಿ ಮಾಸಿಕ ಬಸ್‌ ಪಾಸುಗಳನ್ನು ಜನವರಿ-22 ರಿಂದ ವಿತರಣೆ ಮಾಡಲು ತಯಾರಿ ನಡೆದಿದೆ.

ಪಾಸು ಪಡೆಯುವ ವಿಧಾನ ಹೇಗೆ :

ವನಿತಾ ಸಂಗಾತಿ ಪಾಸು ಪಡೆಯಲಿಚ್ಚಿಸುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರು, ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್‌ ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಗಾರ್ಮೆಂಟ್ಸ್‌ ಮಾಲೀಕರು ಪಾಸು ಪಡೆಯಲಿಚ್ಚಿಸುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ - ಮೇಲ್‌ ವಿಳಾಸ www.welfarecommissioner123@gmail.com ಗೆ ಸಲ್ಲಿಸಬೇಕು.

ವನಿತಾ ಸಂಗಾತಿ ಪಾಸಿಗಾಗಿ ಗಾರ್ಮೆಂಟ್ಸ್‌ ಮಾಲೀಕರಿಂದ ಸ್ವೀಕರಿಸುವ ಕೋರಿಕೆಗಳನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಪರಿಶೀಲಿಸಿ, ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬೆಂ.ಮ.ಸಾ. ಸಂಸ್ಥೆಗೆ ಒದಗಿಸಲಿದೆ.

ಬಿಎಂಟಿಸಿ ಸಂಸ್ಥೆಯು,ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸ್ವೀಕರಿಸುವ ಪಟ್ಟಿಗನುಸಾರವಾಗಿ, ಗಾರ್ಮೆಂಟ್ಸ್‌ ಮಾಲೀಕರಿಂದ ಅವ‍ಶ್ಯ ದಾಖಲೆಗಳ ಪ್ರತಿಗಳನ್ನು (ಹಾರ್ಡ್‌ ಕಾಫಿ) ಹಾಗೂ ಗಾರ್ಮೆಂಟ್ಸ್‌ ಮಾಲೀಕರ ಪಾಲಿನ ಮೊತ್ತ ಶೇ.40 ರಷ್ಟನ್ನು ಪಡೆದು (ಆರ್‌.ಟಿ.ಜಿ.ಎಸ್‌/ ಎನ್.ಇ.ಎಫ್‌.ಟಿ ಮೂಲಕ), ವನಿತಾ ಸಂಗಾತಿ ಪಾಸುಗಳನ್ನು ಕೆಂಪೇಗೌಡ ಬಸ್‌ ನಿಲ್ದಾಣ ಪಾಸು ಕೌಂಟರ್‌ನಿಂದ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ವನಿತಾ ಸಂಗಾತಿ ಪಾಸುಗಳನ್ನು ಪಡೆಯುವ ಗಾರ್ಮೆಂಟ್ಸ್‌ ಮಹಿಳಾ ಕಾರ್ಮಿಕರು ಬೆಂ.ಮ.ಸಾ.ಸಂಸ್ಥೆಯ ಮಾಸಿಕ ಪಾಸಿನ ಗುರುತಿನ ಚೀಟಿಯನ್ನು ಪಡೆಯಬಹುದು. ವನಿತಾ ಸಂಗಾತಿ ಪಾಸುಗಳನ್ನು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲ ಸಾಮಾನ್ಯ ಸೇವೆಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗಾರ್ಮೆಂಟ್ಸ್‌ ಮಾಲೀಕರು ಜನವರಿ 2022 ರ ಅವಶ್ಯವಿರುವ ವನಿತಾ ಸಂಗಾತಿ ಪಾಸುಗಳ ಬೇಡಿಕೆಯನ್ನು ದಿನಾಂಕ 22.12.2021 ರಿಂದ ಕಾರ್ಮಿಕ ಇಲಾಖೆಗೆ ಸಲ್ಲಿಸಬಹುದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.