ETV Bharat / state

ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ.. ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿಎಂ - ಕರ್ನಾಟಕದಲ್ಲಿ ಬಸ್ ಪ್ರಯಾಣ ಉಚಿತ

Shakti Scheme, Free bus travel for women: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಆರಂಭ. ಶಕ್ತಿ ಯೋಜನೆ ಜಾರಿ ಬಳಿಕ ಬಸ್​ಗೆ ನಮಸ್ಕರಿಗೆ ಸಂಚರಿಸಿದ ವೃದ್ಧೆಯ ಫೋಟೋ ಪೋಸ್ಟ್ ಮಾಡಿ, ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿದ್ದರಾಮಯ್ಯ.

Free Bus Shakti Scheme
Free Bus ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ
author img

By

Published : Jun 12, 2023, 7:32 AM IST

Updated : Jun 12, 2023, 12:52 PM IST

ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ

ಬೆಂಗಳೂರು/ಧಾರವಾಡ: ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್​ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ.

ಬಸ್​ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಕೂಟ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. 'ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು' ಎಂದು ಸಿಎಂ ಬರೆದುಕೊಂಡಿದ್ದಾರೆ.

ಸಿಎಂ ಸಂತೃಪ್ತಿ: 'ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೇ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್​​​ಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.

Free Bus Shakti Scheme
ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು' ಎಂದು ವೃದ್ಧೆ ಬಸ್‌ ಏರುವ ಸಂದರ್ಭ ನಮಸ್ಕರಿಸುತ್ತಿರುವ ಚಿತ್ರವನ್ನು ಸಿಎಂ ಲಗತ್ತಿಸಿದ್ದಾರೆ.

  • ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ… pic.twitter.com/eR1f5tdE02

    — Siddaramaiah (@siddaramaiah) June 11, 2023 " class="align-text-top noRightClick twitterSection" data=" ">

ಇದನ್ನೂ ಓದಿ: Congress Guarantee Scheme: ಮಹಿಳೆಯರಿಗೆ ಬಹುನಿರೀಕ್ಷಿತ ಉಚಿತ ಬಸ್​ ಪ್ರಯಾಣ .. ಇಲ್ಲಿದೆ ಶಕ್ತಿ ಯೋಜನೆಯ ಸಮಗ್ರ ಚಿತ್ರಣ

ಬೆಳಗಾವಿ ಜಿಲ್ಲೆ ಸಂಗೊಳ್ಳಿ ಗ್ರಾಮದ ನಿಂಗವ್ವ ಸಿಂಗಾಡಿ ಅವರು ತನ್ನ ಮೊಮ್ಮಗನ ಮನೆ ಗೃಹ ಪ್ರವೇಶಕ್ಕೆ ಎಂದು ಧಾರವಾಡದಿಂದ ಸವದತ್ತಿಗೆ ಹೊರಟಿದ್ದರು. ಈ ವೇಳೆ, ಅವರು ಮೊದಲ ಬಾರಿಗೆ ಉಚಿತವಾಗಿ ಪ್ರಯಾಣಿಸುವ ಮುನ್ನ ಧಾರವಾಡ - ಗೋಕಾಕ ಬಸ್​ಗೆ ನಮಸ್ಕರಿಸಿ ಬಳಿಕ ಬಸ್​ನಲ್ಲಿ ಹತ್ತಿದರು. ಇದು ಚಿತ್ರದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.

  • ಮುಖ್ಯಮಂತ್ರಿ @siddaramaiah ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸುವ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. pic.twitter.com/cZbdux4wRw

    — CM of Karnataka (@CMofKarnataka) June 11, 2023 " class="align-text-top noRightClick twitterSection" data=" ">

ಬೆಂಗಳೂರಿನ ವಿಧಾನಸೌಧ ಮುಂದೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯ ನಂತರ ಬಸ್‌ನಲ್ಲೇ ಮೆಜೆಸ್ಟಿಕ್‌ಗೆ ಪ್ರಯಾಣ ಬೆಳೆಸಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸೇರಿದಂತೆ ಸಂಪುಟದ ಹಲವು ಸಚಿವರು ಸಾಥ್‌ ಕೊಟ್ಟಿದ್ದರು.

  • ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಬರಹಾಧಾರಿತ ಶಶಾಂಕ್ ನಿರ್ದೇಶನದ "ಡೇರ್ ಡೆವಿಲ್ ಮುಸ್ತಫಾ"ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವಂತೆ ಚಿತ್ರತಂಡದವರು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಮಾಡಿ ಮನವಿ ಮಾಡಿದರು.
    ಚಿತ್ರಕಥಾ ಲೇಖಕ ಅನಂತ್, ನಿರ್ದೇಶಕ ಶಶಾಂಕ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ಅವರು ತಂಡದಲ್ಲಿದ್ದರು. pic.twitter.com/HxnEvQKTQp

ಚಿತ್ರತಂಡ ಮನವಿ: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಡೇರ್ ಡೆವಿಲ್ ಮುಸ್ತಫಾ ಕತೆ ಆಧರಿಸಿದ ಶಶಾಂಕ್ ನಿರ್ದೇಶನದ ಯಶಸ್ವಿ ಸಿನಿಮಾ "ಡೇರ್ ಡೆವಿಲ್ ಮುಸ್ತಫಾ"ಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಚಿತ್ರತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಚಿತ್ರಕಥಾ ಲೇಖಕ ಅನಂತ್, ನಿರ್ದೇಶಕ ಶಶಾಂಕ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ತಂಡದಲ್ಲಿದ್ದರು.

ಇದನ್ನೂ ಓದಿ: ಶಕ್ತಿ ಯೋಜನೆ ಬೇಡ ಅನ್ನುವವರು ಬಸ್​ನಲ್ಲಿ ಹಣ ಕೊಟ್ಟು ಪ್ರಯಾಣ ಮಾಡಲಿ : ಸಚಿವ ಶಿವಾನಂದ ಪಾಟೀಲ್

Last Updated : Jun 12, 2023, 12:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.