ETV Bharat / state

ಕೆಲ ರಾಜಕಾರಣಿಗಳಿಗೆ ಬ್ರಾಹ್ಮಣ ಸಮುದಾಯದ ಕುರಿತು ದೃಷ್ಟಿದೋಷವಿದೆ, ತಪಾಸಣೆ ಅಗತ್ಯ: ಎಸ್ ಸುರೇಶ್ ಕುಮಾರ್

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀ ರಾಮಮಂದಿರ ವಾರ್ಡ್​ನಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ - ಪ್ರಪಂಚ ನೋಡಲು ಎಲ್ಲರಿಗೂ ದೃಷ್ಟಿ ಮುಖ್ಯ, ಕಾಲಕಾಲಕ್ಕೆ ನೇತ್ರ ಪರೀಕ್ಷೆ ಮಾಡಿಸಿಕೊಳ್ಳಿ - ಸುರೇಶ್ ಕುಮಾರ್ ಸಲಹೆ

Free eye checkup camp held at Sri Ram Mandir Ward
ಕೆಲವು ರಾಜಕಾರಣಿಗಳಿಗೆ ಬ್ರಾಹ್ಮಣ ಸಮುದಾಯದ ಕುರಿತು ದೃಷ್ಟಿದೋಷವಿದೆ, ತಪಾಸಣೆ ಅಗತ್ಯ:ಎಸ್ ಸುರೇಶ್ ಕುಮಾರ್
author img

By

Published : Feb 19, 2023, 8:18 PM IST

ಬೆಂಗಳೂರು: ಕೆಲವು ರಾಜಕಾರಣಿಗಳಿಗೆ ಬ್ರಾಹ್ಮಣ ಸಮುದಾಯದ ಕುರಿತು ದೃಷ್ಟಿದೋಷವಿದೆ, ಅವರಿಗೆ ತಪಾಸಣೆ ಅಗತ್ಯವಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀ ರಾಮಮಂದಿರ ವಾರ್ಡ್​ನಲ್ಲಿ ಶ್ರೀ ಶಂಕರ ಸೇವಾ ಸಮಿತಿ ಮತ್ತು ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಸಾರ್ವಜನಿಕರಿಗೆ ನಾರಾಯಣ ನೇತ್ರಾಲಯ ವತಿಯಿಂದ ಉಚಿತ ನೇತ್ರ ತಪಸಣಾ ಶಿಬಿರ ಆಯೋಜಿಸಲಾಗಿತ್ತು.

ಮಾಜಿ ಶಿಕ್ಷಣ ಸಚಿವರು ಹಾಗೂ ಶಾಸಕರಾದ ಎಸ್.ಸುರೇಶ್ ಕುಮಾರ್, ಶ್ರೀ ಶಂಕರ ಸೇವಾ ಸಮಿತಿ ಅಧ್ಯಕ್ಷರಾದ ಆರ್.ಲಕ್ಷ್ಮೀಕಾಂತ್, ಸಮಾಜ ಕಲ್ಯಾಣ ಇಲಾಖೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗಣಪತಿಭಟ್, ಆರ್ಯ ವೈಶ್ಯ ಮಹಾಸಭಾದ ಅಧ್ಯಕ್ಷ ರವಿಶಂಕರ್, ಮಾಜಿ ಮಹಾನಗರ ಪಾಲಿಕೆ ಸದಸ್ಯೆ ದೀಪಾ ನಾಗೇಶ್, ಪತ್ರಕರ್ತರಾದ ಜೆ.ಹೆಚ್. ಆನಿಲ್ ಕುಮಾರ್, ಮೋಹನ್ ದೀಪ ಬೆಳಗಿಸಿ ಆದಿ ಶಂಕರಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉದ್ಘಾಟನೆ ಮಾಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಎಸ್.ಸುರೇಶ್ ಕುಮಾರ್ ಅವರು ಪ್ರಪಂಚ ನೋಡಲು ಎಲ್ಲರಿಗೂ ದೃಷ್ಟಿ ಮುಖ್ಯ. ಕಾಲಕಾಲಕ್ಕೆ ನೇತ್ರ ಪರೀಕ್ಷೆ ಮಾಡಿಸಿಕೊಳ್ಳಿ. ಮಾನಸಿಕ ಒತ್ತಡದಿಂದ ಸಕ್ಕರೆ ಕಾಯಿಲೆ, ಬಿಪಿ ಮತ್ತು ನಾನಾ ರೋಗಗಳಿಂದ ಜನರು ನರಳುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ನೆಮ್ಮದಿ ಜೀವನ ನಡೆಸಲು ಕೆಲವು ತಜ್ಞರುಗಳಿಂದ ಸಾರ್ವಜನಿಕರಿಗೆ ತರಬೇತಿ ಶಿಬಿರ ನಡೆಸಲಾಗುವುದು ಎಂದು ಹೇಳಿದರು.

ಲಕ್ಷ್ಮೀಕಾಂತ್ ಮಾತನಾಡಿ ಶ್ರೀ ಶಂಕರ ಸೇವಾ ಸಮಿತಿ ಅದಿ ಶಂಕರರ ಸಂದೇಶಗಳನ್ನು ಜನರಿಗೆ ತಿಳಿಸುವಲ್ಲಿ ಮಹತ್ವದ ಕಾರ್ಯ ಮಾಡುತ್ತಿದೆ. ನಮ್ಮ ಸಮಿತಿಯ ವತಿಯಿಂದ ಹಿಂದೂ ಧರ್ಮ, ಸಂಸ್ಕೃತಿ, ಸಂಪ್ರದಾಯ ಉಳಿಸಲು ಹಲವಾರು ಸಾಮಾಜಿಕ ಕಾರ್ಯಗಳನ್ನು ಸತತವಾಗಿ ಮಾಡಿಕೊಂಡು ಬರಲಾಗುತ್ತಿದೆ. ಉಚಿತ ಆರೋಗ್ಯ ತಪಾಸಣೆ, ವಿದ್ಯಾರ್ಥಿ ವೇತನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇಂದು ನೆಡೆಯುತ್ತಿರುವ ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿದೋಷ ಇರುವವರಿಗೆ ಕನ್ನಡಕಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಮಪ್ರಸಾದ್, ಹರಿಪ್ರಸಾದ್, ಬಿ.ಎನ್. ಶ್ರೀನಿವಾಸ್, ಸತೀಶ್ ಭಗವಾನ್, ಕಿರಣ್, ಯಶಸ್ ನಾಯಕ್, ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಕೆಲವರು ನಮ್ಮ ಪಕ್ಷವನ್ನು ಲಘುವಾಗಿ ಪರಿಗಣಿಸಿದ್ದು, ಚುನಾವಣೆಯಲ್ಲಿ ಉತ್ತರ ಸಿಗಲಿದೆ: ಹೆಚ್​ಡಿಕೆ

300 ಕ್ಷಯ ಪೀಡಿತರನ್ನು ದತ್ತು ಪಡೆದ ಲೆಹರ್ ಸಿಂಗ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ಷಯ ರೋಗ ಮುಕ್ತ ಭಾರತ ಉಪಕ್ರಮಕ್ಕೆ ಸ್ಪಂದಿಸಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್‌ ಸಿರೋಯಾ ಅವರು 300 ಕ್ಷಯ ಪೀಡಿತರನ್ನು ದತ್ತು ತೆಗೆದುಕೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮನುಷ್ಯ ಆರೋಗ್ಯದಿಂದ ಇರಬೇಕಾದರೆ ದೈಹಿಕ ಮತ್ತು ಮಾನಸಿಕ ಪರಿಶುದ್ಧತೆ ಅತ್ಯಂತ ಮುಖ್ಯ. ಹೀಗಿದ್ದಲ್ಲಿ ಮಾತ್ರ ನಾವು ಆಧುನಿಕ ಜೀವನ ಪದ್ಧತಿ ಸೃಷ್ಟಿಸಿರುವ ಒತ್ತಡಗಳನ್ನು ನಿವಾರಿಸಿಕೊಳ್ಳಬಹುದು. ಮಧುಮೇಹ, ರಕ್ತದೊತ್ತಡ ಹಾಗು ಬೊಜ್ಜು ಸೇರಿದಂತೆ ಹಲವು ಕಾಯಿಲೆಗಳಿಗೆ ಇದೇ ಸರಿಯಾದ ಮದ್ದು ಎಂದು ಹೇಳಿದರು.

ಸದೃಢ ಭಾರತ ನಿರ್ಮಾಣಕ್ಕೆ ಆರೋಗ್ಯವಂತ ಪ್ರಜೆಗಳು ಮುಖ್ಯ. ಹೀಗಾಗಿ ಕಳೆದ 8 ವರ್ಷಗಳಿಂದೀಚೆಗೆ ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಪ್ರಧಾನಿ ಅವಿರತ ಶ್ರಮಿಸುತ್ತಿದ್ದಾರೆ. ಕೋವಿಡ್​​ನಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿ ಅವರು ಆರೋಗ್ಯ ಕ್ಷೇತ್ರದ ಮೂಲಸೌಕರ್ಯವನ್ನು ಗಮನಾರ್ಹವಾಗಿ ಸುಧಾರಿಸಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.