ಬೆಂಗಳೂರು: ಟೌನ್ ಹಾಲ್ ಮುಂದೆ ಫ್ರೀ ಕಾಶ್ಮೀರ್ ಎಂದು ಪೋಸ್ಟರ್ ಪ್ರದರ್ಶಿಸಿ ಬಂಧನಕ್ಕೊಳಗಾಗಿರುವ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾ. ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ.
ಕೋರಮಂಗಲದ ಎನ್ಜಿವಿ ಬಡಾವಣೆಯಲ್ಲಿರುವ 6ನೇ ಎಸಿಎಂಎಂ ನ್ಯಾಯಾಧೀಶರ ಮನೆಗೆ ಯುವತಿಯನ್ನು ಎಸ್.ಜೆ. ಪಾರ್ಕ್ ಪೊಲೀಸರು ಹಾಜರುಪಡಿಸಿದ್ದರು. ಸರ್ಕಾರಿ ಅಭಿಯೋಜಕರು ಹಾಗೂ ಆರೋಪಿ ಪರ ವಕೀಲರ ವಾದ ಆಲಿಸಿ ಅಂತಿಮವಾಗಿ ಮಾ.5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದರು. ಸದ್ಯದಲ್ಲೇ ಆಕೆಯನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.