ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಆತಂಕದ ನಡುವೆಯೂ ಯಶಸ್ವಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿದ ಬಳಿಕ ಇದೀಗ ಪೂರಕ ಪರೀಕ್ಷೆ ಸೆಪ್ಟೆಂಬರ್ 7 ರಿಂದ 18ರ ವರೆಗೆ ನಡೆಯಲಿದೆ.
ಹೀಗಾಗಿ 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ಹಾಗೂ ವೃತ್ತಿಪರ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪಾಸಿನೊಂದಿಗೆ ಪ್ರವೇಶ ಪತ್ರದ ಆಧಾರದ ಮೇಲೆ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ದಿನಾಂಕಗಳಂದು ಪರೀಕ್ಷೆಯ ಪ್ರವೇಶ ಪತ್ರವನ್ನು (ಅಡ್ಮಿಷನ್ ಟಿಕೆಟ್) ತೋರಿಸಿ ಪ್ರಯಾಣ ಮಾಡಬಹುದು.