ETV Bharat / state

ವಿದ್ಯಾರ್ಥಿಗಳಿಗೆ ಒಳ್ಳೇ ಸುದ್ದಿ.. ಕೆಎಸ್ಆರ್​ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

author img

By

Published : Dec 10, 2020, 7:00 PM IST

ಇದೀಗ ಮುಂದುವರೆದು ನಿಗಮವು 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ , ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಡಿಸೆಂಬರ್ 31ರವರೆಗೆ ನಿಗಮದ ಬಸ್‌ಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ..

ಕೆಎಸ್ಆರ್​ಟಿಸಿ
ಕೆಎಸ್ಆರ್​ಟಿಸಿ

ಬೆಂಗಳೂರು : ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯ, ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಹಾಗೂ ತಾಂತ್ರಿಕ, ವೈದ್ಯಕೀಯ ಕಾಲೇಜು, ಅನುದಾನ ಹಾಗೂ ಅನುದಾನ ರಹಿತ ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ನವೆಂಬರ್ 17ರಿಂದ ಪ್ರಾರಂಭಿಸಲು ಸರ್ಕಾರದ ಆದೇಶದಲ್ಲಿ ಸೂಚಿಸಿದ್ದರಿಂದ, ನಿಗಮದ ಬಸ್​ಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಡಿಸೆಂಬರ್‌ 10ರವರೆಗೆ ಅಂದರೆ ಇವತ್ತಿನವರೆಗೂ ಅವಕಾಶ ಕಲ್ಪಿಸಲಾಗಿತ್ತು.

ಇದೀಗ ಮುಂದುವರೆದು ನಿಗಮವು 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ , ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಡಿಸೆಂಬರ್ 31ರವರೆಗೆ ನಿಗಮದ ಬಸ್‌ಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ.

ಇದರಂತೆ ಮೇಲ್ಕಂಡ ವರ್ಗದ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.