ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನ ತಡೆಗಟ್ಟುವ ಉದ್ದೇಶದಿಂದ ನಾಳೆಯಿಂದ ರಾಜ್ಯದಲ್ಲಿ 14 ದಿನಗಳ ಕಾಲ ಕಠಿಣ ಕ್ರಮ ಜಾರಿಗೊಳಿಸಿ ಆದೇಶ ಹೊರಹಾಕಲಾಗಿದೆ.
ಸಚಿವ ಸಂಪುಟದಲ್ಲಿ ಭಾಗಿಯಾದ ಬಳಿಕ ಮಾತನಾಡಿರುವ ಮುಖ್ಯಮಂತ್ರಿ ಬಿಎಸ್ವೈ ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 44 ವರ್ಷದವರಿಗೆ ಉಚಿತವಾಗಿ ಕೊರೊನಾ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ನಾಳೆ ಸಂಜೆಯಿಂದ ರಾಜ್ಯಾದ್ಯಂತ 14 ದಿನ ಕೋವಿಡ್ ಕರ್ಫ್ಯೂ.. ಕಠಿಣ ನಿಯಮ ಜಾರಿ
ಈಗಾಗಲೇ ಮಧ್ಯಪ್ರದೇಶ, ಜಮ್ಮು - ಕಾಶ್ಮೀರ, ಗೋವಾ, ಕೇರಳ, ಛತ್ತೀಸ್ಗಢ, ಬಿಹಾರ್, ಜಾರ್ಖಂಡ್, ಉತ್ತರ ಪ್ರದೇಶ, ಅಸ್ಸೋಂ, ಸಿಕ್ಕಿಂ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಹರಿಯಾಣ, ಮಹಾರಾಷ್ಟ್ರ ಹಾಗೂ ನವದೆಹಲಿ ಸರ್ಕಾರಗಳು ತಮ್ಮ ರಾಜ್ಯದ ಜನರಿಗೆ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವುದಾಗಿ ಘೋಷಣೆ ಮಾಡಿದ್ದು, ಇದರ ರಾಜ್ಯದ ಮುಖ್ಯಮಂತ್ರಿಗಳು ಇಂತಹ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.