ETV Bharat / state

ಇಂದಿನಿಂದ ಆ.15 ರವೆರೆಗೆ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ: ಉದ್ಯಾನದ ಸುತ್ತಮುತ್ತಲ ಸಂಚಾರದಲ್ಲಿ ಮಾರ್ಪಾಡು - 76 ನೇ ಸ್ವಾತಂತ್ರೋತ್ಸ

76 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗಿದೆ.

ಲಾಲ್ ಬಾಗ್
ಲಾಲ್ ಬಾಗ್
author img

By

Published : Aug 4, 2023, 10:13 AM IST

Updated : Aug 4, 2023, 10:36 AM IST

ಬೆಂಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ. ವಾಹನಗಳ ನಿಲುಗಡೆಗೆ ಅವಕಾಶ, ಮತ್ತು ನಿಷೇಧದ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು: ಡಾ.ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ, ಕೆ.ಹೆಚ್ ರಸ್ತೆಯ ಶಾಂತಿನಗರ ಬಸ್ ನಿಲ್ದಾಣದ ಪಾರ್ಕಿಂಗ್​ನಲ್ಲಿ ನಾಲ್ಕು ಚಕ್ರದ ವಾಹನಗಳು, ಮರಿಗೌಡ ರಸ್ತೆಯ ಹಾಪ್ ಕಾಮ್ಸ್​ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ, ಜೆಸಿ ರಸ್ತೆ, ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ವಾಹನ ನಿಲುಗಡೆಗೆ ನಿಷೇಧ ಸ್ಥಳ: ಮರಿಗೌಡ ರಸ್ತೆಯ ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮಾನ್ಸ್​ವರೆಗೆ ಎರಡು ರಸ್ತೆ ಬದಿ, ಕೆ ಎಚ್ ರಸ್ತೆಯಿಂದ ಶಾಂತಿ ನಗರ ಬಸ್ ನಿಲ್ದಾಣವರೆಗೆ, ಸಿದ್ಧಯ್ಯ ರಸ್ತೆಯ ಊರ್ವಶಿ ಥೀಯೇಟರ್ ಜಂಕ್ಷನ್​ನಿಂದ ವಿಲ್ಸನ್ ಗಾರ್ಡನ್​ವರೆಗೂ, ಅಶೋಕ ಪಿಲ್ಲರ್​ನಿಂದ ಸಿದ್ದಾಪುರ ಜಂಕ್ಷನ್​ವರೆಗೂ, ಆರ್ ವಿ ಟೀಚರ್ಸ್ ಕಾಲೇಜ್​ನಿಂದ ಆಶೋಕ್ ಪಿಲ್ಲರ್​ವರೆಗೂ ವಾಹನ ನಿಲುಗಡೆಗೆ ಅವಕಾಶವಿಲ್ಲ.

ಮರೀಗೌಡ ರಸ್ತೆ, ಲಾಲ್ ಬಾಗ್ ರಸ್ತೆ, ಕೆ.ಎಚ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಮೂಹ ಸಾರಿಗೆ, ಕ್ಯಾಬ್ ಬಳಸುವಂತೆ ಮತ್ತು ವಾಹನ ನಿಲುಗಡೆಗೆ ಅವಕಾಶ ನೀಡಿರುವುದರ ಸದುಪಯೋಗ ಪಡೆದುಕೊಳ್ಳುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ವಿಶೇಷ ಆಕರ್ಷಣೆಯಾಗಿರಲಿದೆ ಕೆಂಗಲ್​ ಹನುಮಂತಯ್ಯ ಪ್ರತಿಮೆ: ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಸಸ್ಯಕಾಶಿ ಲಾಲ್ ಭಾಗ್​ನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ 214 ನೇಯ ದಾಗಿದ್ದು ಕೆಂಗಲ್ ಹನುಮಂತಯ್ಯ ಅವರ ಹಿರಿಮೆ ಮತ್ತು ನಾಡಿಗೆ ಅವರು ನೀಡಿದ ಕೊಡುಗೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪ್ರದರ್ಶನ ನಡೆಸಲಾಗುತ್ತಿದೆ.

4 ಅಡಿ ಎತ್ತರದ ಪೀಠದ ಮೇಲೆ 14 ಅಡಿ ಎತ್ತರದ ಬೃಹತ್ ಹೂವಿನ ಕೆಂಗಲ್‌ ಹನುಮಂತಯ್ಯ ಅವರ ಪ್ರತಿಮೆ ವಿಶೇಷ ಆಕರ್ಷಣೆಯಾಗಿದೆ. ಇನ್ನಳಿದು, ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಅವರು ನಿರ್ಮಿಸಿದ ವಿಧಾನಸೌಧದ ಮತ್ತು ಶಿವಪುರ ಸತ್ಯಾಗ್ರಹಸೌಧದ ಪುಷ್ಪ ಮಾದರಿ ಜನರನ್ನು ಆಕರ್ಷಿಸಲಿವೆ. ರೈಲ್ವೆ ಸಚಿವರಾಗಿ ಕೆಂಗಲ್ ಹನುಮಂತಯ್ಯ ಅವರ ಕೊಡುಗೆಗಳನ್ನು ನೆನಪಿಸುವ ಸಲುವಾಗಿ ವರ್ಟಿಕಲ್ ಗಾರ್ಡನ್ ಪರಿಕಲ್ಪನೆಯಲ್ಲಿ ಪುಷ್ಪಗಳಿಂದ ಸಜ್ಜಾದ ರೈಲು ಕೂಡ ಮುಖ್ಯ ಆಕರ್ಷಣೆಗಳಲ್ಲಿ ಒಂದಾಗಿದೆ.

ಲಕ್ಷಾಂತರ ಎಕ್ಸೋಟಿಕ್ ಆರ್ಕಿಡ್ಸ್, ಬರ್ಡ್ ಆಫ್ ಪ್ಯಾರಡೈಸ್ , ಬ್ರೋಮಿಲಿಯಾಡ್ಸ್, ಆಂಥೂರಿಯಂ, ಹತ್ತಾರು ಬಗೆಯ ವಾರ್ಷಿಕ ಹೂಗಳು ವಿವಿಧ ಪೊಲೀಸ್ ಜಾತಿಯ ಗಿಡಗಳನ್ನು ಬಳಸಿ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಕಂಪನಿ ಕೆಂಗಲ್ ಹನುಮಂತಯ್ಯ ಪ್ರತಿಮೆಯನ್ನು ವಿನ್ಯಾಸ ಮಾಡಿದೆ. 18 ಅಡಿ ಎತ್ತರದ ವಿಧಾನಸೌಧದ ಪುಷ್ಪ ಮಾದರಿಯನ್ನು ಕಬ್ಬಿಣ ಮೆಷ್ ಮೊದಲಾದ ವಸ್ತುಗಳನ್ನು ಬಳಸಿ ಕೆಂಪು, ಪೀಚ್, ಹಳದಿ, ರಸ್ಟ್, ಆರೆಂಜ್ ಮತ್ತು ಶ್ವೇತ ವರ್ಣದ ಡಚ್ ಗುಲಾಬಿ ಹೂಗಳು, ಪಿಂಚ್ಡ್​ ಕೆಂಪು ಗುಲಾಬಿ, ಶ್ವೇತ ವರ್ಣದ ಸೇವಂತಿಗೆ ಹೂಗಳನ್ನು ಬಳಸಿ ನಿರ್ಮಿಸಲಾಗಿದೆ.

ಇದನ್ನೂ ಓದಿ: ಆ.4 ರಿಂದ 15 ರವರೆಗೆ ಲಾಲ್ ಬಾಗ್​ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ

Last Updated : Aug 4, 2023, 10:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.