ETV Bharat / state

Congress Guarantee scheme: ಪೂರ್ಣ ಪ್ರಮಾಣದ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ - Congress Guarantee scheme

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ ಗೊಬ್ಬರ ಹಾಗೂ ಔಷಧಿ ಸಂಗ್ರಹಿಸಿ ಸರ್ವಸನ್ನದ್ದವಾಗಿದೆ: ಸಿಎಂ ಸಿದ್ದರಾಮಯ್ಯ

CM Siddaramaiah spoke to the media.
ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.
author img

By

Published : Jun 24, 2023, 5:43 PM IST

Updated : Jun 24, 2023, 9:33 PM IST

ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ ಎಂದರು.

ವಿವಿಧ ರಾಜ್ಯದವರಿಂದ ಪೂರ್ಣ ಪ್ರಮಾಣದ ಅಕ್ಕಿ ದೊರೆಯುತ್ತಿಲ್ಲ. ಆದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್​​ಸಿಸಿಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಪರಿಶೀಲಿಸಿ ಮಾತುಕತೆ ನಡೆದಿದೆ. ಇಂದು ಮಾತುಕತೆ ನಡೆಯಲಿದ್ದು, ಎಷ್ಟು ಅಕ್ಕಿ, ದರ ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದು ಸಿಎಂ ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನೂ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ಕರೆದು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಬಿತ್ತನೆಗೆ ಸಿದ್ಧ: ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ಧವಾಗಿದೆ ಸಿಎಂ ಮಾಹಿತಿ ನೀಡಿದರು.

ಬಜೆಟ್ ನಂತರ ವಿದ್ಯುತ್ ದರ ಪರಿಶೀಲನೆ: ಸಣ್ಣ ಕೈಗಾರಿಕೆಗಳು ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಿನ್ನೆ ನಡೆದ ಚರ್ಚೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನು ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಲಾಗಿದೆ. ಕೈಗಾರಿಕೆಗಳಿಗೆ ಒಂಭತ್ತು ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ ಎಂದರು.

ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನು ಪ್ರತಿ ವರ್ಷ ಕೆಇಆರ್ ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವೂ ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ. ಕೆಎಂಎಫ್ ಈಗಾಗಲೇ ಐದು ರೂ. ಹಾಲಿನದರ ಹೆಚ್ಚಳಕ್ಕೆ ಪ್ರಸ್ತಾವ ಇಟ್ಟಿದೆ. ಹಾಲಿನ ದರ ಹೆಚ್ಚಳದ ಕುರಿತಂತೆ ಇರುವ ಪ್ರಸ್ತಾವನೆ ಬಗ್ಗೆ ಸಂಬಂಧಪಟ್ಟವರ ಜೊತೆಗೆ ಮಾತನಾಡುವದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂಓದಿ:Gruha Lakshmi scheme: ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Last Updated : Jun 24, 2023, 9:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.