ಬೆಂಗಳೂರು : ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಪ್ರತಿನಿಧಿಸುವ ಕಾಚರಕನಹಳ್ಳಿ ವಾರ್ಡ್ ಜನರು ಕೋವಿಡ್-19 ಸಂಕಷ್ಟಕ್ಕೆ ಮಿಡಿದಿದ್ದಾರೆ.
ವಾರ್ಡ್ 19ರ ನಾಗರಿಕರು, ಮುಖ್ಯಮಂತ್ರಿ ಪರಿಹಾರ ನಿಧಿಗೆ ₹20,60,625 ದೇಣಿಗೆ ನೀಡಿದ್ದಾರೆ. ಅದನ್ನು ಪಾಲಿಕೆ ಸದಸ್ಯ ಪದ್ಮನಾಭರೆಡ್ಡಿ, ಶಾಸಕ ಎಸ್ ಆರ್ ವಿಶ್ವನಾಥ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.