ETV Bharat / state

ಕ್ರಿಸ್​ಮಸ್​, ನ್ಯೂ ಇಯರ್​ ಆಚರಣೆ ಹಿನ್ನೆಲೆ: ಮುಂಜಾಗ್ರತಾ ಕ್ರಮಕ್ಕೆ ಜಿ.ಪರಮೇಶ್ವರ್​ ಸೂಚನೆ - ಬೆಂಗಳೂರು

ಇನ್ನೇನು 9 ದಿನಗಳಲ್ಲಿ ಹೊಸ ವರ್ಷ 2024 ಬರಲಿದ್ದು ಸಂಭ್ರಮಾಚರಣೆ ನಡೆಯುತ್ತದೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ‌ ನಡೆಯದಂತೆ ಕ್ರಮ ಕೈಗೊಳ್ಳಲು ಸಚಿವ ಡಾ. ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.

parameshwar instructions
ಜಿ.ಪರಮೇಶ್ವರ್ ನೇತೃತ್ವದ ಸಭೆ
author img

By ETV Bharat Karnataka Team

Published : Dec 22, 2023, 1:25 PM IST

Updated : Dec 22, 2023, 2:07 PM IST

ಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್​ ರೋಡ್​ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ನಗರಗಳಲ್ಲಿಯೂ ಸಹ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎನ್‌ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ‌ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್‌ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರುವವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು ಎಂದು ಹೇಳಿದರು.

ಹೊಸ ವರ್ಷ ಆಚರಿಸಲು ಜನ ಸೇರುವ ಪ್ರಮುಖ ಸ್ಥಳಗಳನ್ನು ಗುರುತಿಸಿ, ಪೊಲೀಸ್ ಅಧಿಕಾರಿಗಳು ಪರಿಶೀಲಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಬೇಕು. ಎಸ್‌ಡಿಆರ್‌ಎಫ್‌ ತಂಡಗಳು ಇರಬೇಕು. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್‌ಗಳಲ್ಲಿ ಬಿಬಿಎಂಪಿಯವರು ತಾತ್ಕಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು. ನಗರದ ಎಲ್ಲ ವಿಭಾಗದ ಡಿಸಿಪಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಭೇಟಿ ನೀಡಿ, ಡಿಸೆಂಬರ್ 31ರ ತಡರಾತ್ರಿ ತುರ್ತು ಚಿಕಿತ್ಸೆಗಾಗಿ ಅಲರ್ಟ್ ಇರುವಂತೆ ತಿಳಿಸಬೇಕು ಎಂದರು.

ಎಂಜಿ.ರಸ್ತೆ, ಬ್ರಿಗೇಡ್​ ರೋಡ್​, ಇಂದಿರಾನಗರ, ಎಲೆಕ್ಟ್ರಾನಿಕ್​ ಸಿಟಿಗಳಲ್ಲಿ‌ನ ರಸ್ತೆಗಳಲ್ಲಿ ಪಬ್‌ಮತ್ತು ಬಾರ್, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವ ಸಾಧ್ಯತೆ ಇದೆ. ಇದರಿಂದ ಅವಘಡಗಳಾಗುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ‌ ಸಿಬ್ಬಂದಿಗಳು ಅಲರ್ಟ್ ಆಗಿರಬೇಕು.

ಪಬ್​ ಮತ್ತು ಬಾರ್‌ಗಳು ಸುರಕ್ಷತಾ ಕ್ರಮ‌ಕೈಗೊಂಡಿವೆಯೇ ಎಂಬುದನ್ನು ಪರಿಶೀಲಿಸಿ. ಮೇಲ್ಚಾವಣಿಗಳಲ್ಲಿ ಕಿಚನ್ ತೆರೆಯಲು ಅವಕಾಶ ನೀಡಬೇಡಿ. ಮದ್ಯದ ಅಂಗಡಿಗಳು ಎಂದಿನಂತೆಯೇ ತೆರೆದಿದ್ದರೆ ಸಾಕು. ಹೆಚ್ಚಿನ ಸಮಯಾವಕಾಶ ನೀಡುವುದು ಬೇಡ ಎಂದು‌ ಸಲಹೆ ನೀಡಿದರು. ಹೊಸ ವರ್ಷಾಚರಣೆಗಾಗಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ತಾತ್ಕಲಿಕ "ಪೊಲೀಸ್ ಹೆಲ್ಪ್ ಡೆಸ್ಕ್" ತೆರೆಯಬೇಕು. ಈ ಬಗ್ಗೆ ಜನರಿಗೆ ಅನೌನ್ಸ್‌ಮೆಂಟ್ ಮಾಡಬೇಕು.

ಮೆಟ್ರೋ ರೈಲುಗಳು ಹೆಚ್ಚಿನ ಅವಧಿಯವರೆಗೆ ಸಂಚರಿಸಲಿ. ಅಲ್ಲದೇ, ಬಿಎಂಟಿಸಿ ವತಿಯಿಂದ ಪ್ರತ್ಯೇಕ ಬಸ್‌ಗಳನ್ನು ಬಿಡಬೇಕು. ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಕ್ರಿಸ್ ಮಸ್ ಹಾಗೂ ಹೊಸ ವರ್ಷಕ್ಕೆ ನಿರ್ಬಂಧ ವಿಚಾರದಲ್ಲಿ
ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಲು ಹೋಗೋದಿಲ್ಲ. ಹೆಚ್ಚು ಜನ ಇದ್ದಾಗ ಮಾಸ್ಕ್ ಹಾಕಬೇಕು ಎಂದು ಆರೋಗ್ಯ ಇಲಾಖೆಯಿಂದ ಸೂಚನೆ ಬಂದಿದೆ. ಅದನ್ನು ಬಿಟ್ಟರೆ ಬೇರೆ ಯಾವುದೇ ನಿರ್ಬಂಧ ಇಲ್ಲ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಮಾಲ್ ಪಂತ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಚುರುಕುಗೊಂಡ ಕೋವಿಡ್ ಪರೀಕ್ಷೆ

Last Updated : Dec 22, 2023, 2:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.