ETV Bharat / state

ಪಂಚ ರಾಜ್ಯಗಳ ಚುನಾವಣೆಗೆ ಹಣ ಸಂಗ್ರಹ ಆರೋಪ ಸತ್ಯಕ್ಕೆ ದೂರವಾದುದ್ದು: ಸಚಿವ ಪರಮೇಶ್ವರ್ - ಕಾಂಗ್ರೆಸ್​ ವಿರುದ್ದ ಹಣ ಸಂಗ್ರಹ ಆರೋಪ

ಪಂಚ ರಾಜ್ಯ ಚುನಾವಣೆಗಳಿಗಾಗಿ ರಾಜ್ಯ ಸರ್ಕಾರ ಹಣ ಸಂಗ್ರಹ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಗೃಹ ಸಚಿವ ಪ್ರತಿಕ್ರಿಯೆ ನೀಡಿದ್ದಾರೆ.

ಹಣ ಸಂಗ್ರಹ ಆರೋಪದ ಬಗ್ಗೆ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ

author img

By ETV Bharat Karnataka Team

Published : Oct 18, 2023, 4:34 PM IST

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸಲಾಗಿದೆ ಎಂಬುದು ಆರೋಪ ಸತ್ಯಕ್ಕೆ ದೂರವಾದುದ್ದು, ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಈ ರೀತಿಯ ಬೆಳವಣಿಗೆಗಳಾಗಿರಲಿಲ್ಲವೇ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.

ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಟಿ ದಾಳಿ ವೇಳೆ ಸಿಕ್ಕಿರುವ ಹಣ ಹಾಗೂ ಇತರ ಮಾಹಿತಿಗಳ ಕುರಿತು ಸಿಬಿಐ ತನಿಖೆ ಅಗತ್ಯವಿದ್ದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಯಾರನ್ನೋ ಹೇಳಿ, ಕೇಳಿ ಅವರು ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಆದಾಯ ತೆರಿಗೆ ಅಧಿಕಾರಿಗಳು ಹಣ ಯಾರಿಗೆ ಸಂಬಂಧಪಟ್ಟಿದೆ ಎಂಬುದನ್ನು ಅಗತ್ಯ ಸಂದರ್ಭಗಳಲ್ಲಿ ಬಹಿರಂಗ ಪಡಿಸುತ್ತಾರೆ. ತನಿಖೆ ನಡೆಯುತ್ತಿರುವ ಕಾರಣದಿಂದ ಇದುವರೆಗೂ ಮಾಹಿತಿ ಹೊರ ಬಂದಿಲ್ಲದಿರಬಹುದು. ಹಲವಾರು ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಅಗತ್ಯ ಮಾಹಿತಿ ನೀಡುತ್ತಾರೆ.

ಅಧಿಕೃತ ಮಾಹಿತಿ ಪ್ರಕಟವಾಗದ ಹೊರತು ಹಣ ಅವರಿಗೆ ಸೇರಿದೆ, ಇವರಿಗೆ ಸೇರಿದೆ ಎಂದು ಊಹೆ ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ. ಪ್ರಕರಣದಲ್ಲಿ ಗಂಭೀರತೆ ಇದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು. ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್-ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿತಿಸಿದ ಅವರು ತಮಗೆ ಈ ಬಗ್ಗೆ ಮಾಹಿತಿ ಇಲ್ಲ. ವಿದೇಶ ಪ್ರವಾಸಕ್ಕೆ ತೆರಳಿದ್ದ ತಾವು ನಿನ್ನೆ ರಾತ್ರಿಯಷ್ಟೆ ರಾಜ್ಯಕ್ಕೆ ವಾಪಸ್​ ಆಗಿದ್ದೇನೆ. ಯಾವ ವಿಚಾರಗಳು ಗೊತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು, ಬಿಜೆಪಿ ನಾಯಕರು ಭೇಟಿ ಮಾಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಡಿಸಿಎಂಗೆ ಮಾಹಿತಿ ಇರಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಈ ಎಲ್ಲಾ ಬಗ್ಗೆ ಮಾಹಿತಿ ಇರಬೇಕು. ಒಂದು ವೇಳೆ ಆಪರೇಷನ್ ಕಮಲ ನಡೆಯುತ್ತಿದ್ದರೆ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳತ್ತೇವೆ ಎಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಶಾಸಕ ಸ್ನೇಹಿತರು ಸಿಂಗಪೂರ್, ಮಲೇಷ್ಯಾ ಸೇರಿದಂತೆ ವಿವಿಧ ಕಡೆ ಪ್ರವಾಸಕ್ಕೆ ಹೋಗಿದ್ದನ್ನು ನೋಡಿದ್ದೇವೆ. ಅದೇ ರೀತಿಯ ಪ್ರವಾಸವನ್ನು ಸತೀಶ್ ಜಾರಕಿಹೊಳಿ ಹಾಗೂ ಸ್ನೇಹಿತರು ಪ್ರವಾಸಕ್ಕೆ ಹೋಗಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದರು.

ಬಿಜೆಪಿಗೆ ಐದು ಶಾಸಕರು ಸಹ ಸಿಗಲ್ಲ: ಮತ್ತೊಂದೆಡೆ ಕೈಗಾರಿಕಾ ಸಚಿವ ಎಂ.ಪಿ. ಪಾಟೀಲ್, ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿಗೆ 65 ಶಾಸಕರು ಬೇಕು. ಅಷ್ಟು ಶಾಸಕರು ಸಿಗುತ್ತಾರಾ?, ಅವರಿಗೆ ಐದು ಶಾಸಕರೂ ಸಹ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಒಂದು ತಂಡ ಸರ್ಕಾರ ಬೀಳಿಸಲು ನಡೆಸಿರುವ ಪ್ರಯತ್ನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆಪರೇಷನ್ ಕಮಲದ ನಂತರ ಬಿಜೆಪಿಯವರ ಕಥೆ ಏನಾಗಿದೆ ಗೊತ್ತಿದೆಯಲ್ಲ, ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿರುವ ಹಡಗು ಎಂದು ಲೇವಡಿ ಮಾಡಿದರು.

ಚರ್ಚೆ ಅನಗತ್ಯ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು 20 ಶಾಸಕರ ಜೊತೆ ಪ್ರವಾಸ ಹೋಗಲು ಸಿದ್ದವಿರುವುದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅವರು ಮತ್ತು ಅವರ ಸ್ನೇಹಿತರು ವಿದೇಶ ಪ್ರವಾಸಕ್ಕೆ ಹೋದರೆ ತಪ್ಪೇನು, ಇದಕ್ಕೆಲ್ಲ ಏನೇನೋ ವ್ಯಾಖ್ಯಾನಗಳು ಬೇಡ ಎಂದರು.

ಇದನ್ನೂ ಓದಿ: ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.