ETV Bharat / state

ಆರ್‌ಎಸ್‌ಎಸ್‌ ಕರ್ನಾಟಕ ದಕ್ಷಿಣ ಪ್ರಾಂತದ ಸಂಘ ಚಾಲಕರಾಗಿ ಜಿ.ಎಸ್.ಉಮಾಪತಿ ನೇಮಕ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಂಘದ ಚಾಲಕರಾಗಿ ಜಿ.ಎಸ್.ಉಮಾಪತಿ ಅವರನ್ನು ನೇಮಿಸಲಾಗಿದೆ.

G S Umapati
ಜಿ ಎಸ್ ಉಮಾಪತಿ
author img

By ETV Bharat Karnataka Team

Published : Dec 17, 2023, 6:39 PM IST

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘ ಚಾಲಕರಾಗಿ ಜಿ.ಎಸ್.ಉಮಾಪತಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆರ್‌ಎಸ್‌ ಎಸ್ ಪ್ರಕಟಣೆ​ ತಿಳಿಸಿದೆ.

ಉಮಾಪತಿ ಪರಿಚಯ: ಇವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಆಡನೂರು ಗ್ರಾಮದವರು‌. ದಾವಣಗೆರೆಯಲ್ಲಿ ಬಿ.ಇ.ಎಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ನಂತರ ಮಂಗಳೂರಿನ ಎನ್‌​ಐಟಿಕೆಯಲ್ಲಿ (ಆಗಿನ ಕೆಆರ್​ಇಸಿ) ಎಂಇ ಇನ್‌ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂಇಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಪೂರೈಸಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಎಂಜಿನಿಯರ್ ಆಗಿ‌ ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತರಾಗಿದ್ದಾರೆ. ವಿದ್ಯಾರ್ಥಿ ದೆಸೆಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂ ಸೇವಕರಾಗಿ, ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಬಳ್ಳಾರಿ ಜಿಲ್ಲೆಯ ಕಾರ್ಯನಿರ್ವಾಹಕರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘ ಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಮಾಹಿತಿ ನೀಡಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ವಿಭಾಗ ಸಂಘಚಾಲಕರಾಗಿ ಡಾ.ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂಓದಿ: ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ: ಭಕ್ತರಿಂದ ಎಡೆಸ್ನಾನ ಸೇವೆ, ಇಂದು ಪಂಚಮಿ ರಥೋತ್ಸವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.