ETV Bharat / state

ಬಿಎಸ್​ವೈ-ಜಿಟಿಡಿ ಭೇಟಿ: ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದ ಸಿಎಂ - ಬಿಎಸ್​ವೈ-ಜಿಟಿಡಿ ಭೇಟಿ

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ‌ ಜಿ.ಟಿ.ದೇವೇಗೌಡ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್​ವೈ-ಜಿಟಿಡಿ ಭೇಟಿ.
author img

By

Published : Aug 12, 2019, 11:46 PM IST

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿಎಂ ಮೈಸೂರು ನೆರೆ ವೀಕ್ಷಣೆ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆ ಡಾಲರ್ಸ್ ಕಾಲೋನಿ ನಿವಾಸಕ್ಕೆ ಪುತ್ರನೊಂದಿಗೆ ಆಗಮಿಸಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಮೈಸೂರು ಹಾಲು ಒಕ್ಕೂಟ ಚುನಾವಣೆ ಸಂಬಂಧ ಸಿಎಂ ಜೊತೆ ಜಿಡಿಟಿ ಚರ್ಚೆ ನಡೆಸಿದರು.

ಸಿಎಂ ಯಡಿಯೂರಪ್ಪ ಭೇಟಿ ಬಳಿಕ‌ ಮಾತನಾಡಿದ ಜಿ.ಟಿ.ದೇವೆಗೌಡ, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ 9ರಂದು ನಿಗದಿಯಾಗಿತ್ತು. ಚುನಾವಣೆಯಲ್ಲಿ ಗೊಂದಲ ಉಂಟಾಗಿತ್ತು.‌ ಹಾಗಾಗಿ ಸಿಎಂ ಬಳಿ ಮಾತನಾಡಿದ್ದೇನೆ ಎಂದರು.

ಜೆಡಿಎಸ್ ತೊರೆಯಲ್ಲ:

ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ಪಕ್ಷ ತೊರೆಯುತ್ತೇನೆ ಎನ್ನುವುದು ಸತ್ಯಕ್ಕೆ ದೂರ. ಜೆಡಿಎಸ್ ಪಕ್ಷ ಬಿಡುವ ಪ್ರಮೇಯವೇ ಇಲ್ಲ ಎಂದು ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.

ಸಿಎಂ ಭೇಟಿ ಮಾಡಿದ ಅನರ್ಹ ಶಾಸಕರು:

ಇನ್ನು ತವರು ಜಿಲ್ಲೆ ಶಿವಮೊಗ್ಗಕ್ಕೆ ಹೊರಟು ನಿಂತಿದ್ದ ಸಿಎಂ ಯಡಿಯೂರಪ್ಪ ಅವರನ್ನು ಅನರ್ಹ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಹೆಚ್.ವಿಶ್ವನಾಥ್ ಭೇಟಿ ಮಾಡಿ ಮಾತುಕತೆ ನಡೆಸಿದರು.

ಬಿಎಸ್​ವೈ ಸ್ಪಷ್ಟನೆ :

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ‌ ಜಿ.ಟಿ.ದೇವೇಗೌಡ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

​ಬಿ.ಎಸ್​.ಯಡಿಯೂರಪ್ಪ, ಮುಖ್ಯಮಂತ್ರಿ

ಶಿವಮೊಗ್ಗಕ್ಕೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಟಿಡಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕೋ-ಆಪರೇಟಿವ್ ಚುನಾವಣೆ ವಿಚಾರವಾಗಿ ಮಾತನಾಡಲು ಬಂದಿದ್ದರು. ಎಸ್.ಟಿ.ಸೋಮಶೇಖರ್ ಹಾಗೂ ವಿಶ್ವನಾಥ್ ಕೂಡ ಬೇರೆ ವಿಚಾರವಾಗಿ ಬಂದಿದ್ದರು ಎಂದು ಸ್ಪಷ್ಟಪಡಿಸಿದರು.

ಇಂದು ಮಂಗಳೂರು, ಮೈಸೂರು ಭಾಗದಲ್ಲಿ ನೆರೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಕೂಡ ಸಾಕಷ್ಟು ಹಾನಿಯಾಗಿದೆ. ಹಾಗಾಗಿ ಈಗ ಶಿವಮೊಗ್ಗಕ್ಕೆ ತೆರಳುತ್ತಿದ್ದು, ನಾಳೆ 4-5 ತಾಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ನಾಳೆ ರಾತ್ರಿ ಬೆಂಗಳೂರಿಗೆ ಹಿಂದಿರುಗುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.

Intro:

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿಎಂ ಮೈಸೂರು ನೆರೆ ವೀಕ್ಷಣೆ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆ ಡಾಲರ್ಸ್ ಕಾಲೋನಿ ನಿವಾಸಕ್ಕೆ ಪುತ್ರನೊಂದಿಗೆ ಆಗಮಿಸಿದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.ಮೈಸೂರು ಹಾಲು ಒಕ್ಕೂಟ ಚುನಾವಣೆ ಸಂಬಂಧ ಸಿಎಂ ಜೊತೆ ಜಿಡಿಟಿ ಚರ್ಚೆ ನಡೆಸಿದರು.

ಸಿಎಂ ಯಡಿಯೂರಪ್ಪ ಭೇಟಿ ಬಳಿಕ‌ ಜಿ.ಟಿ ದೇವೆಗೌಡ,
ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ 9 ರಂದು ನಿಗದಿಯಾಗಿತ್ತು.ಚುನಾವಣೆಯಲ್ಲಿ ಗೊಂದಲ ಉಂಟಾಗಿತ್ತು‌ ಹಾಗಾಗಿ ಸಿಎಂ ಬಳಿ ಮಾತನಾಡಿದ್ದೇನೆ. ಡೈರಿ ಚುನಾವಣೆ ವಿಚಾರಣ ನೋಡಿ ಮಾಡೊಣ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದರು.

ಜೆಡಿಎಸ್ ತೊರೆಯಲ್ಲ:

ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ, ನಾನು ಪಕ್ಷ ತೊರೆಯುತ್ತೇನೆ ಎನ್ನುವುದು ಸತ್ಯಕ್ಕೆ ದೂರ.ಜೆಡಿಎಸ್ ಪಕ್ಷ ಬಿಡುವ ಪ್ರಮೇಯವೆ ಇಲ್ಲ ಎಂದು ಜಿಟಿ ದೇವೇಗೌಡ ಸ್ಪಷ್ಟಪಡಿಸಿದರು.

ಸಿಎಂ ಭೇಟಿ ಮಾಡಿದ ಅನರ್ಹ ಶಾಸಕರು:

ಇನ್ನು ತವರು ಜಿಲ್ಲೆ ಶಿವಮೊಗ್ಗಗೆ ಹೊರಟು ನಿಂತಿದ್ದ ಸಿಎಂ ಯಡಿಯೂರಪ್ಪ ಅವರನ್ನು ಅನರ್ಹ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಹೆಚ್.ವಿಶ್ವನಾಥ್ ಭೇಟಿ ಮಾಡಿ ಮಾತುಕತೆ ನಡೆಸಿದರು.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.