ETV Bharat / state

JDS: ಕೋರ್ ಕಮಿಟಿಗೆ ಜಿಟಿಡಿ ಅಧ್ಯಕ್ಷ, ದತ್ತ ಸಂಚಾಲಕ, ಆಗಸ್ಟ್ 20ರಿಂದ ರಾಜ್ಯ ಪ್ರವಾಸ

JDS Core committee: ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.​ವಿ.ದತ್ತ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ ಇಬ್ರಾಹಿಂ
ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ ಇಬ್ರಾಹಿಂ
author img

By

Published : Aug 18, 2023, 3:19 PM IST

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್, ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್​ನ ನೂತನ ಕಮಿಟಿ ರಚಿಸಿದೆ.

ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿ.ಎಂ.ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತರನ್ನು ನೇಮಿಸಲಾಗಿದೆ ಎಂದರು. ಆಗಸ್ಟ್ 7ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಕೋರ್ ಕಮಿಟಿಯ ಹೊಸ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು ಎಂದು ಹೇಳಿದರು.

ಕಮಿಟಿಯಲ್ಲಿ ಮಾಜಿ ಸಚಿವರಾದ ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪುರ್, ಹೆಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಆಲ್ಕೋಡ್ ಹನುಮಂತಪ್ಪ, ಶಾಸಕರಾದ ನೇಮಿರಾಜ ನಾಯಕ್, ರಾಜೂಗೌಡ, ಬಿ.ಎಂ.ಫಾರೂಕ್, ಮಾಜಿ ಶಾಸಕರಾದ ಸುರೇಶ್ ಗೌಡ, ಕೆ.ಎಂ.ತಿಮ್ಮರಾಯಪ್ಪ ವೀರಭದ್ರಪ್ಪ ಹಾಲರವಿ, ಎಂ.ಕೃಷ್ಣ ರೆಡ್ಡಿ, ದೊಡ್ಡಪ್ಪ ಗೌಡ, ಪ್ರಸನ್ನ ಕುಮಾರ್ ಕೆ.ಬಿ.ಸುನೀತಾ ಚೌವ್ಹಾಣ್, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ ಸೇರಿದಂತೆ 21 ಸದಸ್ಯರಿದ್ದಾರೆ. ಕಮಿಟಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಗಸ್ಟ್ 20ರಿಂದ ರಾಜ್ಯ ಪ್ರವಾಸ: ಪಕ್ಷ ಸಂಘಟನೆ, ಪಕ್ಷದ ಬಲವರ್ಧನೆ, ಮುಂಬರುವ ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ, ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಆಗಸ್ಟ್ 20 ರಿಂದ ಸೆಪ್ಟೆಂಬರ್ 30ರ ವರೆಗೂ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುತ್ತದೆ. ಸೆಪ್ಟೆಂಬರ್​ನಲ್ಲಿ ವರದಿ ನೀಡಿದ ಬಳಿಕ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂದರು.

ರಾಜ್ಯ ಸರ್ಕಾರದ ವೈಫಲ್ಯ ಬಗ್ಗೆ ಚರ್ಚೆ ಮಾಡಿದ್ದೇವೆ. ರೈತರು ಕಂಗಾಲಾಗಿದ್ದಾರೆ. ಕೃಷಿ ಸಚಿವರೇ ಹೇಳಿರುವಂತೆ ಮಳೆ ಬಾರದಿದ್ದರೆ, ಬಿತ್ತಿರುವ ಬೆಳೆ ಒಣಗುತ್ತದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದರ ಬಗ್ಗೆಯೂ ಚರ್ಚೆಯಾಗಿದೆ. ಕೂಡಲೇ ಸರ್ವ ಪಕ್ಷದ ಸಭೆ ಕರೆಯಬೇಕು ಎಂದು ಆಗ್ರಹಿಸಿದರು. ಜೆಡಿಎಸ್‌ ಪಕ್ಷಕ್ಕೆ ಜನ ಮತ ಕೊಟ್ಟಿಲ್ಲ. ಆದರೂ ಪಕ್ಷ ರೈತರ ಕೈಬಿಡಲ್ಲ ಅಂತ ಸಂದೇಶ ಕೊಡಲಿದ್ದೇವೆ. ನಾವೆಲ್ಲ ಒಗ್ಗಟ್ಟಾಗಿ ಪಕ್ಷ ಬಲಪಡಿಸುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಮಾಜಿ ಶಾಸಕ ಕೃಷ್ಣಾರೆಡ್ಡಿ, ದೊಡ್ಡಪ್ಪಗೌಡ ಎಸ್. ಪಾಟೀಲ್ ನರಿಬೋಳ ಉಪಸ್ಥಿತರಿದ್ದರು. ನಂತರ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು, ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಮುಂಬರುವ ಚುನಾವಣೆ ಸಂಬಂಧ ರಾಜ್ಯ ಪ್ರವಾಸದ ಬಗ್ಗೆ ಚರ್ಚೆ ನಡೆಯಿತು.

ಇದನ್ನೂ ಓದಿ: ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟಿದ್ದಾರೆ, ಸರ್ಕಾರ ಆಡಿದ್ದೇ ಆಟವಾಗಿದೆ : ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.