ETV Bharat / state

ರೈತರ ಕಷ್ಟ ಕೇಳದ ಪ್ರಧಾನಿ ಮೋದಿ, ಗಾಂಧಿ ತಮ್ಮವರೆಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ- ಡಿಕೆಶಿ - Lal bahadur Shastri Jayanti Program in KPCC Office Bangalore

ವಿಶ್ವಕಂಡ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್. ಜಗತ್ತಿನ ಪ್ರಬಲ ರಾಷ್ಟ್ರಗಳ ಆರ್ಥಿಕತೆ ಕುಸಿದ ಸಮಯದಲ್ಲೂ ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕತೆ ಕುಸಿಯಲು ಬಿಡಲಿಲ್ಲ. ದೇಶದ ಆರ್ಥಿಕತೆ ಕುಸಿದಿರುವುದು ಮೋದಿ ಅವರ ಕಾಲದಲ್ಲಿ. ಉತ್ತಮ ಆರ್ಥಿಕ ತಜ್ಞರ ಕೈಯಲ್ಲಿ ದೇಶದ ಅಧಿಕಾರ ಸಿಗಬೇಕು ಎಂಬ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮಗೆ ಸಿಕ್ಕಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ್ದರು..

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

author img

By

Published : Oct 2, 2021, 3:58 PM IST

ಬೆಂಗಳೂರು : ರೈತರ ಸಂಕಷ್ಟಕ್ಕೆ ಎಂದೂ ಸ್ಪಂದಿಸದ ಗುಜರಾತ್ ಮೂಲದ ಪ್ರಧಾನಿ ನರೇಂದ್ರ ಮೋದಿ ಅವರು ರೈತಪರ ಹೋರಾಟ ನಡೆಸಿದ್ದ ಮಹಾತ್ಮ ಗಾಂಧೀಜಿ ಅವರನ್ನು ತಮ್ಮವರು ಎಂದು ಬಿಂಬಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ. ಗಾಂಧೀಜಿ ಅವರು ರೈತರಿಗಾಗಿ ಭಾರತದಲ್ಲಿ ತಮ್ಮ ಹೋರಾಟ ಆರಂಭಿಸಿದ್ದರು.

ಆದರೆ, ದೇಶದ ಅನ್ನದಾತ ಕಳೆದ 10 ತಿಂಗಳಿಂದ ಗಾಂಧಿ ಆದರ್ಶವಾದ ಅಹಿಂಸೆ ಮೂಲಕ ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಪ್ರಧಾನಿ ಅವರು ಅವರ ಕಷ್ಟ ಕೇಳುವ ಮನಸ್ಸು ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.

ಈ ಇಬ್ಬರು ಮಹಾನ್ ನಾಯಕರ ಜೀವನ ಹಾದಿ ನಮ್ಮ ಶಕ್ತಿ : ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಅಂಗವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಕೆಶಿ ಅವರು, ಉಭಯ ನಾಯಕ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನಾವೆಲ್ಲರೂ ಇಂದು ಗಾಂಧೀಜಿ ಹಾಗೂ ಶಾಸ್ತ್ರಿ ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಪ್ರತಿಯೊಬ್ಬ ವ್ಯಕ್ತಿಯ ಹುಟ್ಟು ಮತ್ತು ಸಾವಿನ ಮಧ್ಯೆ ಇರುವ ಜೀವನದ ಹಾದಿಯೇ ನಮ್ಮ ಬದುಕಿಗೆ ಉತ್ತರ. ಈ ಇಬ್ಬರು ಮಹಾನ್ ನಾಯಕರ ಜೀವನ ಹಾದಿ ನಮ್ಮ ಶಕ್ತಿ. ಗಾಂಧೀಜಿ ಅವರಿಗೂ ಕರ್ನಾಟಕಕ್ಕೂ ದೊಡ್ಡ ಸಂಬಂಧ ಇದೆ ಎಂದರು.

ಗಾಂಧೀಜಿ ಅವರು 1924ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ಕಾಂಗ್ರೆಸ್ ಮಹಾ ಅಧಿವೇಶನದ ಅಧ್ಯಕ್ಷರಾಗಿದ್ದರು. ಇಂತಹ ಮಹಾನ್ ನಾಯಕರು ಇದ್ದ ಪಕ್ಷದ ಸದಸ್ಯರಾಗಿ ನಾವಿಲ್ಲಿ ಕೂತಿದ್ದೇವೆ. ಇದು ನಮ್ಮ ಸೌಭಾಗ್ಯ ಅಲ್ಲವೇ? ನಮ್ಮ ಪಕ್ಷಕ್ಕಿರುವ ಹಿನ್ನೆಲೆ, ಇತಿಹಾಸವನ್ನು ಹೆಮ್ಮೆಯಿಂದ ಹೇಳಿಕೊಳ್ಳಲು ಬೇರೆ ಪಕ್ಷದವರಿಗೆ ಸಾಧ್ಯವೇ? ಗಾಂಧೀಜಿ ಅವರ ತ್ಯಾಗ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶ ಬದುಕಿನ ಬಗ್ಗೆ ಬೇರೆ ಪಕ್ಷದ ನಾಯಕರು ಹೇಳಿಕೊಳ್ಳಲು ಸಾಧ್ಯವೇ? ಎಂದರು.

ಕಾಂಗ್ರೆಸ್ಸಿಗರಾಗಿ ಗುರುತಿಸಿಕೊಳ್ಳುವುದೇ ಒಂದು ಹೆಮ್ಮೆ: ನಮಗೆ ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ, ನಾವು ಕಾಂಗ್ರೆಸ್ಸಿಗರಾಗಿ ಗುರುತಿಸಿಕೊಳ್ಳುವುದೇ ಒಂದು ಹೆಮ್ಮೆ. ಕಾಂಗ್ರೆಸ್ ಸದಸ್ಯತ್ವವೇ ನಮಗೆ ಪವಿತ್ರ ಸ್ಥಾನ. ಹೀಗಾಗಿ, ನಮ್ಮ ಹಿರಿಯರ ಮಾರ್ಗದರ್ಶನವನ್ನು ನಾವು ಪಾಲಿಸಬೇಕು.

ಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಕಚೇರಿ ನಿರ್ಮಿಲಾಗಿದೆ. ಡಿಸೆಂಬರ್ 28ರ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಇದಕ್ಕೆ ಗಾಂಧಿ ಭವನ ಎಂದು ಹೆಸರಿಡಲು ಚಿಂತನೆ ನಡೆದಿದೆ. ಈ ಬಗ್ಗೆ ಪಕ್ಷದ ಎಲ್ಲ ಹಿರಿಯ ನಾಯಕರೂ ಚರ್ಚಿಸುತ್ತೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಸ್ಮರಣಾರ್ಥ ಈ ತಿಂಗಳು ಗಾಂಧೀಜಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನ ಮಾಡಲಾಗುತ್ತಿದೆ. ನಮ್ಮ ಎಲ್ಲ ನಾಯಕರು 6000 ಪಂಚಾಯತ್, 1800 ವಾರ್ಡ್‌ಗಳಲ್ಲಿ ಒಂದೊಂದು ಸಭೆ ಹಾಗೂ ಪ್ರತಿಭಟನೆ ನಡೆಸಲಿದ್ದಾರೆ. ಇದರಲ್ಲಿ ನಮ್ಮ ಪಕ್ಷದ ಇತಿಹಾಸ ಹಾಗೂ ಹೋರಾಟದ ಹಾದಿ ಸ್ಮರಿಸಲಾಗುತ್ತದೆ. ಗ್ರಾಮ ಸ್ವರಾಜ್ಯ ಗಾಂಧಿ ಅವರ ಕನಸು. ಅದಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಈ ತಿಂಗಳ ಒಳಗಾಗಿ ಕೆಪಿಸಿಸಿ ಸಮಿತಿ ಪುನಾರಚನೆ : ಈ ತಿಂಗಳ ಒಳಗಾಗಿ ಕೆಪಿಸಿಸಿ ಸಮಿತಿ ಪುನಾರಚನೆಯಾಗಲಿದೆ. ಕೆಪಿಸಿಸಿ ಸಮಿತಿ ಜತೆಗೆ ಮತ್ತೊಂದು ಸಮಿತಿ ರೂಪಿಸಲು ರಾಷ್ಟ್ರ ನಾಯಕರು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಕಾರ್ಯಕ್ರಮ ಅನುಷ್ಠಾನಕ್ಕೆ ತರಲು ಈ ಸಮಿತಿಯನ್ನು ರೂಪಿಸಲಾಗುತ್ತಿದೆ. ಹೀಗಾಗಿ, ಪ್ರತಿ ಕಾರ್ಯಕರ್ತ ಪಕ್ಷದ ಕಾರ್ಯಕ್ರಮದ ಬಗ್ಗೆ ಗೌರವ ಇಟ್ಟುಕೊಳ್ಳಬೇಕು.

ಪಕ್ಷ ಸಂಘಟನೆ ಮಾಡಬೇಕು. ದೇಶದಲ್ಲಿ 10 ತಿಂಗಳಿನಿಂದ ರೈತರು ಚಳವಳಿ ನಡೆಸುತ್ತಿದ್ದಾರೆ. ನಮ್ಮ ರೈತರು ಗಾಂಧಿ ಅವರ ತತ್ವ ಆಧರಿಸಿ ಹೋರಾಟ ಮಾಡುತ್ತಿದ್ದಾರೆ. ಅವರ ಕಷ್ಟ ಕೇಳದಿದ್ದರೆ ಅದು ದೇಶದ ಪ್ರತಿಯೊಬ್ಬರ ಸ್ವಾಭಿಮಾನ ಕೆರಳಿಸುವ ವಿಚಾರ. ಇಂತಹ ಪರಿಸ್ಥಿತಿಯಲ್ಲಿ ನಾವು ರೈತರ ಬೆನ್ನಿಗೆ ನಿಲ್ಲುತ್ತೇವೆ ಎಂದರು.

ನಾನು ನಿನ್ನೆ ಸ್ವಗ್ರಾಮಕ್ಕೆ ತೆರಳಿದ್ದೆ. ಅಲ್ಲಿನ ಮಾರುಕಟ್ಟೆ ಸ್ಥಿತಿ ನೋಡಿ ಅಚ್ಚರಿಯಾಯಿತು. ಗೊಬ್ಬರದ ಬೆಲೆ ದುಪ್ಪಟ್ಟಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ರೈತರ ಉತ್ಪನ್ನಗಳಿಗೆ ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಮಾರುಕಟ್ಟೆ ಒದಗಿಸಲಿಲ್ಲ. ರೈತರಿಗೆ ಗುಂಟೆಗೆ 100 ರೂ. ಪರಿಹಾರ ಘೋಷಿಸಿದ್ದು, ಅದನ್ನು ಪಡೆಯಲು ರೈತ ಆನ್‌ಲೈನ್‌ನಲ್ಲಿ ಅರ್ಜಿ ಹಾಕಬೇಕಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಪಕ್ಷ ಹೋರಾಟ ಮಾಡಿದ ಹಾಗೆ, ನೀವು ಮತ್ತೊಂದು ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತಂದು ಜನರ ರಕ್ಷಣೆ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಇಡೀ ದೇಶಕ್ಕೆ ಅಪಾಯ : ಗಾಂಧೀಜಿ ಅವರು ಒಂದು ಮಾತು ಹೇಳಿದ್ದರು, "ನೀನು ನಿನ್ನನ್ನು ಗೆಲ್ಲಬೇಕಾದರೆ, ನಿನ್ನ ಮೆದುಳನ್ನು ಉಪಯೋಗಿಸು. ಬೇರೆಯವರನ್ನು ಗೆಲ್ಲಬೇಕಾದರೆ ಹೃದಯ ಉಪಯೋಗಿಸು" ಎಂದು. ಆ ರೀತಿ ನೀವು ಕೂಡ ಜನರನ್ನು ಸೆಳೆದು ಪಕ್ಷ ಸಂಘಟನೆ ಮಾಡಬೇಕು. ಬಿಜೆಪಿ ಸರ್ಕಾರ ನೂತನ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದೆ.

ಇಡೀ ದೇಶಕ್ಕೆ ಎದುರಾಗಲಿರುವ ದೊಡ್ಡ ಅಪಾಯ ಈ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಡಗಿದೆ. ನಮ್ಮಲ್ಲಿ ಈಗ ಇರುವ ಶಿಕ್ಷಣ ವ್ಯವಸ್ಥೆಯನ್ನು ಇಡೀ ವಿಶ್ವವೇ ಪ್ರಶಂಸಿಸಿದೆ. ನಮ್ಮ ನಾಯಕರು ಜಾಗತೀಕರಣ ಮಾಡಿ, ಅದಕ್ಕೆ ಬೇಕಾದ ರೀತಿ ಶಿಕ್ಷಣ ನೀತಿ ರೂಪಿಸಿ, ಇಡೀ ಜಗತ್ತಿನಲ್ಲಿ ದೇಶ ಸ್ವಾವಲಂಬಿಯಾಗಿ ನಿಲ್ಲುವಂತೆ ಮಾಡಿದೆ ಎಂದರು.

ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವವಿಖ್ಯಾತ ವೈದ್ಯರು, ಎಂಜಿನಿಯರ್, ಪ್ರೊಫೆಸರ್​ಗಳು ತಯಾರಾಗಿದ್ದಾರೆ. ಅಂತಹ ಶಿಕ್ಷಣ ವ್ಯವಸ್ಥೆ ಬಿಟ್ಟು ಪುರಾಣ ಓದುವ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದ್ದಾರೆ. ಈ ನೂತನ ಶಿಕ್ಷಣ ನೀತಿ ಜಾರಿಗೆ ತರಲು ನೇಮಕವಾಗಿರುವ ಸಮಿತಿ ಸದಸ್ಯರನ್ನು ಈ ನೀತಿ ಬಗ್ಗೆ ಕೇಳಿದಾಗ ಅವರಿಗೆ ಈ ಶಿಕ್ಷಣ ನೀತಿ ಅರ್ಥವಾಗಿಲ್ಲವಂತೆ. ನಾನು ಕೂಡ ಶಿಕ್ಷಣ ತಜ್ಞ ಆಗಿದ್ದು, ಇದು ಏನು ಎಂದು ತಿಳಿಯುವ ಪ್ರಯತ್ನ ಮಾಡಿದೆ. ನನಗೂ ಇದು ಅರ್ಥವಾಗಲಿಲ್ಲ ಎಂದರು.

ನೂತನ ಶಿಕ್ಷಣ ನೀತಿ ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಉತ್ತರಪ್ರದೇಶದಲ್ಲಿ ಅನುಷ್ಠಾನವಾಗುತ್ತಿಲ್ಲ. ಆದರೆ, ಕರ್ನಾಟಕದಲ್ಲಿ ಆಗುತ್ತಿದೆ. ಇದು ನಮ್ಮ ಮಕ್ಕಳ ಭವಿಷ್ಯ, ದೇಶದ ಅಡಿಪಾಯದ ವಿಚಾರ. ಈ ವಿಚಾರದಲ್ಲಿ ನಾವು ಚಿಂತನೆ ನಡೆಸಬೇಕಿದೆ. ಚಾಣಕ್ಯ ವಿಶ್ವವಿದ್ಯಾಲಯದ ಹೆಸರಿನಲ್ಲಿ ಮಕ್ಕಳಲ್ಲಿ ಕೋಮುವಾದದ ವಿಷ ಬೀಜ ಬಿತ್ತಲು ಬಿಜೆಪಿ ಸರ್ಕಾರ ಮುಂದಾಗಿದೆ. ಇದಕ್ಕಾಗಿ ದೇವನಹಳ್ಳಿಯಲ್ಲಿ ಎಕರೆಗೆ 10 ಕೋಟಿ ರೂ. ಮೌಲ್ಯ ಇರುವಾಗ, ಪ್ರತಿ ಎಕರೆಗೆ 40 ಲಕ್ಷ ರೂ. ಎಂಬಂತೆ 116 ಎಕರೆಯನ್ನು ಸೆಸ್ ಕಂಪನಿಗೆ ನೀಡಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ದೂರಿದರು.

ದೇಶದ ಆರ್ಥಿಕತೆ ಕುಸಿದಿರುವುದು ಮೋದಿ ಕಾಲದಲ್ಲಿ : ವಿಶ್ವಕಂಡ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್. ಜಗತ್ತಿನ ಪ್ರಬಲ ರಾಷ್ಟ್ರಗಳ ಆರ್ಥಿಕತೆ ಕುಸಿದ ಸಮಯದಲ್ಲೂ ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕತೆ ಕುಸಿಯಲು ಬಿಡಲಿಲ್ಲ. ದೇಶದ ಆರ್ಥಿಕತೆ ಕುಸಿದಿರುವುದು ಮೋದಿ ಅವರ ಕಾಲದಲ್ಲಿ. ಉತ್ತಮ ಆರ್ಥಿಕ ತಜ್ಞರ ಕೈಯಲ್ಲಿ ದೇಶದ ಅಧಿಕಾರ ಸಿಗಬೇಕು ಎಂಬ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮಗೆ ಸಿಕ್ಕಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ್ದರು ಎಂದು ಹೇಳಿದರು.

ಪಕ್ಷ ಸಂಘಟನೆಗೆ ಒತ್ತು ಕೊಡಿ : ಸದ್ಯದಲ್ಲೇ ಎರಡು ಉಪಚುನಾವಣೆ ಬರುತ್ತಿವೆ. ಕೇವಲ ಅದರಲ್ಲಿ ಮಾತ್ರವಲ್ಲ, ನಿಮ್ಮ ಕ್ಷೇತ್ರಗಳಲ್ಲಿ ನೀವೆಲ್ಲರೂ ಪಕ್ಷ ಸಂಘಟನೆಗೆ ಒತ್ತು ಕೊಡಿ. ಸಮಯ ಕೊಡಿ ಸಾಕು. ನಿಮ್ಮನ್ನು ಪಕ್ಷ ಗುರುತಿಸಲಿದೆ. ನಿಮ್ಮ ಬೂತ್ ಜವಾಬ್ದಾರಿ ನೀವೇ ವಹಿಸಿಕೊಳ್ಳಿ, ನೀವು ನಾಯಕರಾಗಿ ಬೆಳೆಯುತ್ತೀರಿ ಎಂದು ಹೇಳಿದರು.

ರಾಷ್ಟ್ರ ಕಂಡ ಅಪರೂಪದ ಧೀಮಂತ ವ್ಯಕ್ತಿತ್ವ ಗಾಂಧಿ : ಸಿದ್ದರಾಮಯ್ಯ

ರಾಷ್ಟ್ರ ಕಂಡ ಅಪರೂಪದ ಹಾಗೂ ಧೀಮಂತ ವ್ಯಕ್ತಿತ್ವ ಮಹಾತ್ಮ ಗಾಂಧಿ ಅವರದು. ದಕ್ಷಿಣ ಆಫ್ರಿಕಾದಲ್ಲಿ ವಕೀಲ ವೃತ್ತಿ ನಡೆಸುವಾಗಲೇ ಅಲ್ಲಿನ ಭಾರತೀಯರ ಮೇಲಾಗುತ್ತಿದ್ದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿ, ಶೋಷಿತರಿಗೆ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾದರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿಂದು ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಮಹಾತ್ಮ ಗಾಂಧಿಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಣೆ ಮಾಡಿದ್ದೇವೆ.

ಈ ಇಬ್ಬರು ಧೀಮಂತ ನಾಯಕರ ತ್ಯಾಗ, ಬಲಿದಾನವನ್ನು ಈ ದಿನ ನಾವು ಸ್ಮರಿಸಬೇಕಾಗುತ್ತದೆ. ಅಂದಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರು ಸ್ವಾತಂತ್ರ್ಯ ಚಳವಳಿಯನ್ನು ಮುನ್ನಡೆಸಲು ಮಹಾತ್ಮ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಮನಗಂಡು ಅವರ ಮನವೊಲಿಸಿ ಭಾರತಕ್ಕೆ ಕರೆತಂದರು ಎಂದು ಹೇಳಿದರು.

ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಅಂತಾರೆ : ಮಹಾತ್ಮ ಗಾಂಧಿಯವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯಲು ಹೇಗೆ ಸಾಧ್ಯ? ಇಂದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿದಿದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ.

ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವವರಿಗೆ ದೇಶದ್ರೋಹದ ಸುಳ್ಳು ಆಪಾದನೆಯಡಿ ಜೈಲಿಗೆ ಅಟ್ಟಲಾಗುತ್ತಿದೆ. ಕಳೆದು ಹತ್ತು ತಿಂಗಳುಗಳಿಂದ ರೈತರು ದೇಶಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ಆರೋಪಿಸಿದರು.

ಈಗಿನ ರಾಜಕಾರಣದಲ್ಲಿ ನೈತಿಕತೆ ಕಣ್ಮರೆ : ಲಾಲ್ ಬಹದ್ದೂರ್ ಶಾಸ್ತ್ರಿ ಅವರು "ಜೈ ಜವಾನ್, ಜೈ ಕಿಸಾನ್" ಎಂಬ ಕರೆ ನೀಡಿದರು. ರೈಲು ದುರಂತ ಸಂಭವಿಸಿದಾಗ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಎಂದರೆ ತಪ್ಪಿಲ್ಲ.

ಈಗಿನ ರಾಜಕಾರಣದಲ್ಲಿ ನೈತಿಕತೆ ಎಂಬುದು ಕಣ್ಮರೆಯಾಗಿದೆ. ಶಾಸ್ತ್ರಿ ಅವರು ಪ್ರಧಾನಿಯಾದ ಮೇಲೆ ಅವರ ಮಗ ಕೆಲಸ ಮಾಡುತ್ತಿದ್ದ ಕಂಪನಿ ಮುಂಬಡ್ತಿ ನೀಡಿತು ಎಂಬ ಕಾರಣಕ್ಕೆ ಕೆಲಸಕ್ಕೆ ರಾಜೀನಾಮೆ ನೀಡುವಂತೆ ಹೇಳಿ, ಕೆಲಸ ಬಿಡುವಂತೆ ಮಾಡಿದ್ದರು. ಇಂತಹ ಪ್ರಾಮಾಣಿಕತೆ ಈಗಿನ ರಾಜಕಾರಣಗಳಲ್ಲಿ ಕಾಣಲು ಸಾಧ್ಯವೇ? ಎಂದರು.

ಬಿಜೆಪಿ ಆಡಳಿತದಲ್ಲಿ ದೇಶ ಸಂಕಷ್ಟ ಎದುರಿಸುತ್ತಿದೆ : ಬಿಜೆಪಿ ಆಡಳಿತದಲ್ಲಿ ದೇಶ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. ಇಂದು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗಾಂಧೀಜಿಯವರ ವಿಚಾರಧಾರೆಗಳು ನಮ್ಮ ಈ ಹೋರಾಟದ ಹಾದಿಗೆ ಬೆಳಕಾಗಲಿ ಎಂದು ಹಾರೈಸುತ್ತೇನೆ.

ಗಾಂಧೀಜಿಯವರನ್ನು ಸಂಪೂರ್ಣವಾಗಿ ಅನುಸರಿಸಲು ಸಾಧ್ಯವಿಲ್ಲದಿದ್ದರೂ, ಅವರ ದಾರಿಯಲ್ಲಿ ಸಾಗುವ ಪ್ರಯತ್ನ ಮಾಡೋಣ. ಇದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂಬುದು ನನ್ನ ಭಾವನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ ಹೆಚ್‌ ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಮತ್ತಿತರ ನಾಯಕರು ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.