ETV Bharat / state

ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆ: ಬಿಬಿಎಂಪಿಯಿಂದ ಪಿಒಪಿ ಮೂರ್ತಿ ನಿಷೇಧ ಸೇರಿ ಹಲವು ರೂಲ್ಸ್ - ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆ

Ganesh Chaturthi 2023: ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

ganesh-festival-celebration-in-bengaluru-many-rules-including-ban-of-pop-idol-by-bbmp
ಬೆಂಗಳೂರಿನಲ್ಲಿ ಗಣೇಶ ಹಬ್ಬ ಆಚರಣೆ: ಬಿಬಿಎಂಪಿಯಿಂದ ಪಿಒಪಿ ಮೂರ್ತಿ ನಿಷೇಧ ಸೇರಿ ಹಲವು ರೂಲ್ಸ್
author img

By ETV Bharat Karnataka Team

Published : Sep 9, 2023, 8:38 PM IST

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಹಾಗೂ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಈ ಕುರಿತು ಶನಿವಾರ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2023ನೇ ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಗಣೇಶ ಮೂರ್ತಿಗಳ ತಯಾರಿಕೆ ಆರಂಭವಾಗಿದ್ದು, ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಿಒಪಿ ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಬೇಕು. ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆ ಸಂಬಂಧ ವಲಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ನಿಮಿತ್ತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಪದ್ಧತಿ ಜಾರಿಗೊಳಿಸಲಾಗಿದೆ. ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳ ಸಮೇತ ಅರ್ಜಿಯನ್ನು ತುಂಬಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯಬಹುದಾಗಿದೆ ಎಂದು ತುಷಾರ್ ಗಿರಿನಾಥ್ ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 1ರಂದು ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು:

  • ಪಾಲಿಕೆಯ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ವಸ್ತುಗಳನ್ನು ಬಳಸಿ, ಗಣೇಶ ಮೂರ್ತಿಯ ತಯಾರಿಕೆಗೆ ಸಂಪೂರ್ಣ ನಿಷೇಧ.
  • ವಶಪಡಿಸಿಕೊಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮ.
  • ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು.
  • ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ನಿಮಜ್ಜನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೆಟ್‌ಗಳಲ್ಲಿ ನಿಮಜ್ಜನ ಮಾಡಿ, ಬರುವ ಮಣ್ಣನ್ನು ಕೈತೊಟ್ಟಿ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸುವುದು.
  • ದೊಡ್ಡ ಗಾತ್ರದ ಮೂರ್ತಿಗಳ ನಿಮಜ್ಜನಕ್ಕೆ ಪಾಲಿಕೆಯ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
  • ನಿಮಜ್ಜನ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿ ನಿಮಜ್ಜನಕ್ಕೆ ಪ್ರತ್ಯೇಕ ತಂಡಗಳನ್ನು ನೇಮಿಸುವುದು ಹಾಗೂ ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿರುವಂತೆ ಸೂಚನೆ.
  • ವಲಯಕ್ಕೆ ಓರ್ವ ಮೇಲುಸ್ತುವಾರಿ ಅಧಿಕಾರಿ ನೇಮಿಸಿ, ಗಣೇಶ ನಿಮಜ್ಜನ ಸಂಬಂಧ ವಾರ್ಡ್​ಗೆ ಒಬ್ಬರಂತೆ ನೋಡಲ್ ಅಧಿಕಾರಿ ನೇಮಿಸಲು ಸೂಚನೆ.
  • ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಲು ಸೂಚನೆ.
  • ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುವುದು ಹಾಗೂ ಬಿಬಿಎಂಪಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸುವ ಷರತ್ತುಗಳನ್ನು ಒಳಪಡಿಸಿ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲು ಕ್ರಮ.

ಇದನ್ನೂ ಓದಿ: ಬೆಂಗಳೂರಲ್ಲಿ ಗಣೇಶನ ಪ್ರತಿಷ್ಠಾಪನೆ ಅನುಮತಿಗೆ 63 ಸಬ್ ಡಿವಿಜನ್ ಕಚೇರಿ: ಫ್ಲೆಕ್ಸ್, ಬ್ಯಾನರ್ ನಿಷೇಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.