ETV Bharat / state

ವಿಚ್ಛಿದ್ರಕಾರಿ ದುಷ್ಟಶಕ್ತಿಗಳನ್ನು ನಿಗ್ರಹಿಸಲು ಕಠಿಣ ಕ್ರಮಕೈಗೊಳ್ಳಿ : ಕ್ಯಾ ಗಣೇಶ್ ಕಾರ್ಣಿಕ್ - ಎಂಇಎಸ್​ಬಗ್ಗೆ ಗಣೇಶ್ ಕಾರ್ಣಿಕ್ ಪ್ರತಿಕ್ರಿಯೆ

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ದೇಶಕ್ಕೆ ಅಪಾಯ. ಅದು ವಿರೋಧ ಪಕ್ಷವಾಗಿದ್ದರೆ ದೇಶಕ್ಕೆ ಎರಡು ಪಟ್ಟು ಹೆಚ್ಚು ಅಪಾಯಕಾರಿಯಾಗಿರುತ್ತದೆ ಎನ್ನುವುದನ್ನು ನಾಡಿನ ಜನತೆ ಗಮನಿಸಬೇಕು ಎಂದು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು..

Ganesh Karnik comment on MES
ಕ್ಯಾ ಗಣೇಶ್ ಕಾರ್ಣಿಕ್
author img

By

Published : Dec 19, 2021, 9:05 PM IST

ಬೆಂಗಳೂರು : ಶಿವಾಜಿನಗರದಲ್ಲಿ ರಾಷ್ಟ್ರಭಕ್ತ ಮಹಾಪುರುಷರ ಪುತ್ಥಳಿಗೆ ಮಸಿ ಬಳಿದು ಅವಮಾನಗೊಳಿಸುವ ಮೂಲಕ ಹಿಂಸಾಚಾರಕ್ಕೆ ಆಸ್ಪದ ಕೊಟ್ಟು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ವಿನಾಃಕಾರಣ ಆತಂಕವನ್ನು ಸೃಷ್ಟಿಸಿರುವ ವಿಚ್ಛಿದ್ರಕಾರಿ ದುಷ್ಟಶಕ್ತಿಗಳನ್ನು ಮತ್ತು ಈ ಘಟನೆಗಳ ಹಿಂದಿರುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ಥಳಿಗೆ ಮಸಿ ಬಳಿದು ಬಂಧಿತರಾಗಿರುವ ಏಳು ವ್ಯಕ್ತಿಗಳನ್ನು ವಿಚಾರಿಸಿ ಈ ರೀತಿಯ ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಚಟುವಟಿಕೆಗಳ ಹಿಂದೆ ಇರುವ ಷಡ್ಯಂತ್ರವನ್ನು ಪತ್ತೆ ಹಚ್ಚುವುದು ಅತ್ಯಂತ ಜರೂರು ಮತ್ತು ಅನಿವಾರ್ಯವಾಗಿದೆ. ಸಮಾಜದ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಈ ಷಡ್ಯಂತ್ರ ಒಂದು ಖಂಡನಾರ್ಹ ಬೆಳವಣಿಗೆ ಎಂದು ಪತ್ರಿಕಾ ಹೇಳಿಕೆ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ಬಂಧಿತ ಆರೋಪಿ ನವೀನ್ ಗೌಡ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಸನ್ಮಾನ್ಯ ಡಿ ಕೆ ಶಿವಕುಮಾರ್ ಮತ್ತು ಶ್ರೀ ಜಮೀರ್ ಅಹಮದ್ ಅವರ ನಿಕಟವರ್ತಿಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತನಾಗಿರುತ್ತಾನೆ. ನವೀನ್ ಗೌಡನ ಕಾಂಗ್ರೆಸ್ ಜೊತೆಗಿನ ನಂಟು ಹಾಗೂ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯರವರ ಕೋಮುಗಲಭೆಯ ಟ್ವೀಟ್ ಈ ಘಟನೆಗಳ ಹಿಂದೆ ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಿ ಕ್ಷೋಭೆಯ ವಾತಾವರಣ ನಿರ್ಮಾಣ ಮಾಡುವ ಕಾಂಗ್ರೆಸ್​ನ ಷಡ್ಯಂತ್ರದ ಭಾಗವಾಗಿರುವುದು ಕಂಡು ಬರುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಕಾಂಗ್ರೆಸ್, ಎನ್‍ಸಿಪಿ ಮತ್ತು ಶಿವಸೇನೆಯ ಆಡಳಿತವಿರುವ ಮಹಾರಾಷ್ಟ್ರದಲ್ಲಿ ದುಷ್ಟ ಶಕ್ತಿಗಳು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನಗೊಳಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ದೇಶಕ್ಕೆ ಅಪಾಯ. ಅದು ವಿರೋಧ ಪಕ್ಷವಾಗಿದ್ದರೆ ದೇಶಕ್ಕೆ ಎರಡು ಪಟ್ಟು ಹೆಚ್ಚು ಅಪಾಯಕಾರಿಯಾಗಿರುತ್ತದೆ ಎನ್ನುವುದನ್ನು ನಾಡಿನ ಜನತೆ ಗಮನಿಸಬೇಕು ಎಂದು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.