ETV Bharat / state

ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾದ ಇನ್ಸ್‌ಪೆಕ್ಟರ್: ಮೂರು ತಿಂಗಳಿನಿಂದ ಜೀವನ್ಮರಣದ ಹೋರಾಟ - ETV Bharath Kannada news

ಗಾಂಜಾ ಮೂಲ ಭೇದಿಸಲು ತೆರಳಿದ್ದ ಕರ್ನಾಟಕ‌ ಪೊಲೀಸರ ಮೇಲೆ ಮಹಾರಾಷ್ಟ್ರದ ಗಾಂಜಾ ದಂಧೆಕೋರರು ದಾಳಿ ಮಾಡಿದ್ದರು. ಈ ದಾಳಿಯಲ್ಲಿ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಗಂಭೀರ ಗಾಯಗೊಂಡಿದ್ದರು.

srimanth_illal
ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್
author img

By

Published : Dec 17, 2022, 1:36 PM IST

Updated : Dec 17, 2022, 1:47 PM IST

ಬೆಂಗಳೂರು: ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಇನ್ನೂ ಸಹ ಚೇತರಿಕೆ ಕಂಡಿಲ್ಲ. ಮೂರು ತಿಂಗಳಿನಿಂದಲೂ ಓಲ್ಡ್‌ ಏರ್ಪೋರ್ಟ್ ರಸ್ತೆಯ ಖಾಸಗಿ ಅಸ್ಪತ್ರೆಯ ಐಸಿಯುನಲ್ಲಿ ಶ್ರೀಮಂತ ಇಲ್ಲಾಳ್​ಗೆ ಚಿಕಿತ್ಸೆ ಮುಂದುವರೆದಿದ್ದು ಅರೆ ಪ್ರಜ್ಞಾವಸ್ಥೆಯಲ್ಲಿದ್ದಾರೆ.

ಮೆದುಳು ಭಾಗದಲ್ಲಿ ಹೆಚ್ಚಿನ ಗಾಯವಾಗಿರುವುದರಿಂದ ನಿನ್ನೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಈವರೆಗೆ ಒಟ್ಟು ನಾಲ್ಕು ಸರ್ಜರಿ ಮಾಡಲಾಗಿದೆ. ಕಲಬುರಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಕಳೆದ ಸೆಪ್ಟೆಂಬರ್​ನಲ್ಲಿ ಪ್ರಕರಣವೊಂದರ ಆರೋಪಿಗಳ ಬಂಧನಕ್ಕೆ ಮಹಾರಾಷ್ಟ್ರಕ್ಕೆ ತೆರಳಿದ್ದಾಗ ಅವರ ಮೇಲೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ganja-gang-attack-on-karnataka-police-inspector-health-condition-is-critical
ಗಾಂಜಾ ದಂಧೆಕೋರರು ದಾಳಿಗೋಳಗಾದ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸುತ್ತಿದ್ದ ಶ್ರೀಮಂತ ಇಲ್ಲಾಳ್​ರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ಹಿಂದೆ ಇನ್ಸ್‌ಪೆಕ್ಟರ್ ಆರೋಗ್ಯದಲ್ಲಿ ಅಲ್ಪ ಸ್ವಲ್ಪ ಸುಧಾರಣೆ ಕಂಡು ಬಂದಿತ್ತಾದರೂ ಮೆದುಳು ಬಳಿ ಗಾಯವಾಗಿದ್ದರಿಂದ ಹೆಚ್ಚಿನ ನಿಗಾ ವಹಿಸಿ ಮತ್ತೊಂದು ಅಗತ್ಯ ಶಸ್ತ್ರಚಿಕಿತ್ಸೆ ಮುಂದುವರೆಸಲಾಗಿದೆ.

ಇದನ್ನೂ ಓದಿ: ಕರ್ನಾಟಕ‌ ಪೊಲೀಸರ ಮೇಲೆ ಮಹಾರಾಷ್ಟ್ರ ಗಾಂಜಾ ದಂಧೆಕೋರರ ದಾಳಿ: 40ಕ್ಕೂ ಅಧಿಕ ಮಂದಿ ವಿರುದ್ಧ ಕೇಸ್

Last Updated : Dec 17, 2022, 1:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.