ETV Bharat / state

ಕೋರಮಂಗಲ ಪೊಲೀಸರ ಕಾರ್ಯಾಚರಣೆ: 141 ಕೆಜಿ ಗಾಂಜಾ ವಶ, ಇಬ್ಬರ ಬಂಧನ

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈಚರ್ ವಾಹನದಲ್ಲಿ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

Drug mafia
ಪೊಲೀಸರ ಕಾರ್ಯಾಚರಣೆ
author img

By

Published : Apr 14, 2021, 1:45 PM IST

ಬೆಂಗಳೂರು: ಕೋರಮಂಗಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಗಾಂಜಾ ಮಾರಾಟ ಜಾಲ ಭೇದಿಸಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈಚರ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವುದಾಗಿ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಕೋರಮಂಗಲ ಒಂದನೇ ಬ್ಲಾಕ್ ಬಳ್ಳಾರಿ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ದಿಢೀರ್​ ದಾಳಿ ನಡೆಸಿದ್ದಾರೆ.

ಚಡ್ಡಾ ಕೃಷ್ಣನ್ (22) ಮೂರ್ತಿ(40) ಬಂಧಿತರಾಗಿದ್ದು, ಆರೋಪಿಗಳಿಂದ 84.6 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ಈಚರ್ ವಾಹನ, 1 ಲಾಂಗ್, 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.

ಹೊರ ರಾಜ್ಯದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಮತ್ತು ಆರೋಪಿಗಳ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿರುವ ವಿಭಾಗದ ಡಿಸಿಪಿ, ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.