ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ಕೋವಿಡ್ ಲಸಿಕೆ ಪಡೆಯಲು ಅರ್ಹರಾಗಿದ್ದು, ಇಂದಿನಿಂದ https://www.cowin.gov.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪಾಲಿಕೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ 3ನೇ ಹಂತದ ವ್ಯಾಕ್ಸಿನೇಷನ್ ನೀಡುವ ಸಂಬಂಧ ಮಾಡಿಕೊಳ್ಳಬೇಕಿರುವ ಸಿದ್ಧತೆಗಳ ಕುರಿತು ನಡೆದ ವರ್ಚುವಲ್ ಸಭೆಯಲ್ಲಿ ಆಯುಕ್ತರು ಮಾತನಾಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲು ತಿಳಿಸಿದೆ.
ಇದನ್ನೂ ಓದಿ: ಮಂಜುನಾಥ್ ಪ್ರಸಾದ್ ಅವರಿಗೆ ಮತ್ತೆ ಬಿಬಿಎಂಪಿ ಕೋವಿಡ್ ನಿರ್ವಹಣೆ ಹೊಣೆ
ಅದರಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂದಿನಂತೆ ಉಚಿತವಾಗಿ ಲಸಿಕೆ ನಿಡಲು ರಾಜ್ಯ ಸರ್ಕಾರ ತಿಳಿಸಿದ್ದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ-ಪಾಲಿಕೆಯಿಂದ ಲಸಿಕೆಯನ್ನು ಪೂರೈಸುವುದಿಲ್ಲ. ನೇರವಾಗಿ ಸಂಸ್ಥೆಗಳಿಂದಲೇ ಲಸಿಕೆಯನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ದರವನ್ನು ನಿಗದಿಪಡಿಸಲಿದೆ. ಈ ಸಂಬಂಧ ಖಾಸಗಿ ಆಸ್ಪತ್ರೆಗಳು ಸಮನ್ವಯದಿಂದ ವ್ಯವಸ್ಥಿತವಾಗಿ ಲಸಿಕೆ ಹಾಕಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.