ಬೆಂಗಳೂರು: ಬೆಂಗಳೂರು ಅಭಿವೃದ್ಧಿಯ ಹಿನ್ನೆಲೆ ಬಜೆಟ್ ಕುರಿತು ರೂಪು -ರೇಷೆಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗುಪ್ತ, ಬಿಬಿಎಂಪಿ ಬಜೆಟ್ ಮಂಡಿಸಲು ಸಿದ್ಧರಾಗಿದ್ದೇವೆ. ಇದಕ್ಕಾಗಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಜತೆಗೆ ರಾಜ್ಯ ಸರ್ಕಾರದ ಬಜೆಟ್ ಅನ್ನು ಪರಿಗಣಿಸಿ ಎಲ್ಲ ಆದಾಯಗಳನ್ನು ಶೇಖರಿಸಿ ಉತ್ತಮ ಬಜೆಟ್ ಜನರಿಗೆ ನೀಡಲಾಗುವುದು ಎಂದು ಹೇಳಿದರು.
ಹೊಸ ಯೋಜನೆ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುವುದು. ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು ಎಂದು ನುಡಿದರು.
ಓದಿ: Srinagar Encounter: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಮಕ್ಕಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಮತ್ತಷ್ಟು ಹೆಚ್ಚಳ: ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಳವಾಗಿದ್ದು, ಮಕ್ಕಳಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದರು.
ಅಕ್ರಮ ಕಟ್ಟಡಗಳ ತೆರವಿಗೆ ಈಗ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ: ಅಕ್ರಮ ಕಟ್ಟಡಗಳ ತೆರವು ವಿಚಾರಣೆ ಹೈಕೋರ್ಟ್ ನಲ್ಲಿದೆ. ಹಾಗಾಗಿ, ಬಿಬಿಎಂಪಿ ಈಗ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಆದರೆ, ನಾವು ಯಾವುದೇ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯುವುದಿಲ್ಲ. ಇಂದಿರಾ ಕ್ಯಾಂಟೀನ್ ಗುಣಮಟ್ಟವನ್ನು ಹೆಚ್ಚಾಳ ಮಾಡಲಾಗುವುದು ಎಂದರು.