ETV Bharat / state

ಬಿಬಿಎಂಪಿಗೆ ನೂತನ ಸಾರಥಿ: ಮುಖ್ಯ ಆಯುಕ್ತರಾಗಿ ಗೌರವ್​ ಗುಪ್ತಾ ಪದಗ್ರಹಣ

ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಆಯ್ಕೆಯಾದ ಗೌರವ್ ಗುಪ್ತಾಗೆ ಮಾಜಿ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್​​ ಅಧಿಕಾರವನ್ನು ಹಸ್ತಾಂತರಿಸಿದರು.

Gaurav Gupta takes over as new Chief Commissioner of BBMP,  BBMP new Chief Commissioner,  BBMP new Chief Commissioner Gaurav Gupta,  BBMP new Chief Commissioner news,  BBMP new Chief Commissioner latest news,  ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಗೌರವ್ ಗುಪ್ತಾ ಆಧಿಕಾರ ಸ್ವೀಕಾರ,  ಬಿಬಿಎಂಪಿ ಮುಖ್ಯ ಆಯುಕ್ತ,  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ,  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿ,  ಬಿಬಿಎಂಪಿ ಮುಖ್ಯ ಆಯುಕ್ತ,  ಬಿಬಿಎಂಪಿ ಮುಖ್ಯ ಆಯುಕ್ತ ಸುದ್ದಿ,
ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಗೌರವ್​ ಗುಪ್ತಾ
author img

By

Published : Apr 1, 2021, 2:45 PM IST

ಬೆಂಗಳೂರು: ಕೋವಿಡ್ ತುರ್ತು ಪರಿಸ್ಥಿತಿಯಂತಹ ಸಂದರ್ಭದಲ್ಲೇ ಬಿಬಿಎಂಪಿ ಆಡಳಿತದಲ್ಲಿ ಮಹತ್ತರ ಬದಲಾವಣೆಗಳಾಗಿದ್ದು, ಮುಖ್ಯ ಆಯುಕ್ತರಾಗಿ ಗೌರವ್ ಗುಪ್ತಾ ಅಧಿಕಾರ ಸ್ವೀಕರಿಸಿದರು. ಮಂಜುನಾಥ್ ಪ್ರಸಾದ್ ಅಧಿಕಾರ ಹಸ್ತಾಂತರಿಸುವ ಮೂಲಕ ಕಂದಾಯ ಇಲಾಖೆಗೆ ವರ್ಗಾವಣೆಯಾಗಿದ್ದಾರೆ.

ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಗೌರವ್​ ಗುಪ್ತಾ

ಅಲ್ಲದೆ ಚುನಾಯಿತ ಜನಪ್ರತಿನಿಧಿಗಳು ಅಧಿಕಾರದಲ್ಲಿರದ ಕಾರಣ, ಆಡಳಿತಗಾರರ ಆಡಳಿತ ಪಾಲಿಕೆಯಲ್ಲಿ ಮುಂದುವರಿದಿದ್ದು, ನೂತನ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್ ಸಹ ಇಂದು ಅಧಿಕಾರ ಸ್ವೀಕರಿಸಿದರು.

ಗೌರವ್​ ಗುಪ್ತಾ ಅಧಿಕಾರ ಸ್ವೀಕಾರ​:

ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ನನ್ನನ್ನು ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ನೇಮಿಸಿ ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದಾರೆ. ಪಾಲಿಕೆಗೆ ಬರುವ ಎಲ್ಲಾ ರೀತಿಯ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು ಎಂದರು.

Gaurav Gupta takes over as new Chief Commissioner of BBMP,  BBMP new Chief Commissioner,  BBMP new Chief Commissioner Gaurav Gupta,  BBMP new Chief Commissioner news,  BBMP new Chief Commissioner latest news,  ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಗೌರವ್ ಗುಪ್ತಾ ಆಧಿಕಾರ ಸ್ವೀಕಾರ,  ಬಿಬಿಎಂಪಿ ಮುಖ್ಯ ಆಯುಕ್ತ,  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ,  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿ,  ಬಿಬಿಎಂಪಿ ಮುಖ್ಯ ಆಯುಕ್ತ,  ಬಿಬಿಎಂಪಿ ಮುಖ್ಯ ಆಯುಕ್ತ ಸುದ್ದಿ,
ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಗೌರವ್​ ಗುಪ್ತಾ

ಕಳೆದ 6-7 ತಿಂಗಳಲ್ಲಿ ನಗರದಲ್ಲಿರುವ ಸಮಸ್ಯೆಗಳನ್ನು ಹತ್ತಿರದಿಂದ ನೋಡಿದ್ದೇನೆ. ನಗರದಲ್ಲಿ ಕೋವಿಡ್ ಸೋಂಕು ಕ್ರಮೇಣ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದು, ಸಭೆ/ಸಮಾರಂಭಗಳಿಗೆ ಹೋಗುವುದನ್ನು ಕಡಿಮೆ ಮಾಡಬೇಕು ಎಂದರು.

ಈಗಾಗಲೇ ಜಾತ್ರೆ, ಸಮಾರಂಭಗಳು ನಡೆಸುವುದನ್ನು ಸರ್ಕಾರ ಮಿತಿಗೊಳಿಸಿದೆ. ಮುಂದೆ ಇನ್ನೂ ಕಟ್ಟುನಿಟ್ಟಿನ ಕ್ರಮ ಕೈಗೊಂಡು ನಿಯಂತ್ರಣಕ್ಕೆ ತರಲಾಗುವುದು. ಪಾಲಿಕೆಯಲ್ಲಿರುವ ಕಾರ್ಯತಂತ್ರವನ್ನು ಈಗಾಗಲೇ ಸಕ್ರಿಯಗೊಳಿಸಲಾಗಿದ್ದು, ಎಲ್ಲರೂ ಕ್ರಿಯಾಶೀಲರಾಗಿದ್ದಾರೆ. ಆಡಳಿತವನ್ನು ಇನ್ನಷ್ಟು ಚುರುಕುಗೊಳಿಸಿ ಕಾರ್ಯನಿರ್ವಹಿಸಲಾಗುವುದು ಎಂದರು.

ಮಂಜುನಾಥ್​ ಪ್ರಸಾದ್​ ಹೇಳಿದ್ದೇನು?

ಅಧಿಕಾರ ಹಸ್ತಾಂತರದ ಬಳಿಕ ನಿಕಟಪೂರ್ವ ಆಯುಕ್ತರಾದ ಎನ್. ಮಂಜುನಾಥ್ ಪ್ರಸಾದ್ ಮಾತನಾಡಿ, ನಗರದಲ್ಲಿ ಡಿಸೆಂಬರ್ ತಿಂಗಳಲ್ಲಿ 600 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕಡಿಮೆಯಾಗಿದ್ದ ಕೋವಿಡ್ ಪ್ರಕರಣಗಳು ಮಾರ್ಚ್ ತಿಂಗಳಲ್ಲಿ ಕೇರಳ, ಮಹಾರಾಷ್ಟ್ರದಲ್ಲಿ ಎರಡನೇ ಅಲೆ ಪ್ರಾರಂಭವಾಯಿತು. ಅನೇಕ ಮದುವೆ ಸಮಾರಂಭಗಳು, ಪ್ರತಿಭಟನೆ, ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುವ ಕಾರಣ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.

ನಗರದಲ್ಲಿ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಿ, ಸೋಂಕಿತರನ್ನು ಐಸೋಲೇಟ್​ ಮಾಡಲಾಗುತ್ತಿದೆ. ಅಲ್ಲದೆ, ಅವರ ಸಂಪರ್ಕಿತರನ್ನು ಸಹ ಪತ್ತೆ ಹಚ್ಚಲಾಗುತ್ತಿದೆ. ಇದರಿಂದ ಕೋವಿಡ್ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಲಿದೆ. ಕೋವಿಡ್ ಸೋಂಕು 20 ರಿಂದ 40 ವರ್ಷದೊಳಗಿರುವವರಿಗೆ ಪತ್ತೆಯಾಗುತ್ತಿದೆ. ಮರಣ ಪ್ರಮಾಣ ತೀರಾ ಕಡಿಮೆಯಿದ್ದು, 60 ವರ್ಷ ಮೇಲ್ಪಟ್ಟವರು ಮಾತ್ರ ಮೃತಪಡುತ್ತಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಬುಧವಾರ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಸಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಕರಣ ಹೆಚ್ಚಾಗುತ್ತಿದ್ದು, ಮುಂದಿನ ಒಂದು ವಾರದಲ್ಲಿ ಶೇ. 10ರಷ್ಟು ಹಾಸಿಗೆ ಮೀಸಲಿಡಲು ಸೂಚಿಸಲಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ಹರಡುವುದನ್ನು ನೋಡಿಕೊಂಡು ಹಾಸಿಗೆ ಸಾಮರ್ಥ್ಯವನ್ನು ಹಂತ ಹಂತವಾಗಿ ಮೀಸಲಿಡಲು ತಿಳಿಸಲಾಗಿದೆ ಎಂದರು.

ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಐಟಿ ಸಂಸ್ಥೆ ಹಾಗೂ ಇನ್ನಿತರ ಉಪ ಕೇಂದ್ರಗಳಲ್ಲಿಯೂ ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಟೀಂ ವರ್ಕ್​ ಮುಖ್ಯ...

ಆಡಳಿತಗಾರರಾಗಿ ಅಧಿಕಾರ ಸ್ವೀಕರಿಸಿದ ರಾಕೇಶ್ ಸಿಂಗ್ ಮಾತನಾಡಿ, ಬಿಬಿಎಂಪಿಗೆ ಮುಂದೆ ಮಾನ್ಸೂನ್ ಹಾಗೂ ಕೋವಿಡ್ ಎರಡು ದೊಡ್ಡ ಸವಾಲುಗಳಿವೆ. ಎಲ್ಲರೂ ಜೊತೆಯಾಗಿ, ಟೀಂ ವರ್ಕ್ ಮಾಡಿ, ಸವಾಲು ಎದುರಿಸುತ್ತೇವೆ ಎಂದು ಹೇಳಿದರು.

ಈ ವೇಳೆ ವಲಯ ಆಯುಕ್ತರಾದ ಡಿ.ರಂದೀಪ್, ರಾಜೇಂದ್ರ ಚೋಳನ್, ಮನೋಜ್ ಜೈನ್, ರೆಡ್ಡಿ ಶಂಕರ ಬಾಬು, ಬಸವರಾಜು, ತುಳಸಿ ಮದ್ದಿನೇನಿ, ರವೀಂದ್ರ ಹಾಗೂ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.