ETV Bharat / state

ಗೌರಿ ಹತ್ಯೆ ಆರೋಪಿ ಅಮೋಲ್ ಕಾಳೆ ಆರೋಗ್ಯವಾಗಿದ್ದಾನೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

author img

By

Published : Sep 30, 2020, 3:29 PM IST

ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ಆರೋಗ್ಯವಾಗಿ ಮತ್ತು ಸದೃಢವಾಗಿದ್ದಾನೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ಮಾಹಿತಿ ನೀಡಿದೆ.

Gauri murder case accused Amol kaale is healthy: High Court
ಗೌರಿ ಹತ್ಯೆ ಆರೋಪಿ ಅಮೋಲ್ ಕಾಳೆ ಆರೋಗ್ಯವಾಗಿದ್ದಾನೆ : ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ಆರೋಗ್ಯವಾಗಿ ಮತ್ತು ಸದೃಢವಾಗಿದ್ದಾನೆ ಎಂದು ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

ಜೈಲುಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ಚಿಕಿತ್ಸೆ ಕೂಡ ನೀಡುತ್ತಿಲ್ಲ ಎಂದು ಆರೋಪಿಸಿ ಮೈಸೂರಿನ ಕಾರಾಗೃಹದಲ್ಲಿರುವ ಗೌರಿ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ವಿಚಾರಣಾಧೀನ ಕೈದಿ ಅಮೋಲ್ ಕಾಳೆ ಆರೋಗ್ಯವಾಗಿ ಮತ್ತು ಸದೃಢವಾಗಿದ್ದಾನೆ. ಈವರೆಗೆ ಆತನಿಗೆ ಯಾವುದೇ ಅನಾರೋಗ್ಯ ಕಾಣಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದರು. ಜತೆಗೆ ಈ ಹಿಂದೆ ನಡೆಸಿದ್ದ ಆರೋಗ್ಯ ತಪಾಸಣೆಯ ವರದಿ ಸಲ್ಲಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರಾದ ಅಮೃತೇಶ್ ಆಕ್ಷೇಪಿಸಿ, ಆರೋಗ್ಯ ತಪಾಸಣೆ ನಡೆಸಿರುವ ವರದಿ ಹಿಂದಿನ ವರ್ಷದ್ದು. ಜತೆಗೆ ಜೈಲಿನ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿಯೇ ಅರ್ಜಿದಾರ ಅಮೋಲ್ ಕಾಳೆಗೆ ಪಿಐಎಲ್ ಅರ್ಜಿ ಹಿಂಪಡೆಯುವಂತೆ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ವಾದ ಆಲಿಸಿದ ಪೀಠ, ಅಮೋಲ್ ಕಾಳೆಗೆ ಹೊಸದಾಗಿ ವೈದ್ಯಕೀಯ ಪರೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಜೈಲು ಪ್ರಾಧಿಕಾರಕ್ಕೆ ಸೂಚಿಸಿತಲ್ಲದೇ, ಜೈಲಿನಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿತು.

ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್ ಗೆ ಮಾಹಿತಿ ನೀಡಿದ್ದ ರಾಜ್ಯ ಸರ್ಕಾರ, ರಾಜ್ಯದ 47 ಜೈಲುಗಳಲ್ಲಿ 668 ಮಂದಿ ಕೈದಿಗಳಿಗೆ ಕೊರೊನಾ ಸೋಂಕು ತಗುಲಿದ್ದು, 585 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಪ್ರಸ್ತುತ 83 ಕೈದಿಗಳಿಗೆ ಕೊರೊನಾ ಸೋಂಕು ಇದ್ದು. ಎಲ್ಲರಿಗೂ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೆಯೇ ಜೈಲುಗಳಲ್ಲಿ ಕೈದಿಗಳ ದಟ್ಟಣೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.