ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಎಚ್.ಎಸ್. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ.
ಪತ್ರಕರ್ತೆ ಗೌರಿಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಗಳಲ್ಲಿ ಕೋರ್ಟ್‌ನಲ್ಲಿ ವಾದ ನಡೆಸಲು ಹಿರಿಯ ವಕೀಲ ಚಂದ್ರಮೌಳಿ ಅವರನ್ನು ಸರ್ಕಾರ ನೇಮಕ ಮಾಡಿದೆ.

ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೌರಿ ಹತ್ಯೆ ಹಾಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಲಬುರ್ಗಿ ಹತ್ಯೆ ನಡೆದಿತ್ತು.
ಹತ್ಯೆಯಾದ ಇಬ್ಬರು ಕೂಡ ಹಿಂದುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಆರೋಪಿಗಳು ಆಕ್ರೋಶಗೊಂಡು ಹತ್ಯೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿತ್ತು.