ETV Bharat / state

ಸುರಕ್ಷಿತ ಕ್ಷೇತ್ರ ಹುಡುಕುವ ಬದಲು ನಿವೃತ್ತಿ ಘೋಷಿಸಿ: ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ - ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್

ಓಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್‌ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯಗೆ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ. ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೋ? ಎಂದು ಬಿಜೆಪಿ ಟ್ವೀಟ್​ ಮಾಡಿದೆ.

Bjp tweet to Siddaramaiah
ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್
author img

By

Published : Jun 29, 2022, 7:48 PM IST

ಬೆಂಗಳೂರು: ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ ಹೀಗೆ ಮುಂದಿನ ಚುನಾವಣೆಗೆ ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೋ? ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ? ಎಂದು ಟ್ವೀಟ್​ ಮೂಲಕ ಬಿಜೆಪಿ ಟಾಂಗ್ ನೀಡಿದೆ.

ಸಿದ್ದುಟೂರಿಂಗ್‌ಟಾಕೀಸ್ ಹ್ಯಾಷ್ ಟ್ಯಾಗ್ ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಪ್ರತಿ ಬಾರಿಯೂ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುವುದರ ಅರ್ಥವೇ ಬೇರೆಯಿದೆ. ಒಮ್ಮೆ ವರುಣ, ಮತ್ತೊಮ್ಮೆ ಚಾಮುಂಡೇಶ್ವರಿ, ಮಗದೊಮ್ಮೆ ಬಾದಾಮಿ ಈ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಕೊನೆಯ ಚುನಾವಣೆ ಎಂಬ ಅರ್ಥದಲ್ಲಿ ಸಿದ್ದರಾಮಯ್ಯ ಹೇಳುತ್ತಿರುವುದು, ರಾಜಕೀಯ ನಿವೃತ್ತಿಯ ಕೊನೆಯ ಚುನಾವಣೆಯೆಂದಲ್ಲ ಎಂದು ಸಿದ್ದರಾಮಯ್ಯರ ನಿವೃತ್ತಿ ಹೇಳಿಕೆ ಕುರಿತು ಬಿಜೆಪಿ ವ್ಯಂಗ್ಯವಾಡಿದೆ‌.

ಸರ್ಕಾರಿ ನೌಕರರಲ್ಲದಿದ್ದರೂ ಸಿದ್ದು ವರ್ಗಾವಣೆ: ಸಿದ್ದರಾಮಯ್ಯ ಸರ್ಕಾರಿ ನೌಕರರಲ್ಲ, ಆದರೂ ವರ್ಗಾವಣೆಯಾಗುತ್ತಲೇ ಇದ್ದಾರೆ. ಅಧಿಕಾರದ ಮೋಹಕ್ಕಾಗಿ, ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಅವರೇ, ಸ್ಪರ್ಧಿಸಲು ಒಂದು ಕ್ಷೇತ್ರ ಸಿಗುತ್ತಿಲ್ಲವೆಂದಾದರೇ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದರ್ಥವಲ್ಲವೇ?. ಬಾದಾಮಿ ಕ್ಷೇತ್ರಕ್ಕೆ ಹೋಗಿ ಬರಲು ವಯಸ್ಸಿನ ಸಮಸ್ಯೆ ಕಾಡುತ್ತದೆ. ಆದರೆ ಮುಖ್ಯಮಂತ್ರಿಯಾಗಲು ಯಾವುದೇ ಸಮಸ್ಯೆ ಕಾಡುವುದಿಲ್ಲ. ವಿಪರ್ಯಾಸವಲ್ಲದೆ ಮತ್ತೇನು? ಓಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್‌ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಹಿಂದೂ ಕಾರ್ಯಕರ್ತರ ರಕ್ಷಣೆಗೆ ಸಂವಿಧಾನ ತಿದ್ದುಪಡಿ ಅಗತ್ಯವಿದೆ: ಕೆ.ಎಸ್.ಈಶ್ವರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.